Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
School Holiday: 3 ದಿನ ಭಾರೀ ಮಳೆ.. 8 ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ! ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವದಿಂದಾಗಿ ವ್ಯಾಪಕ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಬಿಡುವಿಲ್ಲದೆ ಮಳೆ (Karnataka Weather) ಸುರಿಯುತ್ತಿದೆ. ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದ್ದು, ಮೂರು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ (school holiday in karnataka) ಘೋಷಿಸಲಾಗಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ (Heavy Rain in Karnataka) ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ವಿಜಯಪುರದಲ್ಲೂ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಹೀಗಾಗಿ ಮನೆಯಿಂದ ಹೊರಹೋಗುವ ಮುನ್ನ ಜಾಗರೂಕರಾಗಿರಿ.

8 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆಯಿಂದಾಗಿ ರಾಜ್ಯದ ಒಟ್ಟು 8 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ, ಕೊಡಗು, ಹಾಸನ, ಬೀದರ್, ಉತ್ತರ ಕನ್ನಡ, ಧಾರವಾಡ, ಚಿಕ್ಕಮಗಳೂರು ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ಇಂದು (ಆಗಸ್ಟ್ 19 ರಂದು) ರಜೆ ಘೋಷಿಸಲಾಗಿದೆ. ಜೋರು ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳು ಮನೆಯಲ್ಲೇ ಸುರಕ್ಷಿತವಾಗಿರಬೇಕೆಂದು ಹೇಳಿದೆ. ವಾಯುಭಾರ ಕುಸಿತದಿಂದ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
• ಕೊಡಗು: ಕೊಡಗು ಜಿಲ್ಲೆಯಲ್ಲೂ ಮಳೆ ಆರ್ಭಟ ಹೆಚ್ಚಾಗಿದೆ. ಜಿಲ್ಲಾಧಿಕಾರಿ ವೆಂಕಟರಾಜ್ ಅವರು ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆ ಮತ್ತು ಪಿಯು. ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
• ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ, ಹುಕ್ಕೇರಿ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
• ಹಾಸನ: ಜಿಲ್ಲೆಯ ಸಕಲೇಶಪುರ, ಅರಕಲಗೂಡು ತಾಲೂಕಿನ ಅಂಗನವಾಡಿ, ಶಾಲೆ. ಬೇಲೂರು ತಾಲೂಕಿನ ಅರೆಹಳ್ಳಿ, ಬಿಕ್ಕೋಡು ಹೋಬಳಿಯ ಶಾಲೆ. ಆಲೂರು ತಾಲೂಕಿನ ಕೆ.ಹೊಸಕೋಟೆ, ಪಾಳ್ಯ ಹೋಬಳಿಯ ಶಾಲೆಗಳಿಗೆ ರಜೆ.
• ಧಾರವಾಡ: ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ.
• ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ.
• ಉಡುಪಿ: ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜುಗಳು ಮತ್ತು ಐಟಿಐಗಳಿಗೆ ರಜೆ ನೀಡಲಾಗಿದೆ.
• ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ.
ಈ ಜಿಲ್ಲೆಗಳಿಗೆ ರೆಡ್ ಅಲರ್ಟ್
ಇಂದು (ಆಗಸ್ಟ್ 19) ಮತ್ತು ನಾಳೆ (ಆಗಸ್ಟ್ 20) ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಪ್ರಸ್ತುತ, ಬೆಳಗಾವಿ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇದೆ.
ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಸೇರಿದಂತೆ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆಗಸ್ಟ್ 21 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಇನ್ನು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 40-50 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿಯೂ ನಿರಂತರ ಮಳೆ ಸುರಿಯುತ್ತಿದೆ. ಇದರಿಂದಾಗಿ ನಾಗರಿಕರು ಪರದಾಡುತ್ತಿದ್ದಾರೆ. ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ.



Click it and Unblock the Notifications

