Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Karnataka Rains: ಜುಲೈ 25ರವರೆಗೆ ಭೀಕರ ಮಳೆ! ರಾಜ್ಯದ 20+ ಜಿಲ್ಲೆಗಳಿಗೆ ಹೈ ಅಲರ್ಟ್.. ರಜೆ ಘೋಷಣೆ?
ಮುಂದಿನ ಐದು ದಿನ ಮಳೆ.. ಮಳೆ.. ಮಳೆ! ರಾಜ್ಯದಲ್ಲಿ ಮುಂಗಾರು ಮಳೆಯು ಜುಲೈ 25 ರವರೆಗೂ ಮುಂದುವರೆಯುವ ಸಾಧ್ಯತೆಯಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ (ಜುಲೈ 21 ರಿಂದ) ಜುಲೈ 25 ರವರೆಗೆ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ, ಬೆಂಗಳೂರು ಸೇರಿದಂತೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ನೀಡಲಾಗಿದೆ. ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಇಂದು ಎಲ್ಲೆಲ್ಲಿ ಮಳೆಯಾಗಲಿದೆ (Karnataka Weather) ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಜೋರು ಮಳೆ ಸುರಿಯುತ್ತಿದೆ. ಈ ವಾರವಿಡೀ ಮಳೆ ಸುರಿಯಲಿದೆ ಎಂದು ಐಎಂಡಿ ಹೇಳಿದೆ. ನಾಳೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಸಹ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ವಾರವೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ನಿನ್ನೆ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಹಲವೆಡ ಜೋರು ಮಳೆ ಸುರಿದೆ. ವಿಧಾನಸೌಧ, ರೇಸ್ ಕೋರ್ಸ್, ಮೆಜೆಸ್ಟಿಕ್, ರೇಸ್ ಕೋರ್ಸ್, ಶೇಷಾದ್ರಿಪುರಂ ಸುತ್ತಮುತ್ತ ಮಳೆ ಆಗಿದೆ. ಮಳೆಯಿಂದ ಬೆಂಗಳೂರು ಮತ್ತಷ್ಟು ಕೂಲ್ ಆಗಿದ್ದು, ವಾಹನ ಸವಾರರು ಪರದಾಡಿದ್ದಾರೆ.
ಜುಲೈ 23, 24 ರಂದು ಈ ಜಿಲ್ಲೆಗಳಲ್ಲಿ ಅಧಿಕ ಮಳೆ
ಕರಾವಳಿ ಭಾಗದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜುಲೈ 23 ಮತ್ತು 24 ರಂದು ಈ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಅಲ್ಲದೆ, ಸಮುದ್ರ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಜಿಲ್ಲಾಡಳಿತವು ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ಜು.25 ರವರೆಗೆ ಯೆಲ್ಲೋ ಅಲರ್ಟ್
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 25ರವರೆಗೆ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಈ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ, ಮತ್ತು ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗಬಹುದು. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಜುಲೈ 23ರಿಂದ ಈ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಬಹುದು ಎಂದು ವರದಿಯಾಗಿದೆ.
ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು
ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಕಾರವಾರದ ಪಿಕಳೆ ಆಸ್ಪತ್ರೆ ಬಳಿ ಗಾಳಿ, ಮಳೆಗೆ ಬೃಹತ್ ಮರವೊಂದು ಕಾರಿನ ಮೇಲೆಯೇ ಉರುಳಿಬಿದ್ದಿದೆ. ಗರ್ಭಿಣಿ ಸೊಸೆಯನ್ನು ಆಸ್ಪತ್ರೆಗೆ ಕರೆತಂದಿದ್ದ ಅತ್ತೆ ಮೇಲೆ ಮರ ಬಿದ್ದು ಅಸುನೀಗಿದ್ದಾರೆ. ಮೈಸೂರಿನ ಕೆಆರ್‌ಎಸ್ (KRS) ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮಳೆಗೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಬ್ಬಿ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಪ್ರವಾಸಿಗ ಬೆಂಗಳೂರು ಮೂಲದ ರಮೇಶ್ ನೀರುಪಾಲಾಗಿದ್ದಾರೆ.
ದೇಶಾದ್ಯಂತ ಮತ್ತೆ ಆರ್ಭಟಿಸಲಿದೆ ಭಾರೀ ಮಳೆ
ದೇಶಾದ್ಯಂತ ಮುಂಗಾರು ಮಳೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಭಾರತದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಮುಂದಿನ ಐದು ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಏಳು ದಿನಗಳಲ್ಲಿ ಬಿಹಾರದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 22 ರವರೆಗೆ ತಮಿಳುನಾಡಿನಲ್ಲಿ ಮತ್ತು ಜುಲೈ 25 ರವರೆಗೆ ತೆಲಂಗಾಣದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.



Click it and Unblock the Notifications

