Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರಧಾನಿ ಮೋದಿ ಆಸ್ತಿ ಎಷ್ಟು..? ಅಫಿಡವಿಟ್ ಪ್ರಕಾರ ಅವರ ಶೈಕ್ಷಣಿಕ ಅರ್ಹತೆ ಏನು?
ದೇಶದಲ್ಲಿ ಲೋಕಸಭೆ ಚುನಾವಣೆ ಕಾವು ರಂಗು ಪಡೆದಿದೆ. ಈಗಾಗಲೇ ಹಲವು ಕಡೆಗಳಲ್ಲಿ ಚುನಾವಣೆ ಮುಗಿದಿದ್ದು, ಫಲಿತಾಂಶದ ಎದುರು ನೋಡುತ್ತಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುವ ಉತ್ಸಾಹದಲ್ಲಿದ್ದು, ಹಲವು ಕಡೆ ರ್ಯಾಲಿ ನಡೆಸುತ್ತಿದ್ದಾರೆ.
ಜೊತೆಗೆ ನಿನ್ನೆ ವಾರಾಣಾಸಿ ಕ್ಷೇತ್ರದಿಂದ ನಾಮಪತ್ರ ಸಹ ಸಲ್ಲಿಸಿದ್ದಾರೆ. ಈ ವೇಳೆ ಪ್ರಧಾನಿ ಅವರು ತಮ್ಮ ಆಸ್ತಿಯ ವಿವರವನ್ನು ಅಫಿಡವಿಟ್ ಸಲ್ಲಿಸಿದರು. ಅವರ ಅಫಿಡವಿಟ್ ಪ್ರಕಾರ, ಪ್ರಧಾನಿ ಮೋದಿ ಅವರ ಬಳಿ 3,02,06,889 ರೂಪಾಯಿ ಮೌಲ್ಯದ ಚರ ಆಸ್ತಿ ಹೊಂದಿದ್ದಾರೆ.

ಅವರ ಒಟ್ಟು ಆಸ್ತಿಯಲ್ಲಿ 2.85 ಕೋಟಿ ರೂ.ಗೂ ಅಧಿಕ ಮೊತ್ತವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಫಿಕ್ಸಡ್ ಡೆಪಾಸಿಟ್ ಇದೆ. ಇತರ ಸ್ವತ್ತುಗಳು ರೂ. 2.67 ಲಕ್ಷ ಮೌಲ್ಯದ 45 ಗ್ರಾಂ ತೂಕದ ನಾಲ್ಕು ಚಿನ್ನದ ಉಂಗುರಗಳು, ಒಟ್ಟು ರೂ. 52,920 ಕೈಯಲ್ಲಿ ನಗದು, ರೂ. 9.12 ಲಕ್ಷ ಮೌಲ್ಯದ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರಗಳು ಮತ್ತು ಕಳೆದ ಹಣಕಾಸು ವರ್ಷದಲ್ಲಿ ರೂ. 3.33 ಲಕ್ಷದ ಆದಾಯ ತೆರಿಗೆ ವಿನಾಯಿತಿ ಸೇರಿದೆ.
ಅಫಿಡವಿಟ್‌ನಲ್ಲಿ ಜಶೋದಾಬೆನ್ ಅವರನ್ನು ಮೋದಿ ಅವರ ಸಂಗಾತಿ ಎಂದು ಉಲ್ಲೇಖಿಸಲಾಗಿದೆ, ಆದರೆ, ಅವರು ಹೊಂದಿರುವ ಆಸ್ತಿಗಳ ಕುರಿತು, ದಾಖಲೆಯಲ್ಲಿ "ತಿಳಿದಿಲ್ಲ" ಎಂದು ಉಲ್ಲೇಖಿಸಲಾಗಿದೆ. ಮೋದಿ ತಮ್ಮನ್ನು ಅಹಮದಾಬಾದ್ ನಿವಾಸಿ ಎಂದು ಉಲ್ಲೇಖಿಸಿದ್ದಾರೆ.
ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆ ಮಾಹಿತಿ
1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಲೆ ಮತ್ತು 1983 ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಅನ್ನು ಪೂರ್ಣಗೊಳಿಸಿದ್ದೇನೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಚುನಾವಣಾ ಅಫಿಡವಿಟ್ ಪ್ರಕಾರ, ಮೋದಿ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿಲ್ಲ.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸಲು ಪ್ರಯತ್ನಿಸುತ್ತಿರುವ 73 ವರ್ಷದ ಮೋದಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸಚಿವರು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಹಲವು ಎನ್‌ಡಿಎ ನಾಯಕರ ಜೊತೆ ಆಗಮಿಸಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ವಾರಣಾಸಿಯಲ್ಲಿ ಜೂನ್ 1 ರಂದು ಏಳನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ತನ್ನ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರೈ ಅವರನ್ನು ಕ್ಷೇತ್ರದಿಂದ ಕಣಕ್ಕಿಳಿಸಿದೆ. ಇವರ ಜೊತೆ ಅಚ್ಚರಿ ಎಂಬಂತೆ ಸ್ಟ್ಯಾಂಡ್ ಅಪ್ ಕಮಿಡಿಯನ್ ಶ್ಯಾಮ್ ರಂಗೀಲಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಪ್ರಧಾನಿ ಮೋದಿ ನಾಮನಿರ್ದೇಶನಕ್ಕೆ ಮೇ 14 ಅನ್ನು ಏಕೆ ಆಯ್ಕೆ ಮಾಡಿಕೊಂಡರು ಎಂಬುದು ಚರ್ಚೆಯಾಗುತ್ತಿದೆ. ಈ ಮೊದಲು ಮೇ 13ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿತ್ತು. ಮೇ 14ರಂದು ಬೆಳಗ್ಗೆ 11.40ಕ್ಕೆ ನಾಮಪತ್ರ ಸಲ್ಲಿಕೆಗೆ ಶುಭ ಮುಹೂರ್ತ ಕೂಡ ನಿರ್ಧರಿಸಲಾಗಿತ್ತು. ಶುಭ ಮುಹೂರ್ತದ ವೇಳೆಗೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು.
ಪ್ರಧಾನಿ ಮೋದಿ ಅವರು ಗಂಗಾ ಸಪ್ತಮಿಯ ಪುಷ್ಯ ನಕ್ಷತ್ರದ ಶುಭ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸಿದರು. ಗಂಗಾ ಸಪ್ತಮಿಯ ವೇಳೆ ಪ್ರಧಾನಿ ಮೋದಿ ಅವರು ಬನಾರಸ್‌ನ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ 10 ಗಂಟೆಯ ಸುಮಾರಿಗೆ ಕಾಲ ಭೈರವ ದೇವಾಲಯಕ್ಕೆ ಭೇಟಿ ನೀಡಿ ನಾಮಪತ್ರ ಪೂಜೆ ಸಲ್ಲಿಸಿದರು.
ಈ ಮೊದಲು ಪ್ರಧಾನಿ ಮೋದಿ ಅವರು 26 ಏಪ್ರಿಲ್ 2019 ರಂದು ಅಭಿಜಿತ್ ಮುಹೂರ್ತದಲ್ಲಿ ಬೆಳಿಗ್ಗೆ 11.55 ಕ್ಕೆ ನಾಮಪತ್ರ ಸಲ್ಲಿಸಿದ್ದರು. ಹಲವಾರು ಬಾರಿ ಅವರು ನಾಮನಿರ್ದೇಶನದ ಮೊದಲು ಪೂಜೆಯನ್ನು ಮಾಡಲು ಮತ್ತು ಮಂಗಳಕರ ಸಮಯದಲ್ಲಿ ನಾಮಪತ್ರ ಸಲ್ಲಿಸಲು ವಿಶೇಷ ಕಾಳಜಿ ವಹಿಸುತ್ತಾರೆ.



Click it and Unblock the Notifications
