Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 6 ದಿನ ಭವಿಷ್ಯ: ಬುಧವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್6ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಸೆಪ್ಟಂಬರ್ 6
ತಿಥಿ: ಮಧ್ಯಾಹ್ನ 03:37ರವರೆಗೆ ಸಪ್ತಮಿ ನಂತರ ಅಷ್ಟಮಿ
ನಕ್ಷತ್ರ: ಬೆಳಗ್ಗೆ 09:20ರವರೆಗೆ ಕೃತ್ತಿಕಾ ನಂತರ ರೋಹಿಣಿ
ಪಕ್ಷ: ಕೃಷ್ಣಪಕ್ಷ
ರಾಹುಕಾಲ: ಮಧ್ಯಾಹ್ನ 12:20ರಿಂದ 01:53ರವರೆಗೆ

ಮೇಷ ರಾಶಿ
ವ್ಯಾಪಾರಕ್ಕೆ ಸಂಬಂಧಿಸಿದಂತೆ ಈ ದಿನ ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಈ ದಿನ ವಿರೋಧಿಗಳು ಸಕ್ರಿಯರಾಗಿರುತ್ತಾರೆ, ಅವರು ನಿಮ್ಮ ಕೆಲವು ಪ್ರಮುಖ ಕೆಲಸಗಳಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಾರೆ. ಪ್ರಣಯ ಜೀವನದಲ್ಲಿ ಉದ್ವಿಗ್ನತೆ ಹೆಚ್ಚಾಗಲಿದೆ. ನಿಮ್ಮ ಸಂಬಂಧದಲ್ಲಿ ಅಂತರ ಉಂಟಾಗಬಹುದು. ನಿಮ್ಮ ವೈಯಕ್ತಿಕ ವಿಷಯಗಳಲ್ಲಿ ಮೂರನೇ ವ್ಯಕ್ತಿಯ ಹಸ್ತಕ್ಷೇಪ ಮಾಡಲು ಬಿಡದಿರುವುದು ಉತ್ತಮ. ಹಣಕಾಸಿನ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಕಣ್ಣಿನ ಸಂಬಂಧಿತ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಗ್ಗೆ10 ರಿಂದ ಮಧ್ಯಾಹ್ನ 1:30 ರವರೆಗೆ
ವೃಷಭ ರಾಶಿ
ಕುಟುಂಬ ಜೀವನದಲ್ಲಿ ಶಾಂತಿ ಹಾಗೂ ಸಂತೋಷ ಇರಲಿದೆ. ನೀವು ಇಂದು ಕುಟುಂಬ ಸದಸ್ಯರೊಂದಿಗೆ ಪ್ರಮುಖ ಚರ್ಚೆಯನ್ನು ನಡೆಸಬಹುದು. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಇಂದು ನೀವು ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಕಚೇರಿಯಲ್ಲಿ ನೀವು ಒಂದೇ ಸಮಯದಲ್ಲಿ ಅನೇಕ ಕಾರ್ಯಗಳನ್ನು ನಿರ್ವಹಿಸುವುದನ್ನು ತಪ್ಪಿಸಬೇಕು. ಇಂದು ನೀವು ಒಂದು ಸಣ್ಣ ತಪ್ಪು ಮಾಡಿದರೆ, ಅದರ ಪರಿಣಾಮಗಳನ್ನು ನೀವು ಅನುಭವಿಸಬೇಕಾಗಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಬೆಳಗ್ಗೆ 8:30 ರಿಂದ ಮಧ್ಯಾಹ್ನ 3 ರವರೆಗೆ
ಮಿಥುನ ರಾಶಿ
ಕೆಲವು ಸಮಯದಿಂದ ನಿಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದರೆ, ಇಂದು ದೊಡ್ಡ ಸುಧಾರಣೆ ಕಂಡುಬರುತ್ತದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಕೆಲಸದ ಸ್ಥಳದಲ್ಲಿ ಅತ್ಯಂತ ಸಮತೋಲಿತವಾಗಿ ವರ್ತಿಸಲು ನಿಮಗೆ ಸಲಹೆ ನೀಡಲಾಗಿದೆ. ಅನಗತ್ಯ ಕೋಪ ಮತ್ತು ಅಹಂ ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು, ಆದ್ದರಿಂದ ಕೋಪ ಹಾಗೂ ಅಹಂ ದೂರವಿಡುವುದು ಒಳ್ಳೆಯದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 31
