Latest Updates
-
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ!
ಮೇಷ ರಾಶಿಗೆ ಗುರು ಪ್ರವೇಶ 2023 : ಈ 5 ರಾಶಿಯವರಿಗೆ ಉದ್ಯೋಗ, ಆರ್ಥಿಕ ಲಾಭ
ಗುರು ಗ್ರಹವನ್ನು ಲಾಭದಾಯಕ ಗ್ರಹವೆಂದು ಪರಿಗಣಿಸಲಾಗುತ್ತದೆ. ಏಪ್ರಿಲ್ 27 ರಂದು ಗುರು ಮೇಷ ರಾಶಿಯಲ್ಲಿ ಉದಯಿಸಲಿದ್ದಾರೆ. ಮೇಷ ರಾಶಿಯಲ್ಲಿ ಗುರು ಉದಯಿಸುತ್ತಿರೋದ್ರಂದ ಕೆಲ ರಾಶಿಗೆ ಶುಭ ಫಲವನ್ನು ನೀಡಲಿದ್ದಾನೆ. ಈ ಸಂದರ್ಭದಲ್ಲಿ ಐದು ರಾಶಿಗಳ ಆರ್ಥಿಕ ಸ್ಥಿತಿಯು ಉತ್ತಮವಾಗುತ್ತದೆ. ಗುರು ಮೇಷರಾಶಿಗೆ ಪ್ರವೇಶ ಮಾಡಿರೋದ್ರಿಂದ ಯಾವೆಲ್ಲಾ ರಾಶಿಯವರಿಗೆ ಶುಭ ಫಲವನ್ನು ನೀಡಲಿದ್ದಾನೆ ಎಂಬುವುದನ್ನು ತಿಳಿಯೋಣ.
ಮೇಷ ರಾಶಿ
ಗುರುವು ಮೇಷ ರಾಶಿಯನ್ನು ಪ್ರವೇಶಿಸಿರೋದ್ರಿಂದ ಈ ಅವಧಿಯಲ್ಲಿ ನಿಮ್ಮ ವೃತ್ತಿಜೀವನದಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷೆ ಮಾಡಬಹುದು. ಬಡ್ತಿ ಪಡೆಯುವ ಸಾಧ್ಯತೆ ಹೆಚ್ಚಾಗಿದೆ. ಅಷ್ಟೇ ಅಲ್ಲ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸಕ್ಕೆ ಪ್ರೋತ್ಸಾಹ ನೀಡುತ್ತಾರೆ. ಈ ಸಮಯದಲ್ಲಿ ನಿಮಗೆ ಹೊಸ ಜನರ ಪರಿಚಯವಾಗುತ್ತದೆ. ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ.

ಮಿಥುನ ರಾಶಿ
ಗುರುವು ಮೇಷ ರಾಶಿಯನ್ನು ಪ್ರವೇಶಿಸಿರೋದ್ರಿಂದ ಮಿಥುನ ರಾಶಿಯವರು ಗುರು ಗ್ರಹದ ಲಾಭವನ್ನು ಪಡೆಯಲಿದ್ದಾರೆ. ಮಿಥುನ ರಾಶಿಯವರಿಗೆ ಹಣ ಗಳಿಸಲು ಹಲವು ಮಾರ್ಗಗಳು ತೆರೆದುಕೊಳ್ಳುತ್ತದೆ. ಇದು ಉದ್ಯಮಿಗಳಿಗೆ ತುಂಬಾ ಒಳ್ಳೆಯ ಸಮಯ. ವ್ಯಾಪಾರದಲ್ಲಿ ಲಾಭ ಪಡೆಯಬಹುದು. ಅತಿ ಕಡಿಮೆ ಸಮಯದಲ್ಲಿ ಹೆಚ್ಚಿನ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಅವಧಿಯು ಉದ್ಯೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಬಡ್ತಿಯ ಅವಕಾಶವಿರುತ್ತದೆ. ಈ ಸಮಯದಲ್ಲಿ, ನಿಮ್ಮ ಆರ್ಥಿಕ ಸ್ಥಿತಿಯು ತುಂಬಾ ಉತ್ತಮವಾಗಿರುತ್ತದೆ. ಅದೃಷ್ಟ ನಿಮ್ಮ ಪರವಾಗಿರುತ್ತದೆ. ನಿಮ್ಮ ಪೂರ್ವಜರ ಆಸ್ತಿ ನಿಮ್ಮ ಕೈ ಸೇರುವ ಸಾಧ್ಯತೆ ಇದೆ.
