Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಮುಂದಿನ 7 ದಿನಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ ..! ಹವಾಮಾನ ಇಲಾಖೆ ಮುನ್ಸೂಚನೆ!
ರಾಜ್ಯದ ಹಲವು ಭಾಗದಲ್ಲಿ ಮಳೆ ಕ್ಷೀಣಿಸಿದೆ. ಕಳೆದೊಂದು ವಾರದಿಂದ ಸುರಿಯುತ್ತಿದ್ದ ಈಗ ಸ್ವಲ್ಪ ಬಿಡುವು ನೀಡಿದೆ. ಅದರಲ್ಲೂ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಈಗ ಕೊಂಚ ಬಿಡುವು ನೀಡಿ ಬಿಸಲು ಬೀಳುತ್ತಿದೆ.
ಪ್ರವಾಹ, ನದಿ ಉಕ್ಕಿ ಮುಳುಗಡೆಯಾದ ಪ್ರಕರಣಗಳಂತಹ ಸಾಲು ಸಾಲು ದುರಂತಗಳ ನಡುವೆ ಈಗ ಬಿಸಿಲು ಕಾಣುತ್ತಿದ್ದೇವೆ, ಆದರೆ ಈ ನಡುವೆ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗುವ ಮನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಈಗ ಆತಂಕ ಹೆಚ್ಚುವಂತೆ ಮಾಡಿದೆ. ಮುಂದಿನ 7 ದಿನಗಳ ಕಾಲ ದೇಶದ ಈ ವಿವಿಧ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾಗಿ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಏಳು ದಿನಗಳಲ್ಲಿ ರಾಜಸ್ಥಾನ, ಉತ್ತರ ಪ್ರದೇಶ, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಅಲ್ಲದೆ ಮುಂದಿನ ಐದು ದಿನಗಳಲ್ಲಿ ಕೇರಳ, ತಮಿಳುನಾಡು, ದಕ್ಷಿಣ ಒಳನಾಡು ಕರ್ನಾಟಕ ಮತ್ತು ರಾಯಲಸೀಮಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎದಿದೆ.
ವಾರದ ಹೆಚ್ಚಿನ ದಿನಗಳಲ್ಲಿ ಪಶ್ಚಿಮ ಮತ್ತು ಮಧ್ಯ ಭಾರತದಾದ್ಯಂತ ಸಾಕಷ್ಟು ವ್ಯಾಪಕವಾದ ಬೆಳಕಿನಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ಪಶ್ಚಿಮ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಆಗಸ್ಟ್ 13 ರವರೆಗೆ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಆಗಸ್ಟ್ 14 ರವರೆಗೆ ಗುಡುಗು ಸಹಿತವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಪೆನಿನ್ಸುಲಾರ್ ಭಾರತದಾದ್ಯಂತ ಸಾಕಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ ಮತ್ತು ಮಾಹೆ, ಲಕ್ಷದ್ವೀಪಗಳಲ್ಲಿ ಆಗಸ್ಟ್ 12 ರಿಂದ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ಎಲ್ಲಾ ಜಲಾಶಯಗಳು ಈಗ ಭರ್ತಿಯಾಗಿವೆ. ಜೊತೆಗೆ ಕೃಷಿ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಸುರಿದ ಭಾರೀ ಮಳೆ ಹಲವು ಕಡೆ ಅನಾಹುತಗಳ ಸೃಷ್ಟಿಗೆ ಕಾರಣವಾಗಿತ್ತು. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡದಲ್ಲಿ ಮಳೆ ಅವಾಂತರ ಸೃಷ್ಟಿಸಿತ್ತು. ಕಳೆದೊಂದು ವಾರದಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗಿತ್ತಲ್ಲದೆ ಜನ ಜೀವನ ಯಥಾಸ್ಥಿತಿಗೆ ಬಂದಿತ್ತು.
ಇನ್ನು ಬೆಂಗಳೂರಿನಲ್ಲೂ ಮಳೆ ಆರ್ಭಟ ಜೋರಾಗಿದೆ. ಗುಡುಗು ಸಹಿತ ಮಳೆ ಅಬ್ಬರಿಸುತ್ತಿದೆ. ಕಳೆದ ಎರಡು ಮೂರು ದಿನದಿಂದ ಸಂಜೆ ವೇಳೆ ಅತ್ಯುತ್ತಮ ಮಳೆಯಾಗುತ್ತಿದೆ. ಹೀಗಾಗಿ ತಗ್ಗು ಪ್ರದೇಶ ಸೇರಿ ಹಲವು ಕಡೆ ನೀರು ನಿಂತು ಅವಾಂತರ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡಬೇಕಾದ ಅನಿವಾರ್ಯತೆ ಎದುರಾಗಿದೆ.



Click it and Unblock the Notifications
