Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಕೂಲಿ ಚಿತ್ರದ ಅರ್ಧ ಬಜೆಟ್ ಸಂಭಾವನೆಗೆ: ಯಾರಿಗೆ ಎಷ್ಟು ಕೋಟಿ ಗೊತ್ತಾ?
ಕಾಲಿವುಡ್ ಸಿನಿಮಾಗಳು ಇಡೀ ದೇಶದಲ್ಲಿ ಸುದ್ದಿಯಾಗೋದು ಕಾಮನ್ ಎನ್ನುವಂತಾಗಿದೆ, ಈಗ ತಮಿಳು ಚಿತ್ರರಂಗದ ಮೊದಲ ಸಾವಿರ ಕೋಟಿ ಕ್ಲಬ್ ಸೇರುವ ಸಿನಿಮಾ ತಯಾರಾಗಿದೆ. ನಟ ರಜನಿಕಾಂತ್ ನಟನೆಯ ಕೂಲಿ ಸಿಸಿಮಾ ಈಗ ಇಡೀ ದೇಶದಲ್ಲಿ ಸುದ್ದಿಯಾಗುತ್ತಿದೆ. ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದಲ್ಲಿ ಎಲ್ಲಾ ಚಿತ್ರರಂಗದ ನಟರು ಸೇರಿದ್ದಾರೆ.
ಹೀಗಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಸದ್ದು ಮಾಡ್ತಿದೆ. ಅದ್ರಲ್ಲೂ ಇದೇ ಆಗಸ್ಟ್ 14ರಂದು ಚಿತ್ರವು ತೆರೆಗೆ ಬರುತ್ತಿದ್ದು, ಈಗಾಗಲೇ ಬುಕ್ ಮೈ ಶೋನಲ್ಲಿ 1 ಮಿಲಿಯನ್‌ಗೂ ಅಧಿಕ ಟಿಕೆಟ್ ಮಾರಾಟವಾಗಿದೆ ಎಂದು ಚಿತ್ರತಂಡವೇ ಹೇಳಿಕೊಂಡಿದೆ. ಹೀಗಾಗಿ ಈ ಸಿನಿಮಾ ಈ ವರ್ಷದ ಅತ್ಯಂತ ದೊಡ್ಡ ಹಿಟ್ ಸಿನಿಮಾ ಆಗಲಿದೆ ಎಂಬುದು ಸಿನಿ ಪಂಡಿತರ ಮಾತಾಗಿದೆ.

ಕೂಲಿ ಸಿನಿಮಾದಲ್ಲಿ ಬಾಲಿವುಡ್‌ನ ಆಮಿರ್ ಖಾನ್, ಸ್ಯಾಂಡಲ್‌ವುಡ್‌ನ ಉಪೇಂದ್ರ, ತೆಲುಗು ಸ್ಟಾರ್ ನಾಗಾರ್ಜುನ, ಬಾಹುಬಲಿ ಖ್ಯಾತಿಯ ಸತ್ಯರಾಜ್, ಶ್ರುತಿ ಹಾಸನ್, ಸುಬಿನ್ ಶಹಿರ್ ಸೇರಿ ಪ್ರಮುಖ ನಟರು ರಜನಿಕಾಂತ್ ಜೊತೆಗೆ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಸಿನಿಮಾ ಈಗ ಬಹಳ ಸದ್ದು ಮಾಡುತ್ತಿದೆ. ಭಾರತದ ಪ್ರಮುಖ 5 ಭಾಷೆಗಳಲ್ಲಿಯೂ ಸಿನಿಮಾ ತೆರೆಗೆ ಬರುತ್ತಿದೆ.