ಕರ್ಕಾಟಕ ರಾಶಿ
ಗುರುವು ಮೇಷ ರಾಶಿಯನ್ನು ಪ್ರವೇಶಿಸಿರೋದ್ರಿಂದ ಕರ್ಕಾಟಕ ರಾಶಿಯವರಿಗೆ ಇದು ಉತ್ತಮ ಸಮಯ. ಈ ಸಮಯದಲ್ಲಿ, ನಿಮ್ಮ ವೃತ್ತಿಜೀವನವು ತುಂಬಾ ಉತ್ತಮವಾಗಿರುತ್ತದೆ. ನೀವು ಕೆಲಸದ ಸ್ಥಳದಲ್ಲಿ ಉನ್ನತ ಸ್ಥಾನ ಮತ್ತು ಪ್ರತಿಷ್ಠೆಯನ್ನು ಪಡೆಯುತ್ತೀರಿ. ಇನ್ನೂ ಈ ಸಮಯದಲ್ಲಿ ನಿಮ್ಮ ಅದೃಷ್ಟದಿಂದಾಗಿ ಬಡ್ತಿಯುಂಟಾಗುವ ಸಾಧ್ಯತೆಯಿದೆ.
ಧನು ರಾಶಿ
ಗುರುವು ಮೇಷ ರಾಶಿಯನ್ನು ಪ್ರವೇಶಿಸಿರೋದ್ರಿಂದ ಧನು ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದ್ದಾನೆ. ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿಯೂ ಅದೃಷ್ಟ ನಿಮ್ಮ ಕೈ ಹಿಡಿಯುತ್ತದೆ. ವೃತ್ತಿ ಜೀವನದಲ್ಲಿ ನೀವು ನಿರೀಕ್ಷಿಸದ ಬದಲಾವಣೆ ಆಗಲಿದೆ. ಇದರಿಂದ ನಿಮ್ಮ ಬಾಳಿನಲ್ಲಿ ಎಲ್ಲವೂ ಒಳ್ಳೆಯದಾಗಲಿದೆ. ಈ ಸಮಯದಲ್ಲಿ ನಿಮಗೆ ಹೊಸ ವಿಷಯಗಳನ್ನು ಕಲಿಯಲು ಅವಕಾಶವಿದೆ. ನಿಮ್ಮ ಸಂಗಾತಿಯೊಂದಿಗೆ ನಿಮ್ಮ ಬಾಂಧವ್ಯ ಉತ್ತಮವಾಗುತ್ತದೆ.
ಮೀನ ರಾಶಿ
ಗುರುವು ಮೇಷ ರಾಶಿಯನ್ನು ಪ್ರವೇಶಿಸಿರೋದ್ರಿಂದ ಮೀನ ರಾಶಿಯವರ ಬಾಳಿನಲ್ಲಿ ಎಲ್ಲವೂ ಒಳ್ಳೆಯದಾಗಲಿದೆ. ಉದ್ಯೋಗದ ವಿಷಯದಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತೀರಿ. ಇಷ್ಟೇ ಅಲ್ಲ, ನೀವು ಆಸ್ತಿಯಲ್ಲೂ ಹೂಡಿಕೆ ಮಾಡುತ್ತೀರಿ. ಈ ಅವಧಿಯಲ್ಲಿ, ನಿಮ್ಮ ಮನೆಯಲ್ಲಿ ಕೆಲವು ಶುಭ ಕಾರ್ಯಗಳು ನಡೆಯುವ ಸಾಧ್ಯತೆ ಇದೆ. ಉದ್ಯೋಗಸ್ಥರಿಗೆ ಹೊಸ ಅವಕಾಶಗಳು ಸಿಗಲಿವೆ. ಈ ಸಂದರ್ಭದಲ್ಲಿ ನಿಮ್ಮ ಜೀವನದಲ್ಲಿ ಸಂತೋಷವೇ ತುಂಬಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯೂ ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ಹಣ ಹೂಡಿಕೆ ಮಾಡಬಹುದು.



Click it and Unblock the Notifications
