Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೂನ್ ತಿಂಗಳಿನಲ್ಲಿ ಮಿಥುನ ರಾಶಿಯವರ ವೃತ್ತಿ, ಆರೋಗ್ಯ, ಆರ್ಥಿಕ, ವೈವಾಹಿಕ ಭವಿಷ್ಯ ಹೇಗಿದೆ?
ಗ್ರಹಗತಿಗಳ ಆಧಾರದ ಮೇಲೆ ಜೂನ್ 2023ರ ರಾಶಿಫಲ ನೀಡಲಾಗಿದ್ದು ನಾವಿಲ್ಲಿ ವೃಷಭ ರಾಶಿಯವರಿಗೆ ಜೂನ್ ತಿಂಗಳು ಹೇಗಿರಲಿದೆ? ಅವರ ಆರ್ಥಿಕ ಭವಿಷ್ಯ, ವೃತ್ತಿ ಜೀವನ ಭವಿಷ್ಯ, ಆರೋಗ್ಯ, ಕುಟುಂಬ ಹಾಗೂ ಪ್ರೀತಿಯ ಭವಿಷ್ಯದ ಬಗ್ಗೆ ಹೇಳಲಾಗಿದೆ. ಅಷ್ಟಕ್ಕು ಜೂನ್ ತಿಂಗಳಲ್ಲಿ ಮಿಥುನ ರಾಶಿಯವರ ಬಾಳಿನಲ್ಲಿ ಏನೆಲ್ಲಾ ಬದಲಾವಣೆಗಳು ಆಗಲಿದೆ ಅನ್ನೋದನ್ನು ತಿಳಿಯೋಣ.
ಮಿಥುನ ರಾಶಿಯವರ ಹನ್ನೊಂದನೇ ಮನೆಯಲ್ಲಿ ಗುರು, ರಾಹು, ಶುಕ್ರ ಮತ್ತು ಬುಧರು ಶುಭ ಸ್ಥಾನಗಳಲ್ಲಿರುವುದರಿಂದ ಮಿಥುನ ರಾಶಿಯವರು ಈ ತಿಂಗಳಿನಲ್ಲಿ ಜೀವನದ ಎಲ್ಲಾ ಅಂಶಗಳಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತಾರೆ. ಆದರೆ, ಶನಿಯು ನಿಮ್ಮ ಒಂಬತ್ತನೇ ಮನೆಯಲ್ಲಿ ಕುಳಿತುಕೊಂಡಿರುತ್ತಾನೆ. ಹನ್ನೊಂದನೇ ಮನೆಯಲ್ಲಿ ರಾಹು ಇರೋದ್ರಿಂದ ನಿಮಗೆ ಧನ ಲಾಭವಾಗುವ ಸಾಧ್ಯತೆಯಿದೆ. ಮಂಗಳ ಗ್ರಹವು ನಿಮ್ಮ ಎರಡನೇ ಮನೆಯಲ್ಲಿರುವುದರಿಂದ ಕೆಲಸದಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು. ಹೀಗಾಗಿ ಈ ಸವಾಲುಗಳನ್ನು ಎದುರಿಸಲು ಸಿದ್ಧರಾಗಿ.

