Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಜೈಲು ಸೇರಿ ಶಿಕ್ಷೆ ಅನುಭವಿಸಿದ ಸ್ಯಾಂಡಲ್‌ವುಡ್ ಮಂದಿ ಇವರು..!
ಸ್ಯಾಂಡಲ್‌ವುಡ್ ನಟ ದರ್ಶನ್ ಸದ್ಯ ಕೊಲೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಪ್ರಕರಣದಲ್ಲಿ 2ನೇ ಪ್ರಮುಖ ಆರೋಪಿಯಾಗಿರುವ ಅವರನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಮಾಡಿರುವ ಆರೋಪದಲ್ಲಿ ಅವರೀಗ ನಿರಂತರ ವಿಚಾರಣೆ ಎದುರಿಸಬೇಕಾಗಿದೆ. ಆದ್ರೆ ಸೆಲೆಬ್ರಿಟಿಗಳು ಒಂದಲ್ಲಾ ಒಂದು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಳ್ಳುವುದು ಇದೇನು ಹೊಸತಲ್ಲ.
ಸ್ಯಾಂಡಲ್‌ವುಡ್‌ನ ಹಲವು ಮಂದಿ ಸೆಲೆಬ್ರಿಟಿಗಳು ಹಲವಾರು ಕಾಣಗಳಿಂದ ಜೈಲು ಸೇರಿ ಶಿಕ್ಷೆ ಸಹ ಅನುಭವಿಸಿದ್ದಾರೆ. ಹಾಗಾದ್ರೆ ಈ ರೀತಿ ಜೈಲು ಶಿಕ್ಷೆ ಅನುಭವಿಸಿರುವ ಸೆಲೆಬ್ರಿಟಿಗಳು ಯಾರು? ಯಾವ ಕಾರಣಕ್ಕೆ ಅವರು ಜೈಲು ಶಿಕ್ಷೆ ಅನುಭವಿಸಿದ್ದರು ಎಂಬುದನ್ನು ಇಲ್ಲಿ ತಿಳಿಸಿದ್ದೇವೆ.

1 ದುನಿಯಾ ವಿಜಯ್ ಅಥವಾ ವಿಜಯ್ ಕುಮಾರ್
ನಟ ವಿಜಯ್ ಕುಮಾರ್ ದುನಿಯಾ ಸಿನಿಮಾದಿಂದ ಖ್ಯಾತಿ ಗಳಿಸಿದ ಬಳಿಕ ಹತ್ತಾರು ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಈಗ ಅವರು ಬಹು ಬೇಡಿಕೆಯ ನಟರಲ್ಲಿ ಒಬ್ಬರಾಗಿದ್ದಾರೆ. ಬರೀ ಕನ್ನಡ ಚಿತ್ರರಂಗ ಮಾತ್ರವಲ್ಲದೆ ಅನ್ಯ ಭಾಷೆ ಸಿನಮಾಗಳಲ್ಲು ನಟಿಸಿದ್ದಾರೆ. ಆದರೆ 2108ರಲ್ಲಿ ಅವರ ಮೇಲೆ ಹಲ್ಲೆ ಹಾಗೂ ಅಪಹರಣ ಕೇಸ್ ಸಂಬಂಧ ಜೈಲು ಸೇರಿದ್ದರು. ಬಾಡಿ ಬಿಲ್ಡಿಂಗ್ ಸ್ಪರ್ಧೆ ವೇಳೆ ಜಿಮ್ ಟ್ರೈನರ್ ಮಾರುತಿ ಗೌಡ ಹಾಗೂ ನಟ ವಿಜಯ್ ನಡುವೆ ಗಲಾಟೆ ನಡೆದಿತ್ತು. ಇದಾದ ಬಳಿಕ ಪೊಲೀಸರು ಇಬ್ಬರನ್ನು ಬಂಧಿಸಿದ್ದರು.
