Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
SL Bhyrappa: ಹಿರಿಯ ಸಾಹಿತಿ ಎಸ್.ಎಲ್ ಬೈರಪ್ಪ ನಿಧನ! ಕಳಚಿತು ಮತ್ತೊಂದು ಕೊಂಡಿ
ಕಳಚಿತು ಮತ್ತೊಂದು ಕೊಂಡಿ! ಕನ್ನಡ ಸಾಹಿತ್ಯ ಲೋಕದ ಭೀಷ್ಮ ಇನ್ನೂ ನೆನಪು ಮಾತ್ರ. ಖ್ಯಾತ ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ 94 ವರ್ಷದ ಎಸ್.ಎಲ್ ಭೈರಪ್ಪ (SL Bhyrappa Death) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ರಾಜ ರಾಜೇಶ್ವರಿ ನಗರದಲ್ಲಿರುವ ರಾಷ್ಟೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇದೀಗ ನಿಧನರಾಗಿದ್ದಾರೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ (SL Bhyrappa) ಅವರು ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ. ಇವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಕನ್ನಡ ಸಾಹಿತ್ಯದ ಮೇರು ಸಾಹಿತಿ, ಕನ್ನಡ ಸಾಹಿತ್ಯ ಲೋಕದ ಮಹಾನ್ ಕಾದಂಬರಿಕಾರ, ಅಕ್ಷರ ಮಾಂತ್ರಿಕರೆಂದೇ ಖ್ಯಾತರಾಗಿದ್ದ ಪದ್ಮಭೂಷಣ ಹಾಗೂ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. ಇವರ ನಿಧನದಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಭರಿಸಲಾಗದ ನಷ್ಟ ಉಂಟಾಗಿದೆ.

ಎಸ್.ಎಲ್. ಭೈರಪ್ಪ ಅವರ ಬಗ್ಗೆ
ಹಿರಿಯ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ (ಜನನ 26 ಜುಲೈ 1934) ಒಬ್ಬ ಕನ್ನಡ ಕಾದಂಬರಿಕಾರರಾಗಿದ್ದು, ಅವರ ಕೃತಿಗಳು ಅವರ ತವರು ರಾಜ್ಯವಾದ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಮತ್ತು ಯುನೈಟೆಡ್ ಸ್ಟೇಟ್ಸ್‌ನಲ್ಲಿ ಜನಪ್ರಿಯವಾಗಿವೆ. ಭೈರಪ್ಪ ಅವರನ್ನು ಆಧುನಿಕ ಭಾರತದ ಅಗ್ರಗಣ್ಯ ಕಾದಂಬರಿಕಾರರಲ್ಲಿ ಒಬ್ಬರು ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರದ ವಿಷಯದಲ್ಲಿ ಅನನ್ಯವಾಗಿವೆ.
ಶಿಕ್ಷಣ ವೃತ್ತಿಯಲ್ಲೂ ಗಣನೀಯ ಕೊಡುಗೆ
ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರು ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿ, ಹಲವು ಪ್ರತಿಷ್ಠಿತ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ 1958ರಿಂದ 1960ರವರೆಗೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ನಂತರ, 1960ರಿಂದ 1966ರವರೆಗೆ ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದರು.
1967ರಲ್ಲಿ ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಗೆ ಉಪಪ್ರಾಧ್ಯಾಪಕರಾಗಿ ಸೇರ್ಪಡೆಯಾಗಿ, 1971ರವರೆಗೆ ಅಲ್ಲಿ ಸೇವೆ ಸಲ್ಲಿಸಿದ್ದರು. ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಭೈರಪ್ಪನವರು, 1991ರಲ್ಲಿ ತಮ್ಮ ವೃತ್ತಿಜೀವನದಿಂದ ನಿವೃತ್ತಿ ಹೊಂದಿದರು. ಸಾಹಿತ್ಯ ಕ್ಷೇತ್ರದಂತೆಯೇ, ಶಿಕ್ಷಣ ವೃತ್ತಿಯಲ್ಲೂ ಅವರು ಗಣನೀಯ ಕೊಡುಗೆ ನೀಡಿದ್ದಾರೆ.
