ಸೆಪ್ಟೆಂಬರ್ 26 ದಿನ ಭವಿಷ್ಯ: ಮಂಗಳವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 26ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ತಿಥಿ: ದ್ವಾದಶಿ
ನಕ್ಷತ್ರ: ಬೆಳಗ್ಗೆ 09:42ರವರೆಗೆ ಶ್ರಾವಣ ನಂತರ ಧನಿಷ್ಠ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ: ಮಧ್ಯಾಹ್ನ 03:13ರಿಂದ 04:44ರವರೆಗೆ

Dina Bhavishya

ಮೇಷ ರಾಶಿ
ಮನೆಯಲ್ಲಿ ವಯಸ್ಸಾದವರು ಇದ್ದರೆ ಅವರ ಆರೋಗ್ಯದ ಕಡೆಗೆ ಗಮನಹರಿಸಿ. ಇಂದು ಅಧಿಕ ಕೆಲಸದಿಂದ ಆಯಾಸ ಉಂಟಾಗಬಹುದು. ನೀವು ತಾಜಾವಾಗಿರಲು ಸಾಕಷ್ಟು ಸಮಯವನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಬೆಳಗ್ಗೆ 10:10 ರಿಂದ ಮಧ್ಯಾಹ್ನ 12 ರವರೆಗೆ

ವೃಷಭ ರಾಶಿ
ಸಂಗಾತಿಯೊಂದಿಗೆ ಖುಷಿಯಾಗಿ ಸಮಯ ಕಳೆಯುವಿರಿ. ಹಣದ ವಿಷಯದಲ್ಲಿ ಮಿಶ್ರಫಲಿತಾಂಶ. ಕಚೇರಿಯಲ್ಲಿ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಿ, ಒಂದು ಚಿಕ್ಕ ತಪ್ಪು ಅಧಿಕ ಸಮಸ್ಯೆ ಉಂಟು ಮಾಡಬಹುದು, ಜಾಗ್ರತೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 44
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8:30 ರವರೆಗೆ

ಮಿಥುನ ರಾಶಿ
ನೀವು ಬಹಳ ಸಮಯದಿಂದ ನಿಮ್ಮ ಕೆಲಸವನ್ನು ಬದಲಾಯಿಸಲು ಯೋಜಿಸುತ್ತಿದ್ದರೆ ಇಂದು ಉತ್ತಮ ಅವಕಾಶ ಪಡೆಯಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಉತ್ತಮ ವಾತಾವರಣ ಇರಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಬೆಳಗ್ಗೆ 5:15 ರಿಂದ 9:50 ರವರೆಗೆ

ಕರ್ಕ ರಾಶಿ
ಈ ದಿನ ನಿಮಗೆ ಅದೃಷ್ಟದ ದಿನ. ನಿಮ್ಮ ದೊಡ್ಡ ಚಿಂತೆ ದೂರಾಗಲಿದೆ. ನಿಮ್ಮ ಕುಟುಂಬ ಸದಸ್ಯರೊಂದಿಗೆ ಉತ್ತಮ ಸಮಯ ಕಳೆಯಲು ಸಾಧ್ಯವಾಗುವುದು. ಕೆಲಸದ ಸ್ಥಳದಲ್ಲಿ ಪ್ರತಿಕೂಲ ಸಂದರ್ಭಗಳಲ್ಲಿಯೂ ಸುಲಭವಾಗಿ ಕೆಲಸ ಮಾಡುವ ನಿಮ್ಮ ಸಾಮರ್ಥ್ಯದಿಂದ ಬಾಸ್‌ ಹೊಗಳುತ್ತಾರೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 10
ಶುಭ ಮುಹೂರ್ತ: ಸಂಜೆ 6:30 ರಿಂದ 8 ರವರೆಗೆ

ಸಿಂಹ ರಾಶಿ
ಹಣದ ವಿಷಯದಲ್ಲಿ ದಿನವು ಉತ್ತಮವಾಗಿರುತ್ತದೆ. ಸಂಗಾತಿಯ ಆರೋಗ್ಯ ಸುಧಾರಿಸುತ್ತದೆ. ಕಚೇರಿಯಲ್ಲಿ ಪ್ರಮುಖ ಕೆಲಸವನ್ನು ಮಾಡುವಾಗ, ಹೆಚ್ಚು ಆತುರಪಡಬೇಡಿ, ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 5
ಶುಭ ಮುಹೂರ್ತ: ಬೆಳಗ್ಗೆ 9:50 ರಿಂದ ಮಧ್ಯಾಹ್ನ 12

ಕನ್ಯಾ ರಾಶಿ
ಈ ದಿನ ನಿಮಗೆ ತುಂಬಾ ರೊಮ್ಯಾಂಟಿಕ್‌ ಆಗಿರಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳ ಕೆಲಸದಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಬೇಡಿ. ಆರೋಗ್ಯ ಇಂದು ಉತ್ತಮವಾಗಿರುತ್ತವೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ

ತುಲಾ ರಾಶಿ
ಇತರರನ್ನು ಕುರುಡಾಗಿ ನಂಬುವ ನಿಮ್ಮ ಅಭ್ಯಾಸದಿಂದಾಗಿ ಸಮಸ್ಯೆ ಹೆಚ್ಚಾಗಬಹುದು. ನಿಮಗೆ ಕಚೇರಿಯಲ್ಲಿ ಯಾವುದೇ ಪ್ರಮುಖ ಕೆಲಸವನ್ನು ನಿಯೋಜಿಸಿದ್ದರೆ ಎಚ್ಚರಿಕೆಯಿಂದ ಮಾಡಿ. ವ್ಯಾಪಾರಸ್ಥರು ಇಂದು ಹೊಸ ಕೆಲಸ ಪ್ರಾರಂಭ ಮಾಡಲು ಹೋಗಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಕಡು ಹಸಿರು
ಅದೃಷ್ಟದ ಸಂಖ್ಯೆ: 17
ಶುಭ ಸಮಯ: ಮಧ್ಯಾಹ್ನ 12:30 ರಿಂದ 2:30 ರವರೆಗೆ

ವೃಶ್ಚಿಕ ರಾಶಿ
ನೀವು ತುಂಬಾ ಸಮಯದಿಂದ ನಿಮ್ಮ ಆದಾಯವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ, ಇಂದು ನೀವು ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಕಚೇರಿಯ ವಾತಾವರಣವು ಸಕಾರಾತ್ಮಕವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 11
ಶುಭ ಸಮಯ: ಸಂಜೆ 5 ರಿಂದ 7 ರವರೆಗೆ

ಧನು ರಾಶಿ
ಈ ದಿನ ನಿಮಗೆ ತುಂಬಾ ಮುಖ್ಯವಾಗಲಿದೆ. ನೀವು ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನವನ್ನು ಮಾಡುತ್ತಿದ್ದರೆ, ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ವೇಗಗೊಳಿಸಬೇಕು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 26
ಶುಭ ಸಮಯ: ಬೆಳಿಗ್ಗೆ 6 ರಿಂದ 9 ರವರೆಗೆ

ಮಕರ ರಾಶಿ
ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ನೀವು ಉತ್ತಮ ವೈದ್ಯರನ್ನು ಸಂಪರ್ಕಿಸಬೇಕು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಅಧಿಕ ಖರ್ಚು ಮಾಡದಿರುವುದು ಒಳ್ಳೆಯದು. ಕೆಲಸದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಸಂಜೆ 4:30 ರಿಂದ ರಾತ್ರಿ 9:05 ರವರೆಗೆ

ಕುಂಭ ರಾಶಿ
ಆನ್‌ಲೈನ್ ವ್ಯಾಪಾರ ಮಾಡುವವರಿಗೆ ಇಂದು ಬಹಳ ಲಾಭದಾಯಕ ದಿನವಾಗಿದೆ. ಇಂದು ನಿಮ್ಮ ಸಂಗಾತಿಯ ಮನಸ್ಥಿತಿ ಅಷ್ಟು ಚೆನ್ನಾಗಿರಲ್ಲ. ಅಂತಹ ಪರಿಸ್ಥಿತಿಯಲ್ಲಿ, ನೀವು ಯಾವುದೇ ವಿವಾದಾತ್ಮಕ ವಿಷಯವನ್ನು ಚರ್ಚಿಸಬೇಡಿ. ನಿಮ್ಮ ಮಗುವಿನ ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ಚಿಂತೆ ನಿಮ್ಮನ್ನುಕಾಡಬಹುದು. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಶುಭ ಮುಹೂರ್ತ: ಬೆಳಗ್ಗೆ 8 ರಿಂದ ಮಧ್ಯಾಹ್ನ 12

ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ, ನಿಮ್ಮ ವ್ಯವಹಾರಕ್ಕಾಗಿ ಬ್ಯಾಂಕ್‌ನಿಂದ ಸಾಲವನ್ನು ತೆಗೆದುಕೊಳ್ಳಲು ಯೋಜಿಸುತ್ತಿದ್ದರೆ, ನಿಮಗೆ ಇಂದು ಒಳ್ಳೆಯ ಸುದ್ದಿ ಸಿಗಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 25
ಶುಭ ಸಮಯ: ಸಂಜೆ 5:35 ರಿಂದ 8:35 ರವರೆಗೆ

English summary

Dina Bhavishya: September 26 Daily Horoscope Prediction Of 12 Zodiac Signs 2023 in Kannada

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Tuesday, September 26, 2023, 4:49 [IST]
X
Desktop Bottom Promotion