Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆಪ್ಟೆಂಬರ್ 7 ದಿನ ಭವಿಷ್ಯ: ಮೇಷ ರಾಶಿಯವರೇ ಆರೋಗ್ಯ ಜಾಗ್ರತೆ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ಸೆಪ್ಟೆಂಬರ್ 7ರ ರಾಶಿಫಲ ನೀಡಿದ್ದು ಈ ದಿನ 12 ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಸೆಪ್ಟೆಂಬರ್ 7
ತಿಥಿ: ಸಂಜೆ 04:14ರವರೆಗೆ ಅಷ್ಟಮಿ ನಂತರ ನವಮಿ
ನಕ್ಷತ್ರ: ಬೆಳಗ್ಗೆ 10:25ರವರೆಗೆ ರೋಹಿಣಿ ನಂತರ ಮೃಗಶೀರ್ಷ
ಪಕ್ಷ: ಕೃಷ್ಣಪಕ್ಷ
ರಾಹುಕಾಲ: ಮಧ್ಯಾಹ್ನ 01:52ರಿಂದ 03:25ರವರೆಗೆ

ಮೇಷ ರಾಶಿ
ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು. ಹಣದ ವಿಷಯದಲ್ಲಿ ದಿನವು ಸರಾಸರಿಯಾಗಿರುತ್ತದೆ. ನೀವು ಬುದ್ಧಿವಂತಿಕೆಯಿಂದ ಖರ್ಚು ಮಾಡಿದರೆ ಒಳ್ಳೆಯದು. ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 2:45 ರಿಂದ ಸಂಜೆ 6 ರವರೆಗೆ
ವೃಷಭ ರಾಶಿ
ಕೆಲಸದಲ್ಲಿ ಈ ದಿನ ಅಧಿಕ ಓಡಾಟ ಇರಲಿದೆ, ಆದರೆ ನಿಮ್ಮ ಶ್ರಮವು ವ್ಯರ್ಥವಾಗುವುದಿಲ್ಲ, ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬದಲ್ಲಿ ಸಂತೋಷ ಇರಲಿದೆ. .
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ
ಮಿಥುನ ರಾಶಿ
ಈ ದಿನ ಖರ್ಚು ಅಧಿಕ ಇರಲಿದೆ. ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟು ತಡೆಗಟ್ಟಲು, ನಿಮ್ಮ ಖರ್ಚುಗಳನ್ನು ನೀವು ನಿಯಂತ್ರಿಸಬೇಕಾಗುತ್ತದೆ. ಈ ದಿನ ಕೆಲಸದ ಕಡೆ ಅಧಿಕ ಗಮನಹರಿಸಬೇಕಾಗಿದೆ, ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು. ವ್ಯಾಪಾರಿಗಳು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳದಿದ್ದರೆ ಒಳ್ಳೆಯದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9:05 ರವರೆಗೆ
ಕರ್ಕ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಇಂದು ಖರ್ಚು ಕಡಿಮೆ ಆಗಬಹುದು. ನಿಮ್ಮ ಸಂಗಾತಿಯಿಂದ ನೀವು ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೀರಿ. ಈ ದಿನ ಸಂಗಾತಿಯೊಂದಿಗೆ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ: ತಿಳಿ ಹಳದಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಬೆಳಗ್ಗೆ 5:30 ರಿಂದ 10:10 ರವರೆಗೆ
ಸಿಂಹ ರಾಶಿ
ಮನೆಯಲ್ಲಿರುವ ಹಿರಿಯರೊಂದಿಗೆ ನಿಮ್ಮ ಸಂಬಂಧ ಇನ್ನಷ್ಟು ಗಟ್ಟಿಯಾಗಲಿದೆ. ಇಂದು ನೀವು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡರೆ, ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಪ್ರತಿಕೂಲ ಸಂದರ್ಭಗಳಲ್ಲಿ ಸುಲಭವಾಗಿ ಕೆಲಸ ಮಾಡುವ ನಿಮ್ಮ ಸಾಮರ್ಥ್ಯವನ್ನು ಬಾಸ್ ತುಂಬಾ ಮೆಚ್ಚಿಕೊಳ್ಳುತ್ತೀರಿ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಸಂಜೆ 6:20 ರಿಂದ 8:15 ರವರೆಗೆ
ಕನ್ಯಾ ರಾಶಿ
