Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ರಾಜ್ಯದಲ್ಲಿ ಎಷ್ಟು ಮಂದಿ ಕನ್ನಡ ಮಾತಾಡುತ್ತಾರೆ..!? ಜಿಲ್ಲೆ ಜಿಲ್ಲೆಯ ಮಾಹಿತಿ ಇಲ್ಲಿದೆ ನೋಡಿ..!!
ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. ಒಂದು ಕಡೆ ಕನ್ನಡಿಗರು ಈ ನಡೆಯನ್ನ ಸ್ವೀಕರಿಸಿದ್ದರೂ ಖಾಸಗಿ ಕಂಪನಿಗಳ ಕಣ್ಣು ಕೆಂಪಗಾಗಿಸಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇಕಡ 50ರಷ್ಟು ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇಕಡ 75ರಷ್ಟು ಮೀಸಲಾತಿ ಹಾಗೂ ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ 100ರಷ್ಟು ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು.

ಆದರೆ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದ ಬಳಿಕ ವೈರಲ್ ಆಗಿದ್ದಲ್ಲದೆ ದೇಶ ವ್ಯಾಪಿ ಚರ್ಚೆಗೆ ಕಾರಣವಾಗಿತ್ತು. ಆದ್ರೆ ಈಗ ಈ ಮಸೂದೆ ಇನ್ನೂ ಸಿದ್ಧತೆ ಹಂತದಲ್ಲಿದೆ ಎಂದಿದ್ದಾರೆ. ಅಲ್ಲದೆ ಭವಿಷ್ಯದಲ್ಲಿ ಜಾರಿ ಮಾಡುತ್ತೇವೆ ಎಂದಿದ್ದಾರೆ. ಹಾಗಾದ್ರೆ ಈ ವಿಚಾರಗಳಿಂದ ನಾವು ತಿಳಿಯಬೇಕಾಗಿದ್ದೇನು?
ಕರ್ನಾಟದಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಆತಂಕವೂ ಇದೆ. ಅದ್ರಲ್ಲೂ ಬೆಂಗಳೂರಿನಲ್ಲಿ ಕನ್ನಡ ಮಾತನಾಡುವವರನ್ನ ಹುಡುಕಬೇಕಾದ ಪರಿಸ್ಥಿತಿ ಇದೆ. ಬೆಂಗಳೂರಿನಲ್ಲಿ ಎಲ್ಲಾ ಭಾಷೆ ಮಾತನಾಡುವ ಜನರಿದ್ದಾರೆ. ಅಸಲಿಗೆ ಕನ್ನಡಿಗರು ಸಹ ಕನ್ನಡ ಮಾತನಾಡಲು ಹಿಂದು ಮುಂದು ನೋಡುವ ಸ್ಥಿತಿ ಇರುವುದು ಸದ್ಯದ ಪರಿಸ್ಥಿತಿಯಾಗಿದೆ.
ಹೀಗಿರುವಾಗ ನಮ್ಮ ರಾಜ್ಯದ ವಿವಿಧ ಭಾಗದಲ್ಲಿ ಎಷ್ಟು ಮಂದಿ ಕನ್ನಡ ಮಾತನಾಡುತ್ತಾರೆ? ರಾಜ್ಯದಲ್ಲಿ ಒಟ್ಟಾರೆ ಎಷ್ಟು ಜನ ಕನ್ನಡಿಗರಿದ್ದಾರೆ ಎಂಬುದಕ್ಕೆ ಇಲ್ಲೊಂದು ಪೋಸ್ಟ್ ಹಂಚಿಕೊಳ್ಳಲಾಗಿದ್ದು ಭಾರೀ ವೈರಲ್ ಆಗಿದೆ. India In Pixels ಎಂಬ ಫೇಸ್‌ಬುಕ್ ಖಾತೆಯಲ್ಲಿ ಈ ಕುರಿತ ಮಾಹಿತಿ ಹಂಚಿಕೊಳ್ಳಲಾಗಿದೆ. iipmaps.com ನಲ್ಲಿ ಈ ಮಾಹಿತಿ ಕಲೆಹಾಕಲಾಗಿದೆ ಎಂದು ತಿಳಿದು ಬಂದಿದೆ.
