ಸೆಪ್ಟೆಂಬರ್ 9 ದಿನ ಭವಿಷ್ಯ: ಶನಿವಾರ ಮೇಷ ರಾಶಿಯವರಿಗೆ ಶುಭ, ಉಳಿದ ರಾಶಿಗಳ ರಾಶಿಫಲ ಹೇಗಿದೆ?

ಶುಭೋದಯ... ನಿಮ್ಮ ಎಲ್ಲಾ ಕಾರ್ಯಗಳು ಶುಭವಾಗಿ ನಡೆಯಲಿ ಎಂದು ಹೇಳುತ್ತಾ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂದು ನೋಡೋಣ:

ಮೇಷ ರಾಶಿ
ಈ ದಿನ ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಆದರೆ ಅತಿಯಾಗಿ ಖರ್ಚು ಮಾಡಲು ಹೋಗಬೇಡಿ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿ. ಕಚೇರಿಯಲ್ಲಿ ಬಾಸ್ ನಿಮ್ಮ ಕೆಲಸದಿಂದ ತುಂಬಾ ತೃಪ್ತರಾಗುತ್ತಾರೆ. ಅವರು ನಿಮ್ಮ ಕೆಲಸವನ್ನು ಮೆಚ್ಚಿಕೊಳ್ಳುತ್ತಾರೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9 ರವರೆಗೆ

Dina Bhavishya

ವೃಷಭ ರಾಶಿ
ಖರ್ಚು ಅಧಿಕ ಬರುವುದರಿಂದ ಹಣದ ಚಿಂತೆ ಕಾಡಬಹುದು. ಹಣವೊಂದಿಸಲು ಕಷ್ಟವಾಗಬಹುದು. ಈ ದಿನ ಆತುರದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಸರಿಯಾದ ಸಮಯ ಬಂದಾಗ ನಿಮ್ಮ ಸಮಸ್ಯೆ ಖಂಡಿತಾ ಪರಿಹಾರವಾಗಲಿದೆ. ಕುಟುಂಬ ಜೀವನದಲ್ಲಿ ಶಾಂತಿ ಹಾಗೂ ಸಂತೋಷ ಇರಲಿದೆ. ಉದ್ಯೋಗಿಗಳಿಗೆ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಲು ಸಲಹೆ ನೀಡಲಾಗಿದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 5
ಶುಭದ ಸಮಯ: ಬೆಳಗ್ಗೆ 6:50 ರಿಂದ 8:55 ರವರೆಗೆ

ಮಿಥುನ ರಾಶಿ
ಮಕ್ಕಳ ಕಡೆಯಿಂದ ಸಂತಸ ಸಿಗಲಿದೆ, ನೀವು ಅವರ ಬಗ್ಗೆ ಹೆಮ್ಮೆ ಪಡುತ್ತೀರಿ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸವು ಇಂದು ಪೂರ್ಣಗೊಳ್ಳುವ ಬಲವಾದ ಸಾಧ್ಯತೆಯಿದೆ. ಕೆಲಸದ ಸ್ಥಳದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ. ನೀವು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಿದರೆ, ನೀವು ಉತ್ತಮ ಫಲಿತಾಂಶವನ್ನು ಪಡೆಯುತ್ತೀರಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ಸಂಜೆ 7 ರವರೆಗೆ

ಕರ್ಕ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಮನ್ವಯ ಹದಗೆಡಬಹುದು. ನಿಮ್ಮಿಬ್ಬರ ನಡುವೆ ಏನಾದರೂ ತಪ್ಪು ಕಲ್ಪನೆ ಇದ್ದರೆ ಮಾತನಾಡಿ ಸರಿಪಡಿಸಿಕೊಳ್ಳುವುದು ಒಳ್ಳೆಯದು. ನಿಮ್ಮಿಬ್ಬರ ಮನಸ್ಸು ತಿಳಿಯಾದರೆ ನಿಮ್ಮ ಮುನಿಸು ದೂರಾಗಲಿದೆ. ಕೆಲಸದ ವಿಷಯದಲ್ಲಿ ಈ ದಿನ ಉತ್ತಮವಾಗಿದೆ. ನೀವು ಯಾವುದೋ ಪ್ರಮುಖ ಕೆಲಸವನ್ನು ಮಾಡುತ್ತಿದ್ದರೆ ಅದು ಈ ದಿನ ಯಶಸ್ವಿಯಾಗಿ ಪೂರ್ಣವಾಗಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ 10 ರವರೆಗೆ

ಸಿಂಹ ರಾಶಿ
ಈ ದಿನ ನಿಮಗೆ ಸಾಮಾನ್ಯವಾಗಿರಲಿದೆ. ಕೆಲಸಕ್ಕೆ ಸಂಬಂಧಿಸಿದ ಯಾವುದೇ ಪ್ರಯತ್ನ ವಿಫಲವಾಗಬಹುದು. ಈ ಸಂದರ್ಭದಲ್ಲಿ ನೀವು ತುಂಬಾ ನಿರಾಶೆಗೊಳ್ಳುವಿರಿ. ನೀವು ಧನಾತ್ಮಕವಾಗಿರುವುದು, ಹಾಗೂ ಕೆಲಸ ಕಡೆ ಗಮನ ನೀಡುವುದು ಉತ್ತಮ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ಖರ್ಚುಗಳನ್ನು ಸರಿಯಾಗಿ ಟ್ರ್ಯಾಕ್ ಮಾಡಬೇಕು. ಸಂಗಾತಿಯ ಭಾವನೆಗಳನ್ನು ಗೌರವಿಸಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 7:30 ರಿಂದ ರಾತ್ರಿ 9:15ರವರೆಗೆ

ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಶುಭವಾಗಿದೆ, ನಿಮ್ಮ ಪ್ರಮುಖ ಸಮಸ್ಯೆಯೊಂದು ಬಗೆಹರಿಯಲಿದೆ. ಈ ದಿನ ನಿಮ್ಮ ಮನಸ್ಥಿತಿ ತುಂಬಾ ಚೆನ್ನಾಗಿರಲಿದೆ. ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ಹೂಡಿಕೆ ಮಾಡಿದ್ದರೆ, ನೀವು ಅದರಿಂದ ಉತ್ತಮ ಲಾಭವನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಈ ದಿನ ಅನುಕೂಲಕರವಾಗಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 2:05 ರಿಂದ ಸಂಜೆ 4 ರವರೆಗೆ

ತುಲಾ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ತುಂಬಾ ಚೆನ್ನಾಗಿದೆ, ಹಣದ ವಿಷಯದಲ್ಲಿ ಈ ದಿನವು ಉತ್ತಮವಾಗಿರುತ್ತದೆ. ಖರ್ಚುಗಳು ಕಡಿಮೆಯಾಗಲಿದೆ. ಮಕ್ಕಳೊಂದಿಗೆ ಬಹಳ ಮೋಜಿನ ಸಮಯವನ್ನು ಕಳೆಯುತ್ತೀರಿ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 4:30 ರಿಂದ ರಾತ್ರಿ 8:30 ರವರೆಗೆ

ವೃಶ್ಚಿಕ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಇತ್ತೀಚೆಗೆ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದ್ದರೆ ಈ ದಿನ ಲಾಭವನ್ನು ಕಾಣುವಿರಿ. ನಿಮ್ಮ ಸಂಗಾತಿಯೊಂದಿಗೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ನಿಮಗೆ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 12:45 ರಿಂದ 3 ರವರೆಗೆ

ಧನು ರಾಶಿ
ಈ ದಿನ ಸಂಗಾತಿಯ ಆರೋಗ್ಯ ಚಿಂತೆ ಕಾಡಬಹುದು. ಆಸ್ಪತ್ರೆಗೆ ಹಣ ಖರ್ಚಾಗಬಹುದು. ಕಚೇರಿಯಲ್ಲಿ ನಿಮ್ಮ ಯಾವುದೇ ಕೆಲಸವು ಅಪೂರ್ಣವಾಗಿದ್ದರೆ, ಅದು ನಿಮ್ಮ ಕೆಲಸದ ಮೇಲೆ ಕೆಟ್ಟ ಪರಿಣಾಮ ಬೀರುವುದು. ಕೆಲಸದಲ್ಲಿ ತಪ್ಪಾಗದಂತೆ ಜಾಗ್ರತೆವಹಿಸಿ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 9:00 ರವರೆಗೆ

ಮಕರ ರಾಶಿ
ನಿಮ್ಮ ಸಮಸ್ಯೆ ಬಗೆಹರಿಸಲು ನಿಮ್ಮ ಆಪ್ತರು ನಿಮ್ಮ ಸಹಾಯಕ್ಕೆ ಬರುತ್ತಾರೆ. ಹಣದ ವಿಚಾರದಲ್ಲಿ ಯಾವುದೇ ರೀತಿಯ ಅಜಾಗರೂಕತೆ ಬೇಡ. ಹಣಕಾಸಿನ ವ್ಯವಹಾರ ಮಾಡುವಾಗ ವಿಶೇಷವಾಗಿ ಜಾಗರೂಕರಾಗಿರಿ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ವೈಯಕ್ತಿಕ ರಹಸ್ಯಗಳನ್ನು ಹಂಚಿಕೊಳ್ಳಬೇಡಿ, ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಸಂಜೆ 6:55 ರಿಂದ 8:15 ರವರೆಗೆ

ಕುಂಭ ರಾಶಿ
ಉತ್ತಮ ಆರೋಗ್ಯಕ್ಕಾಗಿ ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ, ನಿಮ್ಮ ಸಂಗಾತಿಯು ಉತ್ತಮ ಮನಸ್ಥಿತಿಯಲ್ಲಿರುತ್ತಾರೆ. ನಿಮ್ಮ ಸಂಬಂಧದಲ್ಲಿ ಮಾಧುರ್ಯ ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡುವ ಸಾಧ್ಯತೆ ಇದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 6
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ

ಮೀನ ರಾಶಿ
ಕಚೇರಿಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ನಿಮ್ಮ ನಡುವಿನ ಎಲ್ಲಾ ತಪ್ಪು ತಿಳುವಳಿಕೆಗಳನ್ನು ನಿವಾರಿಸಲು ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಲ್ಲ. ಆರೋಗ್ಯಕ್ಕೆ ಸಂಬಂಧಿಸಿದಂತೆ, ನೀವು ತುಂಬಾ ತಾಜಾ ಹಾಗೂ ಫಿಟ್ ಆಗಿರುತ್ತೀರಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಬೆಳಗ್ಗೆ 8:20 ರಿಂದ 9:50 ರವರೆಗೆ

English summary

Dina Bhavishya: September 9 Daily Horoscope Prediction Of 12 Zodiac Signs 2023 in Kannada

Explore Dina Rashi Bhavishya (ದಿನ ಭವಿಷ್ಯ) Today's Astrology Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Friday, September 8, 2023, 23:31 [IST]
X
Desktop Bottom Promotion