Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
2ನೇ ಬಾರಿ ಚಾಂಪಿಯನ್ ಆದ ಆರ್‌ಸಿಬಿ ಮಹಿಳಾ ತಂಡಕ್ಕೆ ಸಿಕ್ಕ ಬಹುಮಾನವೆಷ್ಟು?
ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ದಾಖಲಿಸಿದೆ. ಸತತ 2ನೇ ಬಾರಿಗೆ ಟ್ರೋಫಿ ತಮ್ಮದಾಗಿಸಿಕೊಂಡಿದೆ. ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಜಯ ದಾಖಲಿಸಿ ಮೊದಲ ಬಾರಿಗೆ ಕಪ್ ಗೆಲ್ಲುವ ಡೆಲ್ಲಿ ಕನಸು ಮುರಿದಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 203 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ, ಆರ್‌ಸಿಬಿ 19.4 ಓವರ್‌ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 204 ರನ್ ಗಳಿಸಿ ಜಯಗಳಿಸಿತು. ಟೂರ್ನಿಯಲ್ಲಿ ಕೇವಲ 2 ಪಂದ್ಯ ಸೋತು, ಟೇಬಲ್ ಟಾಪರ್ಸ್ ಆಗಿದ್ದ ಆರ್‌ಸಿಬಿ ಕಪ್ ಎತ್ತಿ ಹಿಡಿಯುವ ಮೂಲಕ ಎಲ್ಲಾ ಸಂಪ್ರದಾಯ ಮುರಿದಿದೆ. ಪ್ರತಿ ವರ್ಷ ಟೇಬಲ್ ಟಾಪರ್ಸ್‌ಗಳು ಫೈನಲ್‌ನಲ್ಲಿ ಮುಗ್ಗರಿಸಿದ್ದ ಉದಾಹರಣೆ ಇತ್ತು, ಆದ್ರೆ ಕಪ್ ಗೆದ್ದಿರಲಿಲ್ಲ. ಆದ್ರೆ ಆರ್‌ಸಿಬಿ ಇದನ್ನೆಲ್ಲಾ ಸುಳ್ಳು ಮಾಡಿದೆ.

ಈವರೆಗೂ ನಡೆದಿರುವ ಪಂದ್ಯದಲ್ಲಿ ಆರ್‌ಸಿಬಿ ಎರಡು ಬಾರಿ ಟ್ರೋಫಿ ಗೆದ್ದಿದ್ದರೆ ಮುಂಬೈ ಇಂಡಿಯನ್ಸ್ ತಂಡವು ಎರಡು ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ. ಮೊದಲ ಎರಡು ಆವೃತ್ತಿಯಲ್ಲಿ ಮುಂಬೈ ಜಯ ದಾಖಲಿಸಿ ಇತಿಹಾಸ ಬರೆದಿತ್ತು. ಸದ್ಯ ಮಹಿಳಾ ಪ್ರೀಮಿಯರ್ ಲೀಗ್ ಗೆದ್ದ ತಂಡಕ್ಕೆ ಶುಭಾಶಯಗಳ ಮಹಾಪೂರ ಕೇಳಿಬಂದಿದೆ.
ಇನ್ನು ಪ್ರಶಸ್ತಿ ಗೆದ್ದ ತಂಡ ಹಾಗೆ ರನ್ನರ್ ಅಪ್ ತಂಡವು ಎಷ್ಟು ಹಣ ಪಡೆಯಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿದೆ. ಪ್ರತಿ ವರ್ಷದಂತೆ ಈ ವರ್ಷ ಸಹ ಬಹುಮಾನದ ಮೊತ್ತದಲ್ಲಿ ಏರಿಕೆ ಕಂಡುಬಂದಿಲ್ಲ. ಹಾಗಾದ್ರೆ ಪ್ರಶಸ್ತಿ ಗೆದ್ದ ತಂಡಕ್ಕೆ ಸಿಕ್ಕ ಹಣವೇಷ್ಟು ಎಂಬುದನ್ನು ತಿಳಿದುಕೊಳ್ಳೋಣ.
ಆರ್‌ಸಿಬಿ ಮಹಿಳಾ ತಂಡಕ್ಕೆ 6 ಕೋಟಿ ರೂಪಾಯಿ
ಎರಡನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಆರ್‌ಸಿಬಿ ತಂಡಕ್ಕೆ ಈ ಬಾರಿ ಬರೋಬ್ಬರಿ 6ಕೋಟಿ ರೂಪಾಯಿ ಮೊದಲ ಬಹುಮಾನವಾಗಿ ಸಿಕ್ಕಿದೆ. ಹಾಗೆಯೇ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 3 ಕೋಟಿ ರೂ. ಬಹುಮಾನ ಸಿಕ್ಕಿದೆ. ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಆವೃತ್ತಿಯಿಂದಲೂ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಕ್ಕೆ ಇಷ್ಟೇ ಮೊತ್ತದ ಬಹುಮಾನವನ್ನು ನೀಡಲಾಗುತ್ತಿದೆ.
ಈ ಬಹುಮಾನದ ಜೊತೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಆರೇಂಜ್ ಕ್ಯಾಪ್ ಪಡೆದ ಸ್ಮೃತಿ ಮಂದಾನ ಅವರಿಗೆ 5 ಲಕ್ಷ ರೂಪಾಯಿ, ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತಮ್ಮದಾಗಿಸಿದ್ದ ಹಾಗೆ ಅತ್ಯುತ್ತಮ ಸ್ಟ್ರೈಕ್ ರೇಟ್ ಪಡೆದ ಆಟಗಾರ್ತಿಗೂ ತಲಾ 5 ಲಕ್ಷ ರೂಪಾಯಿಯನ್ನು ಬಹುಮಾನವಾಗಿ ನೀಡಲಾಗಿದೆ.
ಆರ್‌ಸಿಬಿ ಮಹಿಳಾ ತಂಡ ಕಪ್ ಗೆಲ್ಲುತ್ತಿದ್ದಂತೆ ಸಂಭ್ರಮ ಮನೆ ಮಾಡಿತ್ತು. ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಪಟಾಕಿ ಸಿಡಿಸಿ ಅಭಿಮಾನಿಗಳು ಸಂಭ್ರಮಿಸಿದ್ರು. ಹಾಗೆ ಬೆಂಗಳೂರಿನ ಹಲವು ಭಾಗದಲ್ಲಿ ಪಂದ್ಯ ವೀಕ್ಷಣೆಗೆ ವಿಶೇಷ ತಯಾರಿಯ ಜೊತೆಗೆ ಅವಕಾಶ ಕಲ್ಪಿಸಲಾಗಿತ್ತು.



Click it and Unblock the Notifications
