Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 30 ದಿನ ಭವಿಷ್ಯ: ಈ ತಿಂಗಳ ಕೊನೆಯ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 30ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ದಿನ ಹಣದ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು ಯಾರಿಗೂ ಸಾಲ ನೀಡಬೇಡಿ. ಕೆಲಸದ ಸ್ಥಳದಲ್ಲಿ ಕೆಲಸದ ಹೊರೆ ಇಂದು ಕಡಿಮೆಯಾಗಲಿದೆ. ಕೆಲಸದ ಕಡೆಗೆ ಗಮನ ಕೇಂದ್ರೀಕರಿಸಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಶುಭ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ

ವೃಷಭ ರಾಶಿ
ಇಂದು ವ್ಯಾಪಾರಸ್ಥರಿಗೆ ಬಹಳ ಲಾಭದಾಯಕವಾಗಿದೆ. ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಇಂದು ಹೆಚ್ಚಿನ ಸಮಯ ಕಾಳಜಿ ವಹಿಸಲು ಸಲಹೆ ನೀಡಲಾಗಿದೆ. ಜವಾಬ್ದಾರಿಗಳ ಹೊರೆ ನಿಮ್ಮ ಮೇಲೆ ಹೆಚ್ಚಾಗುವ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 10
ಶುಭ ಸಮಯ: ಬೆಳಿಗ್ಗೆ 6 ರಿಂದ 9 ರವರೆಗೆ
ಮಿಥುನ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ನಿಮ್ಮ ಕೆಲವು ದೊಡ್ಡ ಸಮಸ್ಯೆಗೆ ಪರಿಹಾರ ಸಿಗಲಿದೆ. ತುಂಬಾ ಸಮಯದಿಂದ ಯಾವುದೋ ಕೆಲಸ ಬಾಕಿಯಿದ್ದರೆ, ಅದು ಇಂದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ.
ಅದೃಷ್ಟದ ಬಣ್ಣ: ಬೆಳ್ಳಿ
ಅದೃಷ್ಟದ ಸಂಖ್ಯೆ: 7
ಶುಭ ಸಮಯ: ಮಧ್ಯಾಹ್ನ 1:30 ರಿಂದ 4:30 ರವರೆಗೆ
ಕರ್ಕ ರಾಶಿ
ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಉತ್ತಮ ಪರಿಹಾರ ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಇಂದು ನೀವು ನಿಮ್ಮ ಆಲೋಚನೆಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತೀರಿ. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ನೀವು ಯಶಸ್ವಿಯಾಗುತ್ತೀರಿ. ಆರ್ಥಿಕವಾಗಿ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಶುಭ ಸಮಯ: ಸಂಜೆ 5:95 ರಿಂದ 7:05 ರವರೆಗೆ
ಸಿಂಹ ರಾಶಿ
ವೈವಾಹಿಕ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರುವುದಿಲ್ಲ. ನೀವು ಕೋಪವನ್ನು ನಿಯಂತ್ರಿಸಿದರೆ ಒಳ್ಳೆಯದು. ಕಚೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಸಂಭಾಷಣೆ ನಡೆಸುವಾಗ, ನಿಮ್ಮ ಮಾತುಗಳ ಕಡೆಗೆ ಜಾಗ್ರತೆ, ನಿಮ್ಮ ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ
ಕನ್ಯಾ ರಾಶಿ
ನೀವು ಉದ್ಯಮಿಯಾಗಿದ್ದರೆ ಇಂದು ಹೊಸ ಕೆಲಸದ ನಿರ್ಧಾರ ತೆಗೆದುಕೊಳ್ಳಬೇಡಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಕೆಲವು ಕಷ್ಟಕರವಾದ ಕೆಲಸವನ್ನು ನಿಯೋಜಿಸಬಹುದು. ನಿಮ್ಮ ಕೆಲಸವನ್ನು ನೀವು ಪೂರ್ಣ ಆತ್ಮವಿಶ್ವಾಸ ಮತ್ತು ಸಕಾರಾತ್ಮಕತೆಯಿಂದ ಮಾಡಿದರೆ ಅದು ಉತ್ತಮವಾಗಿರುತ್ತದೆ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 32