ಅದೃಷ್ಟದ ಸಮಯ: ಬೆಳಗ್ಗೆ 10:30 ರಿಂದ ಸಂಜೆ 4:50 ರವರೆಗೆ
ಕರ್ಕ ರಾಶಿ
ದಾಂಪತ್ಯ ಜೀವನ ಚೆನ್ನಾಗಿರಲಿದೆ. ಇಂದು ನೀವು ನಿಮ್ಮ ಮಗುವಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿದೆ. ಕೆಲಸದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಯೋಜನೆಯ ಪ್ರಕಾರ ನಿಮ್ಮ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿದೆ. ಉದ್ಯೋಗಸ್ಥರು ತಮ್ಮ ಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಗ್ಗೆ 8 ರಿಂದ 10:15 ರವರೆಗೆ
ಸಿಂಹ ರಾಶಿ
ಹಣದ ವಿಷಯದಲ್ಲಿ, ನೀವು ಜಾಗರೂಕರಾಗಿರಲು ಸಲಹೆ ನೀಡಲಾಗಿದೆ, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬಹುದು. ಇಂದು ಹಣಕಾಸಿನ ವಹಿವಾಟು ಮಾಡುವುದನ್ನು ತಪ್ಪಿಸಿ. ನಿಮ್ಮ ಸಂಗಾತಿಯೊಂದಿಗೆ ಮಾತನಾಡುವಾಗ, ನಿಮ್ಮ ಪದಗಳನ್ನುಆಲೋಚಿಸಿ ಬಳಸಿ. ತಮಾಷೆಯಾಗಿ ಹೇಳಿದ್ದು ಅವರ ಭಾವನೆಗಳಿಗೆ ಧಕ್ಕೆ ತರಬಹುದು. ಕೆಲಸದ ದೃಷ್ಟಿಯಿಂದ ಇಂದು ಮಿಶ್ರಫಲ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಮಧ್ಯಾಹ್ನ 2:20 ರಿಂದ 4:30 ರವರೆಗೆ
ಕನ್ಯಾ ರಾಶಿ
ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ಇಂದು ನಿಮಗೆ ತುಂಬಾ ಲಾಭದಾಯಕವಾಗಿರಲಿದೆ. ಈ ಹಿಂದೆ ತೆಗೆದುಕೊಂಡ ಯಾವುದೇ ನಿರ್ಧಾರಕ್ಕೆ ನೀವು ಸೂಕ್ತ ಫಲಿತಾಂಶವನ್ನು ಪಡೆಯುತ್ತೀರಿ. ಮತ್ತೊಂದೆಡೆ, ಉದ್ಯೋಗಿಗಳು ಕಚೇರಿಯಲ್ಲಿ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಬೇಕಾಗಬಹುದು. ನೀವು ಕೆಲವು ಪ್ರಮುಖ ಫೈಲ್‌ಗಳನ್ನು ಕಳೆದುಕೊಳ್ಳಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 34
ಅದೃಷ್ಟದ ಸಮಯ: ಬೆಳಿಗ್ಗೆ 10:50 ರಿಂದ ಮಧ್ಯಾಹ್ನ 2:25 ರವರೆಗೆ
ತುಲಾ ರಾಶಿ
ಉದ್ಯೋಗಸ್ಥರಿಗೆಈ ದಿನ ಅತ್ಯಂತ ಮಹತ್ವದ ದಿನವಾಗಿದೆ. ವ್ಯಾಪಾರಸ್ಥರಿಗೂ ಮಿಶ್ರ ಲಾಭ ದೊರೆಯಲಿದೆ. ಮನೆಯಲ್ಲಿ ವಾತಾವರಣ ಉತ್ತಮವಾಗಿರಲಿದೆ. ನಿಮ್ಮ ಪ್ರೀತಿಪಾತ್ರರೊಡನೆ ನಿಮ್ಮ ನಡವಳಿಕೆಯನ್ನು ಸಭ್ಯವಾಗಿರಿಸಿಕೊಳ್ಳಿ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಗ್ಗೆ 8:30 ರಿಂದ ಸಂಜೆ 6 ರವರೆಗೆ
ವೃಶ್ಚಿಕ ರಾಶಿ
ನೀವು ಇತ್ತೀಚೆಗೆ ಯಾವುದೇ ಪರೀಕ್ಷೆಯನ್ನು ನೀಡಿದ್ದರೆ ನೀವು ನಿರೀಕ್ಷಿಸಿದಂತೆ ಫಲಿತಾಂಶವನ್ನು ಪಡೆಯಬಹುದು. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ನೀವು ಉದ್ಯಮಿಯಾಗಿದ್ದರೆ, ಹೊಸ ವ್ಯವಹಾರದಲ್ಲಿ ನಿಮ್ಮ ಅದೃಷ್ಟವನ್ನು ಪ್ರಯತ್ನಿಸಲು ಈ ದಿನ ಸೂಕ್ತವಾಗಿದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಗಾಢ ಕೆಂಪು
