Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಮಳೆಯ ಅಬ್ಬರ.. 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ! 5 ಜಿಲ್ಲೆಗೆ ರೆಡ್ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇಂದು ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ (Karnataka Weather) ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಇನ್ನು ಎರಡು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇದರ ಪರಿಣಾಮವಾಗಿ, ಇಂದು (ಆಗಸ್ಟ್ 20) ಆರು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ (school holiday in karnataka) ಘೋಷಿಸಲಾಗಿದೆ.
ರಾಜ್ಯದಲ್ಲಿ ಮಳೆಯ ಅಬ್ಬರ (Heavy Rain in Karnataka) ಮುಂದುವರಿದಿದ್ದು, ಇಂದು 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಿಸಲಾಗಿದೆ. ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಯಲ್ಲಾಪುರ, ಮುಂಡಗೋಡು, ದಾಂಡೇಲಿ, ಜೋಯಿಡಾ ಮತ್ತು ಶಿರಸಿಯ ಅಂಗನವಾಡಿ ಮತ್ತು ಎಲ್ಲಾ ಶಾಲಾ, ಕಾಲೇಜುಗಳಿಗೂ ರಜೆ ನೀಡಲಾಗಿದೆ. ಆದರೆ, ಯಾದಗಿರಿ ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳು ಮಾತ್ರ ಇಂದು ಮುಚ್ಚಿರುತ್ತವೆ.

ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದ್ದು, ನಾಳೆ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಮಾನ ಇಲಾಖೆ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಈ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಣೆ
ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು 'ರೆಡ್ ಅಲರ್ಟ್' ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ 'ಆರೆಂಜ್ ಅಲರ್ಟ್' ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೂ 'ಆರೆಂಜ್ ಅಲರ್ಟ್' ಮುಂದುವರಿದಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಈ 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
• ಬೆಳಗಾವಿ: ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ ಮತ್ತು ಚಿಕ್ಕೋಡಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
• ಬಾಗಲಕೋಟೆ: ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುಗಳವರೆಗೆ ರಜೆ.
• ಧಾರವಾಡ: ಅಂಗನವಾಡಿ, ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಿಸಲಾಗಿದೆ.
• ಹಾವೇರಿ: ಜಿಲ್ಲೆಯ ಅಂಗನವಾಡಿ ಮತ್ತು ಎಲ್ಲಾ ಶಾಲಾ, ಕಾಲೇಜುಗಳಿಗೂ ರಜೆ.
• ಉತ್ತರ ಕನ್ನಡ: ಜಿಲ್ಲೆಯ ಸಿದ್ದಾಪುರ, ಯಲ್ಲಾಪುರ, ಮುಂಡಗೋಡು, ದಾಂಡೇಲಿ, ಜೋಯಿಡಾ ಮತ್ತು ಶಿರಸಿಯ ಅಂಗನವಾಡಿ ಮತ್ತು ಎಲ್ಲಾ ಶಾಲಾ, ಕಾಲೇಜುಗಳಿಗೂ ರಜೆ ನೀಡಲಾಗಿದೆ.
• ಯಾದಗಿರಿ: ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳು ಮಾತ್ರ ಇಂದು ಮುಚ್ಚಿರುತ್ತವೆ.
ಬೆಂಗಳೂರಿನಲ್ಲಿಯೂ ಮಳೆಯ ಆರ್ಭಟ
ಬೆಂಗಳೂರಿನಲ್ಲಿಯೂ ಮಳೆಯ ಆರ್ಭಟ ಮುಂದುವರಿದು, ನಾಗರಿಕರು ಟ್ರಾಫಿಕ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ ಎರಡು-ಮೂರು ದಿನಗಳ ಕಾಲ ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇದಲ್ಲದೆ, ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದ ಮುಂಗಾರು ಮಳೆಯು ಮತ್ತಷ್ಟು ತೀವ್ರಗೊಂಡಿದೆ. ಹವಾಮಾನ ಇಲಾಖೆಯು ಕರಾವಳಿ ಭಾಗಗಳಿಗೆ ಭಾರೀ ಅಲರ್ಟ್ ಘೋಷಿಸಿದ್ದು, ಗುಡ್ಡ ಕುಸಿತದ ಬಗ್ಗೆಯೂ ಎಚ್ಚರಿಕೆ ನೀಡಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಬೆಳಗಾವಿ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಜಾರಿಯಲ್ಲಿದೆ. ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಸೇರಿದಂತೆ ಆರು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಹಾಗೂ ಉಳಿದ ಎಲ್ಲಾ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿ.ಮೀ. ಇರಲಿದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.



Click it and Unblock the Notifications