ಹಲವಾರು ಪ್ರತಿಷ್ಠಿತ ಪ್ರಶಸ್ತಿ
ಭೈರಪ್ಪನವರ ಕಾದಂಬರಿಗಳಿಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಅವರ ತಂತು ಕಾದಂಬರಿಗೆ ಭಾರತೀಯ ಭಾಷಾ ಪರಿಷತ್ತಿನ ಪ್ರಶಸ್ತಿ ಲಭಿಸಿದೆ. ದಾಟು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ದೊರೆತಿದೆ. ವಂಶವೃಕ್ಷ, ಸಾಕ್ಷಿ ಮತ್ತು ದಾಟು ಕಾದಂಬರಿಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸಂದಿವೆ. ಇದರೊಂದಿಗೆ, 1994ರಲ್ಲಿ ಮಾಸ್ತಿ ಪ್ರಶಸ್ತಿ ಹಾಗೂ 1985ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯೂ ಅವರಿಗೆ ಲಭಿಸಿದೆ.
ಇಂಗ್ಲಿಷ್ ಭಾಷೆಗೂ ಭಾಷಾಂತರ
ಎಸ್.ಎಲ್. ಭೈರಪ್ಪನವರ ಕೃತಿಗಳು ಬಹುಭಾಷೆಗಳಲ್ಲಿ ಅನುವಾದಗೊಂಡು ಓದುಗರನ್ನು ತಲುಪಿವೆ. ಅವರ ಹಲವು ಪ್ರಮುಖ ಕಾದಂಬರಿಗಳು ಭಾರತದ ವಿವಿಧ ಭಾಷೆಗಳೊಂದಿಗೆ ಇಂಗ್ಲಿಷ್ ಭಾಷೆಗೂ ಭಾಷಾಂತರಗೊಂಡಿವೆ. ಇದು ಅವರ ಸಾಹಿತ್ಯದ ಜನಪ್ರಿಯತೆ ಮತ್ತು ವ್ಯಾಪಕತೆಯನ್ನು ಎತ್ತಿ ತೋರಿಸುತ್ತದೆ. ಧರ್ಮಶ್ರೀ ಕಾದಂಬರಿಯು ಸಂಸ್ಕೃತ ಮತ್ತು ಮರಾಠಿ ಭಾಷೆಗಳಿಗೆ ಅನುವಾದಗೊಂಡಿದೆ.
ವಂಶವೃಕ್ಷ ಕೃತಿಯು ತೆಲುಗು, ಮರಾಠಿ, ಹಿಂದಿ, ಉರ್ದು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಲಭ್ಯವಿದೆ. ನಾಯಿ ನೆರಳು ಹಿಂದಿ ಮತ್ತು ಗುಜರಾತಿ ಭಾಷೆಗಳಿಗೆ ಭಾಷಾಂತರಗೊಂಡಿದೆ. ತಬ್ಬಲಿಯು ನೀನಾದೆ ಮಗನೆ ಕಾದಂಬರಿಯನ್ನು ಹಿಂದಿಗೆ ಅನುವಾದಿಸಲಾಗಿದೆ. ಗೃಹಭಂಗ ಕಾದಂಬರಿಯು ಹದಿನಾಲ್ಕು ಭಾರತೀಯ ಭಾಷೆಗಳಲ್ಲಿ ಓದಲು ಲಭ್ಯವಿದೆ. ದಾಟು ಇಂಗ್ಲಿಷ್ ಸೇರಿದಂತೆ ಹದಿನಾಲ್ಕು ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಮೆಚ್ಚುಗೆ ಗಳಿಸಿದೆ.



Click it and Unblock the Notifications