2 ಅಭಿನಯ
ಕನ್ನಡ ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ನಟಿಸಿದ್ದ ಕಲಾವಿದೆ ಅಭಿನಯ ವಿವಾದವೊಂದಕ್ಕೆ ಸಿಲುಕಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ವರದಕ್ಷಿಣೆ ಪ್ರಕರಣದಲ್ಲಿ ಅವರು ಹಣ ಕೇಳಿದ್ದ ಆರೋಪ ಎದುರಾಗಿತ್ತು. ಆಕೆಯ ತಾಯಿಗೆ 5 ವರ್ಷ ಹಾಗೂ ಅಭನಯ ಅವರಿಗೆ 2 ವರ್ಷಗಳ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿತ್ತು.
3 ಚೇತನ್ ಕುಮಾರ್
ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುವ ನಟ ಚೇತನ್ ಕುಮಾರ್ ಹಲವು ಬಾರಿ ಪ್ರಕರಣ ಎದುರಿಸಿದ್ದಾರೆ. ಸಿನಿಮಾ ರಂಗದಿಂದ ದೂರ ಇರುವ ಅವರು, 2023 ಹಿಂದೂ ಧರ್ಮದ ವಿರುದ್ಧ ಪೋಸ್ಟ್ ಹಾಕಿದ್ದರು ಎಂಬ ಕಾರಣಕ್ಕೆ ದೂರು ದಾಖಲಾಗಿತ್ತು. ಈ ವೇಳೆ ಎಫ್‌ಐಆರ್ ದಾಖಲಾಗಿ ಅವರನ್ನು ಬಂಧಿಸಲಾಗಿತ್ತು.
4 ರಾಗಿಣಿ-ಸಂಜನಾ
ಸ್ಯಾಂಡಲ್ ನಟಿಯರಾದ ರಾಗಿಣಿ ದ್ವವೇದಿ ಹಾಗೂ ಸಂಜನಾ ಗಲ್ರಾನಿ ಡ್ರಗ್ಸ್ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು. ಸುಮಾರು ರಾಗಿಣಿ ಸುಮಾರು 140 ದಿನ ಜೈಲಿನಲ್ಲಿದ್ದರೆ ಇತ್ತ ಸಂಜನಾ 85 ದಿನ ಜೈಲು ಸೇರಿದ್ದರು.
5 ಸೋನು ಶ್ರೀನಿವಾಸ್ ಗೌಡ
ರೀಲ್ಸ್ ಮಾಡಿ ಫೇಮಸ್ ಆಗಿದ್ದ ಸೋನು ಇತ್ತೀಚಿಗೆ ಸಿನಿಮಾದಲ್ಲೂ ನಟಿಸಿದ್ದಾರೆ. ಆದ್ರೆ ಇತ್ತೀಚಿಗೆ ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಅವರ ಬಂಧನವಾಗಿತ್ತು. ಆದರೆ ಈ ಗ ಜಾಮೀನಿನ ಮೇಲೆ ಹೊರಗಿದ್ದಾರೆ.
6 ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಪ್ರಸ್ತುತ ಜೈಲಿನಲ್ಲಿದ್ದಾರೆ. ಆದರೆ ಇದಕ್ಕೂ ಮೊದಲು 2011ರ ಸೆಪ್ಟೆಂಬರ್ 8ರಂದು ತಮ್ಮ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ್ದರು. ಈ ಕುರಿತು ಪತ್ನಿ ವಿಜಯಲಕ್ಷ್ಮಿ ದೂರು ನೀಡಿದ್ದರು. ದೂರು ನೀಡಿದ್ದ ಮರುದಿನವೇ ದರ್ಶನ್ ಬಂಧನವಾಗಿತ್ತು. ಈ ವೇಳೆ ಅವರು 28 ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದರು. ಸದ್ಯ ಈಗ ಮತ್ತೆ ಕೊಲೆ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಆದ್ರೆ ಈ ಪ್ರಕರಣ ತುಂಬಾ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಇದು ಎಲ್ಲಿಗೆ ಹೋಗಿ ತಲುಪಲಿದೆ ಅನ್ನೋದನ್ನ ನೋಡಬೇಕಿದೆ.



Click it and Unblock the Notifications
