Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಈ ವಾರ(ಜುಲೈ10-16) ಗ್ರಹಗಳ ಸ್ಥಾನದಿಂದಾಗಿ ಈ 6 ರಾಶಿಯವರಿಗೆ ತುಂಬಾ ಒಳ್ಳೆಯದಿದೆ
ಈ ವಾರ ಗ್ರಹಗತಿಗಳ ಸ್ಥಾನದ ಆಧಾರದ ಮೇಲೆ ನೋಡಿದರೆ ಈ 6 ರಾಶಿಯವರಿಗೆ ತುಂಬಾ ಒಳ್ಳೆಯದಿದೆ. ಈ ವಾರ ಈ ರಾಶಿಯವರ ವೃತ್ತಿ ಬದುಕು, ವ್ಯಾಪಾರ, ಆರ್ಥಿಕ ಸ್ಥಿತಿ, ಕುಟುಂಬ ಜೀವನ ಎಲ್ಲವೂ ಅನುಕೂಲಕರವಾಗಿದ್ದು ಈ ವಾರವನ್ನು ಖುಷಿಯಿಂದ ಕಳೆಯಲು ಸಾಧ್ಯವಾಗುವುದು. ಈ ವಾರ ಈ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲವಿದೆ ನೋಡಿ:

ಮೇಷ ರಾಶಿ
ಈ ದಿನ ನಿಮಗೆ ಒಳ್ಳೆಯದಿದೆ, ಈ ವಾರ ನಿಮ್ಮ ಯೋಜನೆಯಂತೆಯೇ ಕೆಲಸಗಳು ಪೂರ್ಣಗೊಳ್ಳಲಿದೆ, ವ್ಯಾಪಾರಸ್ಥರು ಬಯಸಿದ ಲಾಭವನ್ನು ಪಡೆಯಬಹುದು. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ, ಕುಟುಂಬ ಸದಸ್ಯರ ನಡುವೆ ಹೊಂದಾಣಿಕೆ ಇರಲಿದೆ. ಆರ್ಥಿಕ ದೃಷ್ಟಿಯಿಂದ ಈ ವಾರ ಚೆನ್ನಾಗಿರಲಿದೆ. ಇನ್ನು ಆರೋಗ್ಯ ಕೂಡ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ವಾರ ನಿಮಗೆ ತುಂಬಾ ಒಳ್ಳೆಯದಿದೆ, ಈ ಹಿಂದೆ ನೀವು ತೆಗೆದುಕೊಂಡ ಸರಿಯಾದ ನಿರ್ಧಾರದ ಫಲ ಈ ವಾರ ಅನುಭವಿಸುತ್ತೀರಿ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ. ಇನ್ನು ಅವಾಹಿತರಿಗೆ ವಿವಾಹ ಸಂಬಂಧ ಕೂಡಿ ಬರಬಹುದು, ಪ್ರೇಮಿಗಳಿಗೆ ಈ ಅವಧಿ ಚೆನ್ನಾಗಿರಲಿದೆ, ನೀವು ಪ್ರೀತಿಸುತ್ತಿರುವ ವಿಷಯ ಮನೆಯಲ್ಲಿ ತಿಳಿಸಲು ಸೂಕ್ತವಾಗಿದೆ. ಈ ವಾರ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇನ್ನು ಆಸ್ತಿಗೆ ಸಂಬಂಧಿಸಿದ ಪ್ರಯತ್ನದಲ್ಲಿ ನಿಮಗೆ ಉತ್ತಮ ಫಲ ಸಿಗಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ, ಹಣಕಾಸಿನ ವಿಷಯಗಳಲ್ಲಿ ಯಾವುದೇ ರೀತಿಯ ಆತುರಪಡಬೇಡಿ, ವಿಶೇಷವಾಗಿ ನೀವು ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಈ ಸಮಯದಲ್ಲಿ ಅವಸರ ಪಡಬೇಡಿ, ಕೆಲಸಕ್ಕೆ ಸಂಬಂಧಿಸಿದ ಪ್ರಯಾಣದಿಂದ ಲಾಭ ಗಳಿಸುತ್ತೀರಿ, ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಈ ವಾರ ಉತ್ತಮವಾಗಿದೆ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಫಲ ಪಡೆಯುತ್ತೀರಿ, ಈ ಅವಧಿಯಲ್ಲಿ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಕೌಟುಂಬಿಕ ಜೀವ ಚೆನ್ನಾಗಿರಲಿದೆ. ಈ ವಾರ ನೀವು ವಿಶೇಷ ವ್ಯಕ್ತಿಯನ್ನು ಬೇಟಿ ಮಾಡುತ್ತೀರಿ, ವ್ಯಾಪಾರಸ್ಥರು ಲಾಭ ಗಳಿಸುತ್ತೀರಿ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮಗೆ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು.
ಧನು ರಾಶಿ
ಧನು ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲಸದಲ್ಲಿ ಧನಾತ್ಮಕ ಬದಲಾವಣೆ ಕಾಣುತ್ತೀರಿ. ಹಣದ ವಿಷಯದಲ್ಲಿ ಈ ಸಮಯವು ನಿಮಗೆ ಉತ್ತಮವಾಗಿರಲಿದೆ, ಈ ಸಮಯದಲ್ಲಿ ನಿಮ್ಮ ಆದಾಯ ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಸಾಲದಿಂದ ಮುಕ್ತರಾಗುತ್ತೀರಿ, ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿರುತ್ತದೆ.
ಕುಂಭ ರಾಶಿ
ವಾರದ ಆರಂಭವು ನಿಮಗೆ ಶುಭವಾಗಿರಲಿದೆ. ಈ ಸಮಯದಲ್ಲಿ, ನಿಮ್ಮ ಯಾವುದೇ ಸ್ಥಗಿತಗೊಂಡ ಕೆಲಸವನ್ನು ಪೂರ್ಣಗೊಳಿಸುವುದರಿಂದ ನೀವು ಆರ್ಥಿಕ ಲಾಭವನ್ನು ಪಡೆಯುತ್ತೀರಿ, ಕುಟುಂಬ ಜೀವನ ಚೆನ್ನಾಗಿರಲಿದೆ. ಸರ್ಕಾರಿ ಕೆಲಸ ಮಾಡುವವರು ತಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶವನ್ನು ಪಡೆಯಬಹುದು. ವಾರದ ಕೊನೆಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇದೆಲ್ಲವೂ ನಿಮ್ಮ ಶ್ರಮದ ಫಲ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.



Click it and Unblock the Notifications