Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 1ರ ರಾಶಿಫಲ: ತಿಂಗಳ ಮೊದಲ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜುಲೈ 1ರ ರಾಶಿಫಲ ನೋಡೋಣ:
ಸಂವತ್ಸರ: ಶುಭಕೃತ್
ಆಯನ: ಉತ್ತರಾಯಣ
ಋತು: ವಸಂತ
ಮಾಸ: ಆಷಾಢ
ಪಕ್ಷ: ಕೃಷ್ಣಪಕ್ಷ
ತಿಥಿ: ತ್ರಯೋದಶಿ
ನಕ್ಷತ್ರ: 03:04ರವರೆಗೆ ಅನುರಾಧ ನಂತರ ಜ್ಯೇಷ್ಠ
ರಾಹುಕಾಲ: ಬೆಳಗ್ಗೆ 09:10ರಿಂದ 10:47ರವರೆಗೆ

ಮೇಷ ರಾಶಿ
ಯಾವುದೇ ಶುಭ ಸಮಾರಂಭವನ್ನು ಮನೆಯಲ್ಲಿ ಆಯೋಜಿಸಬಹುದು. ಇದರಿಂದ ಮನಸ್ಸಿಗೆ ತುಂಬಾ ಸಂತೋಷವಾಗುತ್ತದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಇಂದು ನೀವು ಬೆಲೆ ಬಾಳುವ ವಸ್ತು ಖರೀದಿಸಬಹುದು. ಪ್ರೇಮಿಗಳಿಗೆ, ವಿವಾಹಿತರಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ಆರೋಗ್ಯದ ವಿಷಯದಲ್ಲಿ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ
ವೃಷಭ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಪ್ರಮುಖ ನಿರ್ಧಾರಗಳಿಗೆ ಸಂಗಾತಿಯ ಬೆಂಬಲ ಸಿಗಲಿದೆ. ಈ ರಾಶಿಯ ಅವಿವಾಹಿತರಿಗೆ ಇಂದು ಮದುವೆಯ ಪ್ರಸ್ತಾಪ ಬರಬಹುದು. ಆರೋಗ್ಯ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 3:15 ರಿಂದ ಸಂಜೆ 7 ರವರೆಗೆ
ಮಿಥುನ ರಾಶಿ
ನೀವು ಕೆಲವು ದಿನಗಳಿಂದ ಕೆಲಸದಲ್ಲಿ ನಿರತರಾಗಿದ್ದರೆ ಈ ದಿನ ಸ್ವಲ್ಪ ಬಿಡುವು ಸಿಗಲಿದೆ, ಕುಟುಂಬದ ಜೊತೆ ಸಮಯ ಕಳೆಯುತ್ತೀತಿ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ, ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 6:45 ರಿಂದ 8:45 ರವರೆಗೆ
ಕರ್ಕ ರಾಶಿ
ಹಣದ ವಿಷಯದಲ್ಲಿ ಈ ದಿನ ತುಂಬಾ ದುಬಾರಿಯಾಗಿರಲಿದೆ. ನಿಮ್ಮ ಖರ್ಚು ಹೆಚ್ಚಾಗಬಹುದು. ಸಂಗಾತಿಗೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರಬಹುದು, ಅವರ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಯತ್ನವನ್ನು ಮಾಡುತ್ತಿದ್ದರೆ ಇಂದು ನೀವು ಯಶಸ್ಸನ್ನು ಪಡೆಯಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:35 ರಿಂದ ರಾತ್ರಿ 8:35 ರವರೆಗೆ
ಸಿಂಹ ರಾಶಿ
ವೈವಾಹಿಕ ಜೀವನದಲ್ಲಿ ಉದ್ವಿಗ್ನತೆ ಹೆಚ್ಚಾಗಬಹುದು. ನಿಮ್ಮ ಅತಿಯಾದ ಕೋಪ ಮನೆಯ ಶಾಂತಿಯನ್ನು ಕದಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನೀವು ಟೀಕೆಗಳನ್ನು ಸಹ ಎದುರಿಸಬೇಕಾಗುತ್ತದೆ. ಪ್ರಣಯ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ನಿಮ್ಮ ಸಂಗಾತಿಯ ಬಗ್ಗೆ ನೀವು ಹೆಚ್ಚು ಗಮನ ಹರಿಸಬೇಕು. ಹಣಕಾಸಿನ ವಿಷಯಗಳಲ್ಲಿ, ನೀವು ಯಾವುದೇ ರೀತಿಯ ಆತುರವನ್ನು ಮಾಡಬಾರದು, ಇಲ್ಲದಿದ್ದರೆ ನಷ್ಟ ಉಂಟಾಗುವುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಕನ್ಯಾ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದಲ್