Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Happy Kannada Rajyotsava 2025: ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ಈ ಹೃದಯಸ್ಪರ್ಶಿ ಶುಭಾಶಯ ಕಳುಹಿಸಿ!
Kannada Rajyotsava 2025 Wishes: ಕನ್ನಡಿಗರ ಪಾಲಿಗೆ ನವೆಂಬರ್ 1 ಅತ್ಯಂತ ಮಹತ್ವದ ದಿನ. ಕರ್ನಾಟಕ ರಾಜ್ಯ ರಚನೆಯ ಈ ಐತಿಹಾಸಿಕ ದಿನವನ್ನು ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ (Kannada Rajyotsava 2025) ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ನವೆಂಬರ್ ತಿಂಗಳೆಲ್ಲಾ ಕನ್ನಡದ ಕಂಪು ಎಲ್ಲೆಡೆ ಹರಡುತ್ತದೆ.
ಕರುನಾಡಿನ ಹೆಮ್ಮೆಯ ಈ ಹಬ್ಬದಂದು, ರಾಜಕಾರಣಿಗಳು, ಸ್ನೇಹಿತರು ಮತ್ತು ನಿಮ್ಮ ಪ್ರೀತಿಪಾತ್ರರೊಂದಿಗೆ ಹಂಚಿಕೊಳ್ಳಲು ಇಲ್ಲಿ ಕೆಲವು ವಿಶೇಷ ಶುಭಾಶಯಗಳಿವೆ. ಕನ್ನಡ ರಾಜ್ಯೋತ್ಸವ 2025ರ ಈ ಸಂಭ್ರಮವನ್ನು ಎಲ್ಲರೂ ಒಟ್ಟಾಗಿ ಆಚರಿಸೋಣ.
• ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

• ಎಲ್ಲಾದರು ಇರು, ಎಂತಾದರು ಇರು,
ಎಂದೆಂದಿಗು ನೀ ಕನ್ನಡವಾಗಿರು.
ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
• ಪ್ರೀತಿಯ ಕನ್ನಡ ಬಂಧುಗಳಿಗೆಲ್ಲರಿಗೂ
ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಕನ್ನಡಕ್ಕಾಗಿ ದುಡಿದ,
ಮಡಿದ ಮಹನೀಯರನ್ನೆಲ್ಲಾ ಗೌರವದಿಂದ ನೆನೆಯೋಣ.
ಕನ್ನಡವನ್ನು ಕಟ್ಟುವ,ಬೆಳೆಸುವ ಮತ್ತು ಉಳಿಸುವ ಕಾಯಕದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುತ್ತೇವೆ ಎಂದು ಪಣತೊಡೋಣ.
ಕನ್ನಡವೇ ಸತ್ಯ,
ಕನ್ನಡವೇ ನಿತ್ಯ.
• "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ"
ಕರ್ನಾಟಕದ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಾಶಯಗಳು.
ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ನಮ್ಮ ಹೆಗ್ಗುರುತು. ಅದನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ.
ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ.
• ಕರ್ನಾಟಕ ರಾಜ್ಯೋತ್ಸವ ಸಮಸ್ತ ಕನ್ನಡಿಗರ ಹೆಮ್ಮೆಯ ಹಬ್ಬ. ಕನ್ನಡ ನಾಡು, ನುಡಿಯನ್ನು ಸಂಭ್ರಮಿಸುವ ಸುದಿನ.
ಎಲ್ಲ ಕನ್ನಡಾಭಿಮಾನಿಗಳಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು.
• ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ.
1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ.
ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
• || ಶಂಕರ ರಾಮಾನುಜ ವಿದ್ಯಾರಣ್ಯ
ಬಸವೇಶ್ವರ ಮಧ್ವರ ದಿವ್ಯಾರಣ್ಯ,
ರನ್ನ ಷಡಕ್ಷರಿ ಪೊನ್ನ
ಪಂಪ ಲಕುಮಿಪತಿ ಜನ್ನ,
ಕುಮಾರವ್ಯಾಸರ ಮಂಗಳ ಧಾಮ,
ಕವಿ ಕೋಗಿಲೆಗಳ ಪುಣ್ಯರಾಮ,
ನಾನಕ ರಾಮಾ ನಂದ ಕಬೀರರ,
ಭಾರತ ಜನನಿಯ ತನುಜಾತೆ,
ಜಯಹೇ ಕರ್ನಾಟಕ ಮಾತೆ ||
ಕನ್ನಡ ನಾಡೋತ್ಸವ
• ಸದಾ ಕನ್ನಡಾಂಬೆಯ ಜ್ಯೋತಿ ಬೆಳಗುತ್ತಿರಲಿ ಎಂದು ಪ್ರಾರ್ಥಿಸುತೇನೆ.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು!
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
• ಕನ್ನಡ ನಾಡು, ನುಡಿ, ಸಂಸ್ಕೃತಿ, ಇತಿಹಾಸ, ಪರಂಪರೆಗಳು ಸದಾ ಬೆಳಗಲಿ, ಸಮೃದ್ಧ ಕನ್ನಡ ನಾಡು ನಿರ್ಮಾಣವಾಗಲಿ.
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
• ಕರುನಾಡ ತಾಯಿ ಸದಾ ಚಿನ್ಮಯಿ!
ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಅನ್ನ ಕೋಡೋ ನಮ್ಮ ನಾಡು-ನುಡಿಯ ಕಂಪು ಎಲ್ಲೆಡೆಗೆ ಪಸರಿಸಲಿ.
• ಕರ್ನಾಟಕ ಎಂಬುದೇನು
ಹೆಸರೆ ಬರಿಯ ಮಣ್ಣಿಗೆ?
ಮಂತ್ರ ಕಣಾ ! ಶಕ್ತಿ ಕಣಾ !
ತಾಯಿ ಕಣಾ ! ದೇವಿ ಕಣಾ !
ಬೆಂಕಿ ಕಣಾ ! ಸಿಡಿಲು ಕಣಾ ! - ಕುವೆಂಪು
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು
• ಪ್ರೀತಿಯ ಕನ್ನಡ ಬಂಧುಗಳಿಗೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಕನ್ನಡಕ್ಕಾಗಿ ದುಡಿದ, ಮಡಿದ ಮಹನೀಯರನ್ನೆಲ್ಲಾ ಗೌರವದಿಂದ ನೆನೆಯೋಣ.
ಕನ್ನಡ ಬರೀ ಭಾಷೆಯಲ್ಲ, ಅದು ನಮ್ಮ ಉಸಿರು, ನಮ್ಮ ಬದುಕು ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ.
ಕನ್ನಡವೇ ಸತ್ಯ.
ಕನ್ನಡವೇ ನಿತ್ಯ.
• ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ವಿಶ್ವದಾದ್ಯಂತ ಇರುವ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಆತ್ಮೀಯ ಶುಭಾಶಯಗಳು.
"ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು" ಎಂಬ ಅಣ್ಣಾವ್ರ ಹಾಡಿನಂತೆ ಈ ನೆಲದ ಸಂಸ್ಕೃತಿಯನ್ನು ಪ್ರೀತಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಕನ್ನಡದ ಕಂಪನ್ನು ಪಸರಿಸೋಣ.
ಜೈ ಭುವನೇಶ್ವರಿ, ಜೈ ಕರ್ನಾಟಕ!



Click it and Unblock the Notifications