ರೋಮ್ಯಾಂಟಿಕ್ ಜೀವನ ಚೆನ್ನಾಗಿರಲಿದೆ. ಆರ್ಥಿಕ ಬಿಕ್ಕಟ್ಟು ದೂರವಾಗಲಿದೆ. ಹಣದ ಕೊರತೆಯಿಂದ ಬಾಕಿಯುಳಿದ ಕಾಮಗಾರಿ ಪೂರ್ಣಗೊಳ್ಳಲಿದೆ. ಕೆಲಸದ ವಿಷಯದಲ್ಲಿ ಈ ದಿನ ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 7:30 ರಿಂದ 9:50 ರವರೆಗೆ
ತುಲಾ ರಾಶಿ
ಹಣದ ವಿಷಯದಲ್ಲಿ ಈ ದಿನ ಒಳ್ಳೆಯದಿದೆ. ಆದರೆ ಯಾವುದೇ ಹೂಡಿಕೆಯ ನಿರ್ಧಾರ ಮಾಡಬೇಡಿ. ಕಾಮಗಾರಿ ಸುಸೂತ್ರವಾಗಿ ಪೂರ್ಣಗೊಳ್ಳಲಿದೆ. ಉದ್ಯೋಗವಿರಲಿ, ವ್ಯವಹಾರವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ. ಮನೆಯಲ್ಲಿ ವಾತಾವರಣ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಗ್ಗೆ 10:45 ರಿಂದ ಮಧ್ಯಾಹ್ನ 2 ರವರೆಗೆ
ವೃಶ್ಚಿಕ ರಾಶಿ
ಈ ದಿನ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಲಿದೆ.ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಸಾಲದ ವಹಿವಾಟುಗಳನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗಿದೆ. ವ್ಯಾಪಾರಸ್ಥರು ಈ ದಿನಯಾವುದೇ ಆತುರದ ಕೆಲಸವನ್ನು ಮಾಡದಿರಿ, ಇಲ್ಲದಿದ್ದರೆ ಅವರು ಲಾಭದ ಬದಲು ನಷ್ಟವನ್ನು ಅನುಭವಿಸಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಧನು ರಾಶಿ
ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ನೀವು ಶೀಘ್ರದಲ್ಲೇ ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತರಾಗುತ್ತೀರಿ. ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳಲು ಪ್ರಯತ್ನಿಸಿ. ನಿಮ್ಮ ಆರೋಗ್ಯದ ಬಗ್ಗೆ ಹೇಳುವುದಾದರೆ ತಲೆನೋವು ಅಥವಾ ನಿದ್ರಾಹೀನತೆಯ ಸಮಸ್ಯೆ ಹೊಂದಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 9 ರವರೆಗೆ
ಮಕರ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಅನುಕೂಲಕರವಾಗಿದೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಒಳ್ಳೆಯ ಸುದ್ದಿಯೂ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ನೀವು ವೈದ್ಯರನ್ನು ಸಂಪರ್ಕಿಸಬೇಕು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ
ಕುಂಭ ರಾಶಿ
ಈ ದಿನ ಸಂಗಾತಿಯೊಂದಿಗೆ ಖುಷಿಯಾಗಿರುವಿರಿ, ಹಣಕಾಸಿನ ಸ್ಥಿತಿ ಕೂಡ ಚೆನ್ನಾಗಿರಲಿದೆ, ಇಂದು ನೀವು ಕಚೇರಿಯಲ್ಲಿ ಯಾವುದೇ ಕಷ್ಟಕರವಾದ ಕೆಲಸವನ್ನು ಬಹಳ ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಗ್ಗೆ 4:20 ರಿಂದ 9 ರವರೆಗೆ
ಮೀನ ರಾಶಿ
ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಹಣದ ಚಿಂತೆ ತುಂಬಾ ಕಾಡುವುದು. ಸಹೋದ್ಯೋಗಿ ರಜೆಯ ಮೇಲೆ ಹೋಗುವುದರಿಂದ ಇಂದು ನಿಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡವಿರುತ್ತದೆ. ಈ ದಿನ ಆಯಾಸ ಅಧಿಕವಿರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 5 ರವರೆಗೆ



Click it and Unblock the Notifications