ಶುಭ ಸಮಯ: ಸಂಜೆ 6 ರಿಂದ ರಾತ್ರಿ 8:30 ರವರೆಗೆ
ತುಲಾ ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ, ಅದು ನಿಮಗೆ ಉತ್ತಮವಾಗಿರುತ್ತದೆ. ಕಚೇರಿಯಲ್ಲಿ, ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ, ಏಕೆಂದರೆ ನಿಮ್ಮ ನಿಧಾನಗತಿಯು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 11
ಶುಭ ಮುಹೂರ್ತ: ಮಧ್ಯಾಹ್ನ 12 ರಿಂದ 2 ರವರೆಗೆ
ವೃಶ್ಚಿಕ ರಾಶಿ
ಆರ್ಥಿಕ ಜೀವನ ಚೆನ್ನಾಗಿರಲಿದೆ. ಆಸ್ತಿ ಇತ್ಯಾದಿಗಳಲ್ಲಿ ಹೂಡಿಕೆ ಮಾಡುವುದು ಈ ಸಮಯದಲ್ಲಿ ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ನಿಮ್ಮ ಸಂಗಾತಿಯೊಂದಿಗೆ ಪರಸ್ಪರ ಹೊಂದಾಣಿಕೆ ಇರಲಿದೆ. ಕೆಲಸದಲ್ಲಿ ತಪ್ಪುಗಳು ಆಗದಂತೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಶುಭ ಸಮಯ: ಬೆಳಗ್ಗೆ 4:30 ರಿಂದ 8:50 ರವರೆಗೆ
ಧನು ರಾಶಿ
ಇಂದು ನೀವು ಕೆಲವು ದೊಡ್ಡ ಸಮಸ್ಯೆಗಳಿಂದ ಹೊರಬರುವಲ್ಲಿ ಯಶಸ್ವಿಯಾಗುತ್ತೀರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಸಹೋದರ ಸಹೋದರಿಯರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ನೀವು ವಿದೇಶಕ್ಕೆ ಹೋಗಿ ಉದ್ಯೋಗ ಪಡೆಯುವ ಕನಸು ಕಾಣುತ್ತಿದ್ದರೆ, ಇಂದು ನಿಮಗೆ ಬಹಳ ಮುಖ್ಯವಾದ ದಿನವಾಗಿದೆ. ಹಣದ ವಿಷಯದಲ್ಲಿ ನೀವು ಅದೃಷ್ಟದ ದಿನ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಶುಭ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಮಕರ ರಾಶಿ
ಅತಿಯಾದ ನಗು ಮತ್ತು ತಮಾಷೆ ಇಂದು ನಿಮಗೆ ತೊಂದರೆ ಉಂಟುಮಾಡಬಹುದು.ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ನಿಮ್ಮ ಕೆಲಸವನ್ನು ಬಹಳ ಎಚ್ಚರಿಕೆಯಿಂದ ಮಾಡಲು ಸಲಹೆ ನೀಡಲಾಗಿದೆ. ಆರೋಗ್ಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ.
ಅದೃಷ್ಟದಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 21
ಶುಭ ಸಮಯ: ಸಂಜೆ 5:10 ರಿಂದ 8:10 ರವರೆಗೆ
ಕುಂಭ ರಾಶಿ
ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ನೀವು ಹೇಳುವ ಯಾವುದೋ ಒಂದು ವಿಷಯ ಅವರಿಗೆ ಅಸಮಾಧಾನ ಉಂಟು ಮಾಡಬಹುದು, ಆದ್ದರಿಂದ ಜಾಗ್ರತೆವಹಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 19
ಶುಭ ಸಮಯ: ಬೆಳಗ್ಗೆ 6:50 ರಿಂದ 9:20 ರವರೆಗೆ
ಮೀನ ರಾಶಿ
ಷೇರು ಮಾರುಕಟ್ಟೆಗೆ ಸಂಬಂಧಿಸಿದ ಕೆಲಸ ಮಾಡುವವರಿಗೆ ಇಂದು ಬಹಳ ಲಾಭದಾಯಕ ದಿನವಾಗಿದೆ. ಉದ್ಯೋಗಿಗಳ ಆದಾಯದಲ್ಲಿ ಹೆಚ್ಚಳವಾಗುವ ಬಲವಾದ ಸಾಧ್ಯತೆಯಿದೆ. ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಮಿಶ್ರಫಲ
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 6
ಶುಭ ಸಮಯ: ಮಧ್ಯಾಹ್ನ 2 ರಿಂದ 4:30 ರವರೆಗೆ



Click it and Unblock the Notifications