Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಮುಂದಿನ 1 ವಾರ ಈ 14 ಜಿಲ್ಲೆಯಲ್ಲಿ ಭಾರೀ ಮಳೆ..! 24ರಿಂದ ಹೊಸ ನಕ್ಷತ್ರ.!
ರಾಜ್ಯದಲ್ಲಿ ಕಳೆದ 15 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಸೇರಿದಂತೆ ಎಲ್ಲಾ ಭಾಗದಲ್ಲೂ ಉತ್ತಮ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಆರಂಭದಲ್ಲಿ ಕೈ ಕೊಟ್ಟರು ಈಗ 15 ದಿನಗಳಿಂದಲೂ ಉತ್ತಮ ಪ್ರಮಾಣದಲ್ಲಿ ಸುರಿಯುತ್ತಿದೆ.
ಇದೀಗ ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೀರಿಲ್ಲದೆ ತತ್ತರಿಸಿದ್ದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಅಬ್ಬರಿಸಲಿದೆಯಂತೆ.

ಇತ್ತ ಜೂನ್ 7 ರಿಂದ ಮುಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಸಹ ಸಿಕ್ಕಿದ್ದು, ಕಳೆದ ಬಾರಿಗಿಂತಲೂ ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಬಾರಿ ರಾಜ್ಯದಲ್ಲಿ ಮಳೆಯಾಗದ ಹಿನ್ನೆಲೆ ರಾಜ್ಯದಲ್ಲಿ ನೀರಿನ ಸಮಸ್ಯೆ ಉದ್ಭವಿಸಿದ್ದು, ಇದೀಗ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನೀರಿಲ್ಲದೆ ಬರಿದಾಗುತ್ತಿದ್ದ ಕೆರೆ, ಹಳ್ಳ, ನದಿಗಳಿಗೆ ಕಳೆದ 15 ದಿನಗಳಿಂದ ಸುರಿದ ಮಳೆಯಿಂದ ಮತ್ತೆ ಜೀವ ಕಳೆ ಬಂದಂತಾಗಿದೆ.
ಇತ್ತ ಮುಂದಿನ 1 ವಾರಗಳ ಕಾಲ ರಾಜ್ಯದ ವಿವಿಧ ಭಾಗದಲ್ಲಿ ಉತ್ತಮ ಮಳೆಯಾಗಲಿದೆಯಂತೆ. ಬೆಂಗಳೂರು, ಶಿವಮೊಗ್ಗ ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ.
ಇತ್ತ ದಕ್ಷಿಣ ಒಳನಾಡು ಭಾಗದಲ್ಲಿ ತಾಪಮಾನ ಇಳಿಕೆಯಾಗಲಿದೆ. ಎರಡರಿಂದ ಮೂರು ಡಿಗ್ರಿ ತಾಪಮಾಣ ಇಳಿಕೆಯಾಗಲಿದ್ದು, ಗಾಳಿಯ ವೇಗ ಸಹ ಹೆಚ್ಚಾಗಲಿದೆ. ಇನ್ನು ನೀರಿಗಾಗಿ ಕಾದು ಕುಳಿತಿದ್ದ ಮಂದಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ಕಾವೇರಿ ಕೆಆರ್‌ಎಸ್, ಆಲಮಟ್ಟಿ, ತುಂಗಭದ್ರಾ, ಮಲಪ್ರಭಾ ನದಿ ಮೈದುಂಬಿಕೊಳ್ಳುತ್ತಿದ್ದು, ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಸದ್ಯ ಜಲಾಶಯದಲ್ಲಿ ನೀರು ಹೆಚ್ಚಳವಾಗಿರುವುದು ರೈತರಲ್ಲಿ ಹೊಸ ಜೀವ ಕಳೆದ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಕೃಷಿ ಕೆಲಸಗಳು ವೇಗ ಪಡೆದುಕೊಂಡಿವೆ.
ದಕ್ಷಿಣ ಏಷ್ಯಾದ ಬಹುತೇಕ ಭಾಗಗಳಲ್ಲಿ 2024 ನೈಋತ್ಯ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಸೌತ್ ಏಷ್ಯನ್ ಕ್ಲೈಮೇಟ್ ಔಟ್ಲುಕ್ ಫೋರಮ್ ಮಾಹಿತಿ ಹಂಚಿಕೊಂಡಿದೆ. ಈ ಸೂಚನೆಯ ಪ್ರಕಾರ ಭಾರತದಲ್ಲೂ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ನಿರೀಕ್ಷಿಸಬಹುದಿದೆ.
ಅಂದರೆ ಈ ಬಾರಿ ಮಳೆಯ ಕಳೆದ ಬಾರಿಗಿಂತಲೂ ಹೆಚ್ಚಾಗಿರಲಿದೆ. ಜೊತೆಗೆ ಬೇಗನೇ ಮಳೆಗಾಲ ಆರಂಭವಾಗಲಿದೆ. ಭಾರತದಲ್ಲಿ ಸಾಮಾನ್ಯವಾಗಿ ಜೂನ್ ಆರಂಭದಲ್ಲಿ ಮಾನ್ಸೂನ್ ಆರಂಭವಾಗಲಿದೆ. ಆಗಸ್ಟ್ ಹಾಗೂ ಸೆಪ್ಟೆಂಬರ್ ವೇಳೆ ಮಳೆ ಪ್ರಮಾಣ ಉತ್ತುಂಗ ಮಟ್ಟ ತಲುಪಲಿದೆ ಎಂದು ತಿಳಿಸಲಾಗಿದೆ. ಇತ್ತ ಜೂನ್ ಹಾಗೂ ಜುಲೈನಲ್ಲೂ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದ ಮಳೆಯನ್ನು ನಿರೀಕ್ಷಿಸಬಹುದಂತೆ.
ಸದ್ಯ ಈಗ ಕೃತಿಕ ಮಳೆ ಆರಂಭಗೊಂಡಿದ್ದು, 24/05/24ರಿಂದ ರೋಹಿಣಿ ಮಳೆ ಆರಂಭವಾಗಲಿದೆ. ಹೀಗಾಗಿ ಮುಂಬರುವ ಎಲ್ಲಾ ಮಳೆ ನಕ್ಷತ್ರಗಳು ಉತ್ತಮ ಪ್ರಮಾಣದಲ್ಲಿ ಸುರಿಯಬಹುದು ಎಂದು ಅಂದಾಜಿಸಲಾಗಿದೆ. ರಾಜ್ಯದಲ್ಲಿನ ಈ ಬೆಳವಣಿಗೆ ರೈತರಲ್ಲಿ ಹೊಸತನ ತಂದಿದ್ದು, ಕೃಷಿ ಚಟುವಟಿಕೆ ಚುರುಕು ಪಡೆದಿದೆ.



Click it and Unblock the Notifications