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 3:30 ರವರೆಗೆ
ಧನು ರಾಶಿ
ಹಿರಿಯರ ಸಲಹೆಯನ್ನು ನಿರ್ಲಕ್ಷಿಸಬೇಡಿ. ಇಂದು ಕಚೇರಿಯಲ್ಲಿ ಹೆಚ್ಚಿನ ಕೆಲಸದ ಹೊರೆ ಇರಲಿದೆ. ನಿಮ್ಮ ಕಠಿಣ ಪರಿಶ್ರಮ, ತಿಳುವಳಿಕೆಯಿಂದ, ನೀವು ಎಲ್ಲಾ ಕೆಲಸಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು. ತ್ವರಿತ ಲಾಭ ಗಳಿಸಲು ಶಾರ್ಟ್‌ಕಟ್ ಮಾರ್ಗಗಳನ್ನು ಅಳವಡಿಸಿಕೊಳ್ಳುವುದನ್ನು ತಪ್ಪಿಸಲು ವ್ಯಾಪಾರಿಗಳಿಗೆ ಸಲಹೆ ನೀಡಲಾಗಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 28
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 6:15 ರವರೆಗೆ
ಮಕರ ರಾಶಿ
ಕೆಲಸಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಬಹಳ ದಿನಗಳಿಂದ ಸ್ಥಗಿತಗೊಂಡಿದ್ದ ಯಾವುದೇ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ನೀವು ವಿತ್ತೀಯ ಲಾಭವನ್ನು ಪಡೆಯುವ ಬಲವಾದ ಸಾಧ್ಯತೆಯೂ ಇದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಈ ದಿನ ಪರಿಹಾರ ಕಾಣಬಹುದು.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:15 ರಿಂದ 7:20 ರವರೆಗೆ
ಕುಂಭ ರಾಶಿ
ಈ ದಿನ ನಿಮಗೆ ತುಂಬಾ ಬಿಡುವಿಲ್ಲದ ದಿನವಾಗಿರುತ್ತದೆ. ನಿಮಗಾಗಿ ಸಾಕಷ್ಟು ಸಮಯ ಸಿಗದೇ ಇರಬಹುದು. ಈ ದಿನ ತುಂಬಾ ಆಯಾಸ ಕಾಡುವುದು. ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ. ನಿಮ್ಮ ಸಂಗಾತಿಯ ನಡವಳಿಕೆ ನಿಮ್ಮ ಮನಸ್ಸಿಗೆ ಬೇಸರ ತರಲಿದೆ.
ಅದೃಷ್ಟದ ಬಣ್ಣ: ಕೇಸರಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಗ್ಗೆ 9:20 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ
ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ. ಅದು ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ಯಾವುದೇ ಪ್ರಮುಖ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳದಂತೆ ನಿಮಗೆ ಸಲಹೆ ನೀಡಲಾಗಿದೆ. ಹಣದ ಮುಗ್ಗಟ್ಟು ದೂರವಾಗಲಿದೆ. ನಿಮ್ಮ ಆದಾಯವನ್ನು ಹೆಚ್ಚಿಸುವ ಬಲವಾದ ಸಾಧ್ಯತೆಯಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:55 ರವರೆಗೆ



Click it and Unblock the Notifications