Latest Updates
-
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ!
ಸಂಜಯ್ ಗಾಂಧಿಯಿಂದ ಅಜಿತ್ ಪವಾರ್: ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದ ರಾಜಕೀಯ ನಾಯಕರು
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಲಘು ವಿಮಾನ ಪತನಗೊಂಡು ವಿಮಾನದಲ್ಲಿದ್ದ ಎಲ್ಲರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಯದಲ್ಲಿ ಪತನವಾಗಿದೆ. ವಿಮಾನ ನಿಲ್ದಾಣದ ಬಳಿ ವಿಮಾನದ ಬಿಡಿ ಭಾಗಗಳಿಗೆ ಬೆಂಕಿ ಹೊತ್ತಿಕೊಂಡಿರುವ ವಿಡಿಯೋಗಳು ಹರಿದಾಡುತ್ತಿವೆ. ವಿಮಾನದಲ್ಲಿ ಸುಮಾರು 6 ಮಂದಿ ಇದ್ದರೂ ಎಂದು ತಿಳಿದುಬಂದಿದೆ.
ಉಪಮುಖ್ಯಮಂತ್ರಿ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. 66 ವರ್ಷದ ಅವರು ಬೆಳಗ್ಗೆ ವಿಮಾನ ಏರಿದ್ದರು, ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅವರು ಭಾಗಿಯಾಗಿ ಅನಂತರ ಸ್ಥಳೀಯ ಚುನಾವಣೆಯ ಪ್ರಚಾರಕ್ಕಾಗಿ ತೆರಳುತ್ತಿದ್ದರು ಎನ್ನಲಾಗಿದೆ. ಹಲವು ವರ್ಷದಿಂದ ಅವರು ಸಕ್ರೀಯ ರಾಜಕಾರಣದಲ್ಲಿದ್ದು, ಪ್ರಸ್ತುತ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿ ಹುದ್ದೆಯಲ್ಲಿದ್ದರು.

ಭಾರತೀಯ ರಾಜಕಾರಣದಲ್ಲಿ ಅಜಿತ್ ಪವಾರ್ ಮಾತ್ರವಲ್ಲದೆ ಹಲವರು ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಕ್ರೀಯ ರಾಜಕಾರಣದಲ್ಲಿ ಇದ್ದಾಗಲೇ ಹಲವರು ಪ್ರಾಣಕಳೆದುಕೊಂಡಿದ್ದಾರೆ. ಸ್ವತಂತ್ರ ಭಾರತದ ಬಳಿಕ ಈವರೆಗೆ ಅಪಘಾತದಲ್ಲಿ ಅಸುನೀಗಿದ ಪ್ರಮುಖ ನಾಯಕರ ಕುರಿತಾಗಿ ನಾವಿಲ್ಲಿ ತಿಳಿದುಕೊಳ್ಳೋಣ.
ಸಂಜಯ್ ಗಾಂಧಿ
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಹಾಗೆ ಕಾಂಗ್ರೆಸ್‌ನ ಮುಂದಿನ ಉತ್ತರಾಧಿಕಾರಿ ಎಂದು ಕರೆಯಲಾಗಿದ್ದ ಸಂಜಯ್ ಗಾಂಧಿ 1980 ಜೂನ್ 23ರಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು. ಕೇವಲ 33 ವರ್ಷದ ಅವರು ಎರಡು ಸೀಟ್‌ನ ಲಘು ವಿಮಾನವನ್ನು ಪರಿಕ್ಷಾರ್ಥವಾಗಿ ಹಾರಾಟ ನಡೆಸುವಾಗ ಸಫ್ದರ್ಜಂಗ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತ್ತು.
ಗುರ್ನಾಮ್ ಸಿಂಗ್
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ 1973 ಮೇ 31 ಎಂದು ದೆಹಲಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದರು.