ಇಲ್ಲಿ ಹಂಚಿಕೊಳ್ಳಲಾದ ಮಾಹಿತಿಯಂತೆ. ಕರ್ನಾಟಕದಲ್ಲಿ ಈಗ ಕೇವಲ ಶೇ. 66.54ರಷ್ಟು ಮಂದಿ ಮಾತ್ರ ಕನ್ನಡ ಮಾತನಾಡುತ್ತಾರಂತೆ. ಈ ವರದಿಯಂತೆ ಪ್ರತಿಯೊಂದು ಜಿಲ್ಲೆಯಲ್ಲೂ ಎಷ್ಟು ಮಂದಿ ಕನ್ನಡ ಮಾತನಾಡುತ್ತಾರೆ ಎಂಬುದನ್ನು ವಿವರಿಸಲಾಗಿದೆ. ಈ ವರದಿಯ ಪ್ರಕಾರ ಅತೀ ಹೆಚ್ಚು ಕನ್ನಡ ಮಾತನಾಡುವವರು ಮಂಡ್ಯದಲ್ಲಿದ್ದು ಶೇ. 91.9 ರಷ್ಟು ಮಂದಿ ಕನ್ನಡ ಮಾತನಾಡುತ್ತಾರೆ.
ಆದ್ರೆ ಅತ್ಯಂತ ಕಡಿಮೆ ಮಂದಿ ದಕ್ಷಿಣ ಕನ್ನಡದಲ್ಲಿದ್ದಾರೆ. ಇಲ್ಲಿ ಕೇವಲ ಶೇ.9.3 ರಷ್ಟು ಮಂದಿ ಮಾತ್ರ ಕನ್ನಡ ಮಾತನಾಡುತ್ತಾರೆ. ಆದ್ರೆ ಇಲ್ಲಿ ತುಳು ಭಾಷಿಕರು ಹೆಚ್ಚಾಗಿರುವ ಕಾರಣ ಈ ರೀತಿಯ ಅಂಕಿ ಅಂಶ ಇರುವುದು ಗುರುತಿಸಬಹುದು. ಈ ಜನಸಂಖ್ಯೆಯಲ್ಲಿ ಬಹುಪಾಲು ಮಂದಿಯ ಮಾತೃಭಾಷೆ ತುಳುವಾಗಿದೆ. ಇದಲ್ಲದೆ ಕೊಡಗು, ಹಾಗೂ ಉಡುಪಿ, ಉತ್ತರ ಕನ್ನಡದಲ್ಲು ಕಡಿಮೆ ಪ್ರಮಾಣದ ಮಂದಿ ಕನ್ನಡ ಮಾತನಾಡುತ್ತಾರೆ. ಏಕೆಂದರೆ ಇಲ್ಲಿಯೂ ಸಹ ತುಳು, ಬ್ಯಾರಿ, ಕೊಂಕಣಿ, ಕೊಡವ ಭಾಷಿಕರು ನೆಲೆಸಿದ್ದಾರೆ. ಹೀಗಾಗಿ ಕನ್ನಡ ಭಾಷಿಕರ ಸಂಖ್ಯೆ ಕಡಿಮೆಯಾಗಿದೆ. ಹೀಗೆಂದ ಮಾತ್ರಕ್ಕೆ ಅವರಿಗೆ ಕನ್ನಡ ಬರುವುದಿಲ್ಲ ಎಂಬರ್ಥವಲ್ಲ. ಅವರಿಗೆ ಕನ್ನಡ ಚೆನ್ನಾಗಿ ಅರಿವಿದೆ.
ಇತ್ತ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಕನ್ನಡ ಭಾಷಿಕರು ಕಡಿಮೆ ಇರುವುದು ನೋಡಬಹುದು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಗಡಿ ಪ್ರದೇಶವಾಗಿರುವುದರಿಂದ ತಮಿಳು, ತೆಲುಗು ಭಾಷಿಕರು ಹೆಚ್ಚಾಗಿ ಸಿಗುತ್ತಾರೆ. ಇತ್ತ ಬೆಳಗಾವಿಯಲ್ಲಿ ಶೇ.68ರಷ್ಟು ಮಂದಿ ಕನ್ನಡ ಮಾತನಾಡುತ್ತಾರೆ ಉಳಿದಂತೆ ಅಲ್ಲಿ ಮರಾಠಿ ಭಾಷಿಕರ ಸಂಖ್ಯೆ ಹೆಚ್ಚಿದೆ. ಇದ್ರಲ್ಲಿ ಬೀದರ್‌ನಲ್ಲಿ ಶೇ.53ರಷ್ಟು ಮಂದಿ ಮಾತ್ರ ಕನ್ನಡಿಗರು ಇದ್ದಾರೆ ಎಂದು ವರದಿ ತಿಳಿಸಿದೆ.



Click it and Unblock the Notifications