ವೃತ್ತಿ ಭವಿಷ್ಯ
ಶನಿಯು ಮಿಥುನ ರಾಶಿಯವರ ಒಂಬತ್ತನೇ ಮನೆಯಲ್ಲಿ ಇರೋದ್ರಿಂದ ನಿಮ್ಮ ವೃತ್ತಿಜೀವನದಲ್ಲಿ ನೀವು ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ವೃತ್ತಿಜೀವನದಲ್ಲಿ ನೀವು ಹೊಸ ಅವಕಾಶಗಳನ್ನು ಪಡೆಯಬಹುದು. ನಿಮ್ಮ ಪ್ರಸ್ತುತ ಉದ್ಯೋಗದಲ್ಲಿ ಬಡ್ತಿಯ ಅವಕಾಶಗಳು ಸಹ ಸೃಷ್ಟಿಯಾಗೋ ಸಾಧ್ಯತೆಯಿದೆ. ವಿದೇಶಕ್ಕೆ ಹೋಗುವ ತಯಾರಿ ನಡೆಸಿದ್ದರೆ, ನಿಮಗೆ ವಿದೇಶದ ಉದ್ಯೋಗಾವಕಾಶಗಳು ದೊರೆಯುವ ಸಾಧ್ಯತೆಯಿದೆ. ಜೂನ್ 15 ರ ನಂತರ ವೃತ್ತಿ ಕ್ಷೇತ್ರದಲ್ಲಿ ನಿಮಗೆ ಅನೇಕ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ಕೆಲಸದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ತಮ್ಮ ಸಾಮರ್ಥ್ಯವನ್ನು ತೋರಿಸಲು ಸಾಧ್ಯವಾಗುತ್ತದೆ.
ವ್ಯಾಪಾರ ಭವಿಷ್ಯ
ಮಿಥುನ ರಾಶಿಯವರು ಸ್ವಂತ ವ್ಯವಹಾರವನ್ನು ಹೊಂದಿದ್ದರೆ ನೀವು ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಒಂದು ವೇಳೆ ಪಾಲುಗಾರಿಕೆಯಲ್ಲಿ ವ್ಯವಹಾರ ನಡೆಸುತ್ತಿದ್ದರೆ ಗಮನಾರ್ಹ ಲಾಭ ಪಡೆಯುತ್ತೀರಿ. ಈ ಸಮಯದಲ್ಲಿ ನೀವು ಹೊಸ ವ್ಯಾಪಾರ ಪಾಲುದಾರಿಕೆಗೆ ಪ್ರವೇಶಿಸುವ ಸಾಧ್ಯತೆಯಿದೆ. ಮತ್ತು ಇಷ್ಟು ದಿನ ಸಾಧಿಸಲು ಸಾಧ್ಯವಾಗದ್ದನ್ನು ಸಾಧಿಸುತ್ತೀರಿ. ನಿಮ್ಮ ಯೋಗ್ಯತೆಯನ್ನು ಸಾಬೀತುಪಡಿಸುವ ಮೂಲಕ ನಿಮ್ಮ ಪ್ರತಿಸ್ಪರ್ಧಿಗಳನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ.
ಆರ್ಥಿಕ ಭವಿಷ್ಯ
ಈ ತಿಂಗಳಿನಲ್ಲಿ ಮಿಥುನ ರಾಶಿಯವರ ಆರ್ಥಿಕ ಭವಿಷ್ಯದ ಬಗ್ಗೆ ಹೇಳುವುದಾದರೆ ಮಂಗಳ ಮತ್ತು ಚಂದ್ರ ಪ್ರಭಾವದಿಂದ ಖರ್ಚುಗಳ ಹೆಚ್ಚಳವಾಗುತ್ತದೆ. ಇದರಿಂದ ನೀವು ಕೆಲವು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಗುರುವಿನ ಸಂಚಾರದಿಂದಾಗಿ ನೀವು ಸಾಕಷ್ಟು ಹಣವನ್ನು ಗಳಿಸಲು ಸಾಧ್ಯವಾಗುತ್ತದೆ. ಜೊತೆಗೆ ನೀವು ಸಂಪತ್ತನ್ನು ಸಂಗ್ರಹಿಸಬಹುದು. ಈ ಸಮಯದಲ್ಲಿ ರಾಹು ನಿಮ್ಮ ಹನ್ನೊಂದನೇ ಸ್ಥಾನದಲ್ಲಿ ಇರೋದ್ರಿಂದ ಹಠಾತ್ ಆರ್ಥಿಕ ಲಾಭ ಮತ್ತು ಪೂರ್ವಜರ ಆಸ್ತಿಯನ್ನು ಪಡೆಯುವ ಸಾಧ್ಯತೆಯಿದೆ. ಈ ತಿಂಗಳಿನಲ್ಲಿ ನೀವು ಷೇರುಗಳಿಂದ ಲಾಭವನ್ನು ಪಡೆಯಬಹುದು.
ಆರೋಗ್ಯ ಭವಿಷ್ಯ
ಈ ತಿಂಗಳಿನಲ್ಲಿ ಮಿಥುನ ರಾಶಿಯವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸೋದು ತುಂಬಾನೇ ಮುಖ್ಯವಾಗುತ್ತದೆ. ಗ್ರಹಗಳ ಸ್ಥಾನ ಪರಿವರ್ತನೆಯಿಂದ ಈ ತಿಂಗಳಿನಲ್ಲಿ ಮಿಥುನ ರಾಶಿಯವರು ಭುಜಗಳಲ್ಲಿ ಒತ್ತಡ ಮತ್ತು ನೋವು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಆದರೆ ಭಯ ಪಡುವ ಅವಶ್ಯಕತೆಯಿಲ್ಲ. ಇದರಿಂದ ಯಾವುದೇ ದೊಡ್ಡ ಸಮಸ್ಯೆ ಆಗೋದಿಲ್ಲ.
ಪ್ರೀತಿ ಮತ್ತು ವೈವಾಹಿಕ ಭವಿಷ್ಯ
ಈ ತಿಂಗಳಿನಲ್ಲಿ ಮಿಥುನ ರಾಶಿಯವರ ಪ್ರೀತಿ ಮತ್ತು ವೈವಾಹಿಕ ಜೀವನದ ಬಗ್ಗೆ ನೋಡೋದಾದ್ರೆ ರಾಹುವಿನ ಜೊತೆಗೆ ಗುರು ಹನ್ನೊಂದನೇ ಮನೆಯಲ್ಲಿ ಇರೋದ್ರಿಂದ ಪ್ರೇಮ ಜೀವನದಲ್ಲಿ ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಹೀಗಾಗಿ ಈ ಸಮಯದಲ್ಲಿ ನೀವು ಪ್ರೀತಿಯಲ್ಲಿ ಯಶಸ್ಸು ಕಾಣುತ್ತೀರಿ. ನಿಮ್ಮ ಮತ್ತು ನಿಮ್ಮ ಸಂಗಾತಿಯ ನಡುವೆ ಉತ್ತಮ ಹೊಂದಾಣಿಕೆ ಇರುತ್ತದೆ.
ಇನ್ನೂ ಪ್ರೇಮಿಗಳ ನಡುವಿನ ಸಂಬಂಧವೂ ಬಲವಾಗಿರುತ್ತದೆ. ಇನ್ನೂ ರಾಹು ಮತ್ತು ಗುರು ಹನ್ನೊಂದನೇ ಮನೆಯಲ್ಲಿ ಸಂಯೋಗವಾಗಿರುವುದರಿಂದ ಮಿಥುನ ರಾಶಿಯವರಿಗೆ ಈ ತಿಂಗಳು ಮದುವೆಯಾದರೆ ಒಳ್ಳೆಯದಾಗುತ್ತದೆ. ಗುರುಗ್ರಹವು ಹನ್ನೊಂದನೇ ಮನೆಯಲ್ಲಿ ಇರೋದ್ರಿಂದ ನೀವು ಪ್ರೀತಿ ಮತ್ತು ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬಹುದು.
ಪರಿಹಾರ
ಪ್ರತಿದಿನ 41 ಬಾರಿ "ಓಂ ನಮೋ ನಾರಾಯಣ" ಎಂದುಜಪಿಸಿ.
ಪ್ರತಿದಿನ 11 ಬಾರಿ "ಓಂ ಬುಧಾಯ ನಮಃ" ಎಂದು ಜಪಿಸಿ.
ಶನಿವಾರದಂದು ಶನಿ ಗ್ರಹಕ್ಕೆ ಯಜ್ಞ-ಹವನ ಮಾಡಿಸಿ.



Click it and Unblock the Notifications