ಇನ್ನು ಈ ಸಿನಿಮಾದ ಬಜೆಟ್ ಎಷ್ಟು? ಯಾವ ನಟರಿಗೆ ಎಷ್ಟು ಸಂಭಾವನೆ ನೀಡಲಾಗಿದೆ ಎಂಬುದು ನಿಮಗೆ ಗೊತ್ತಾ? ಈ ಸಿನಿಮಾವನ್ನು ಬರೋಬ್ಬರಿ 350 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆಯಂತೆ. ಅದ್ರಲ್ಲೂ ನಟ, ನಟಿಯರ ಸಂಭಾವನೆಯೇ ಹೆಚ್ಚು. ಹಾಗಾದ್ರೆ ಯಾವ ನಟರಿಗೆ ಅದೆಷ್ಟು ಸಂಭಾವನೆ ನೀಡಲಾಗಿದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ರಜನಿಕಾಂತ್
ಕೂಲಿ ಸಿನಿಮಾದ ನಾಯಕ ರಜನಿಕಾಂತ್ ದೇವಾ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಕೂಲಿ ಸಿನಿಮಾಗಾಗಿ ಬರೋಬ್ಬರಿ 200 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸಿನಿಮಾ ಬಿಡುಗಡೆಯ ಬಳಿಕ ಈ ವೇತನ ಪರಿಷ್ಕರಣೆ ಕೂಡ ಆಗಲಿದೆ ಎಂದು ಸಹ ತಿಳಿದುಬಂದಿದೆ.
ಆಮಿರ್ ಖಾನ್
ಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ ದಹಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ತಮ್ಮದೇ ನಟನೆಯಿಂದ ಗಮನ ಸೆಳೆದಿರುವ ಅವರು ಕೂಲಿ ಚಿತ್ರದಲ್ಲಿನ ನಟನೆಗಾಗಿ 20 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.
ಉಪೇಂದ್ರ
ರಿಯಲ್ ಸ್ಟಾರ್ ಉಪೇಂದ್ರ ಕಾಲಿವುಡ್ ಮಂದಿಗೂ ಈಗ ಚಿರಪರಿಚಿತರು. ಹೀಗಾಗಿ ರಜನಿಕಾಂತ್ ಜೊತೆ ಕೂಲಿಯಲ್ಲಿ ನಟಿಸಿದ್ದಾರೆ. ಖಲೀಶಾ ಎಂಬ ಪಾತ್ರದಲ್ಲಿ ನಟಿಸಿರುವ ಅವರು ನಟನೆಗಾಗಿ ಬರೋಬ್ಬರಿ 5 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ನಾಗಾರ್ಜುನ
ತೆಲುಗು ಸೂಪರ್ ಸ್ಟಾರ್ ನಾಗಾರ್ಜುನ ರಜನಿಕಾಂತ್ ಜೊತೆಗೆ ತೆರೆ ಹಂಚಿಕೊಂಡಿದ್ದಾರೆ. ಅವರು ಸೈಮನ್ ಎಂಬ ಪಾತ್ರಕ್ಕಾಗಿ ಬರೋಬ್ಬರಿ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.
ಸತ್ಯರಾಜ್
ಬಾಹುಬಲಿಯಲ್ಲಿ ಕಟ್ಟಪ್ಪನಾಗಿ ಮಿಂಚಿದ್ದ ಸತ್ಯರಾಜ್ ಕೂಲಿ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ರಾಜಶೇಖರ್ ಎಂಬ ಪಾತ್ರದಲ್ಲಿ ನಟಿಸಿರುವ ಅವರು ಸುಮಾರು 5 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ.
ಶ್ರುತಿ ಹಾಸನ್
ಕೂಲಿ ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್ ಪ್ರೀತಿ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಅವರು ಸಿನಿಮಾದಲ್ಲಿ ನಟಿಸಲು 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಹಾಗೆ ನಿರ್ದೇಶಕ ಲೋಕೇಶ್ ಕನಕರಾಜ್ ಸುಮಾರ 50 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಹಾಗೆ ಈ ಸಿನಿಮಾದಲ್ಲಿ ನಟಿ ರಚಿತಾ ರಾಮ್ ಕೂಡ ಕಾಣಿಸಿಕೊಂಡಿದ್ದಾರೆ.



Click it and Unblock the Notifications