ಬಲವಂತ್ರಾಯ್ ಮೆಹ್ತಾ
1965ರ ಯುದ್ಧದ ಸಮಯದಲ್ಲಿ ಪಾಕಿಸ್ತಾನದ ವಾಯುಪಡೆಯ ವಿಮಾನವು ನಾಗರೀಕ ವಿಮಾನದ ಮೇಲೆ ದಾಳಿ ಮಾಡಿದ ಪರಿಣಾಮ ಗುಜರಾತ್‌ನ ಎರಡನೇ ಮುಖ್ಯಮಂತ್ರಿ ಮೆಹ್ತಾ ಅವರು ಮೃತಪಟ್ಟಿದ್ದರು. ಅವರು ಭಾರತ ಪಾಕಿಸ್ತಾನ ಗಡಿಯಲ್ಲಿ ಅಧಿಕಾರಿಗಳ ಭೇಟಿಗೆ ತೆರಳುತ್ತಿದ್ದರು. ಆದ್ರೆ ಪಾಕ್ ಅಧಿಕಾರಿಗಳು ಇದು ಭಾರತದ ಯುದ್ಧ ವಿಮಾನ ಎಂದು ತಪ್ಪಾಗಿ ಗ್ರಹಿಸಿದ ಕಾರಣ ಈ ದಾಳಿ ನಡೆದಿತ್ತು.
ಮಾಧವರಾವ್ ಸಿಂಧಿಯಾ
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಂದೆ ಮಾಧವರಾವ್ ಸಿಂಧಿಯಾ ಚಾರ್ಟೆಡ್ ವಿಮಾನ ಪತನಗೊಂಡು ನಿಧನರಾದರು. 2001ರ ಸೆ,30ರಂದು ಅವರು ಕಾನ್ಪುರದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದರು. ಈ ವೇಳೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ವಿಮಾನ ಪತನಗೊಂಡಿತ್ತು.
ದೋರ್ಜಿ ಖಂಡು
ಅರುಣಾಚಲ ಪ್ರದೇಶದ ಆಗಿನ ಮುಖ್ಯಮಂತ್ರಿ ದೋರ್ಜಿ ಖಂಡು ಏಪ್ರಿಲ್ 30, 2011 ರಂದು ಚೀನಾ ಗಡಿಯ ಬಳಿಯ ದೂರದ ಪ್ರದೇಶದಲ್ಲಿ ತಮ್ಮ ಪವನ್ ಹನ್ಸ್ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ನಿಧನರಾದರು.
ವೈಎಸ್ ರಾಜಶೇಖರ ರೆಡ್ಡಿ
ಆಂಧ್ರಪ್ರದೇಶದ ಆಗಿನ ಮುಖ್ಯಮಂತ್ರಿಯಾಗಿದ್ದ ವೈಎಸ್ಆರ್ ಎಂದೇ ಜನಪ್ರಿಯರಾಗಿದ್ದ ರಾಜಶೇಖರ ರೆಡ್ಡಿ ಅವರು ಹೆಲಿಕಾಪ್ಟರ್ ಪತನದಿಂದ ನಿಧನರಾಗಿದ್ದರು.
ಓಪಿ ಜಿಂದಾಲ್ ಮತ್ತು ಸುರೇಂದರ್ ಸಿಂಗ್
ಕೈಗಾರಿಕಾ ಮತ್ತು ಹರಿಯಾಣ ವಿದ್ಯುತ್ ಸಚಿವ ಒಪಿ ಜಿಂದಾಲ್, ಮಾಜಿ ಕೇಂದ್ರ ಸಚಿವ ಸುರೇಂದರ್ ಸಿಂಗ್ ಮಾರ್ಚ್ 31, 2005 ರಂದು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.
ಜಿಎಂಸಿ ಬಾಲಯೋಗಿ
ಆಗಿನ ಲೋಕಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಬಾಲಯೋಗಿ, 2002 ರಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.



Click it and Unblock the Notifications