Latest Updates
-
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ?
Karnataka Rains: 5 ದಿನ ರಣ ಮಳೆ.. 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ! ಎಲ್ಲೆಲ್ಲಿ ರೆಡ್ ಅಲರ್ಟ್
ರಾಜ್ಯದ ಹಲವೆಡೆ ಮತ್ತೆ ವರುಣ ಅಬ್ಬರಿಸುತ್ತಿದ್ದಾನೆ. ಜುಲೈ 31ರವರೆಗೂ ರಣ ಮಳೆ (Karnataka Weather) ಮುಂದುವರಿಯಲಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ. ಈಗಾಗಲೇ ಐದು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ನೀರು ಇರುವ ಪ್ರದೇಶಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದಾದ್ಯಂತ ಭಾರೀ ಮಳೆ (Karnataka Rain) ಮುಂದುವರಿದಿದ್ದು, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ ಸಹ ರೆಡ್ ಅಲರ್ಟ್ ನೀಡಲಾಗಿದ್ದು, ಜುಲೈ 30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಮನೆ, ತೋಟಗಳಿಗೆ ನೀರು ನುಗ್ಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಜುಲೈ 31ರವರೆಗೂ ಭಾರೀ ಮಳೆಯ ಮುನ್ಸೂಚನೆ ಇದ್ದು, ಶಾಲಾ-ಕಾಲೇಜುಗಳಿಗೆ ರಜೆ (Holiday Declared For Schools) ಘೋಷಿಸಲಾಗಿದೆ.

ಈ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ಸೇರಿದಂತೆ ಉಳಿದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೆಂಗಳೂರಿನಲ್ಲಿ ಕೆಲ ಗಂಟೆಗಳಲ್ಲೇ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಕೊಡಗು ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ವಿವಿಧೆಡೆ ಮನೆಗಳಿಗೆ ಹಾನಿಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಗಾಳಿಯ ರಭಸ ಹೆಚ್ಚಾಗಿದ್ದು, ಮಳೆಯೂ ತೀವ್ರತೆಯನ್ನು ಪಡೆದುಕೊಂಡಿರುವುದರಿಂದ ಎತ್ತರದ ಮತ್ತು ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಶಿವಮೊಗ್ಗದ ಈ ತಾಲೂಕಿನ ಶಾಲೆಗಳಿಗೆ ರಜೆ
ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇಂದು ಕೂಡ ಈ ಜಿಲ್ಲೆಗೆ ಆರೇಂಜ್ ಅಲರ್ಟ್ ನೀಡಿದೆ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಇಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಸೊರಬ ತಾಲ್ಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಆಯಾ ತಾಲೂಕಿನ ತಹಶೀಲ್ದಾರ್‌ಗಳು ಘೋಷಿಸಿದ್ದಾರೆ. ಇನ್ನು ಈ ರಜೆಯ ಅವಧಿಯ ತರಗತಿ ಪಠ್ಯಗಳನ್ನು ಮುಂದಿನ ರಜೆ ದಿನಗಳಲ್ಲಿ ಸರಿದೂಗಿಸುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ.
ಇಂದು ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಸಹ ಜೋರು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
• ಹಾಸನ: ಜಿಲ್ಲೆಯ ಸಕಲೇಶಪುರ ಮತ್ತು ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ.
• ಚಿಕ್ಕಮಗಳೂರು: ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಶಾಲೆಗಳಿಗೆ ರಜೆ.
• ಉತ್ತರ ಕನ್ನಡ: ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ, ಹೊನ್ನಾವರ, ಭಟ್ಕಳ, ದಾಂಡೇಲಿ, ಜೋಯಿಡಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ.
• ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ. ಭದ್ರಾವತಿ ಹಾಗೂ ಶಿವಮೊಗ್ಗದಲ್ಲೂ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ.
• ಕೊಡಗು: ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ.



Click it and Unblock the Notifications











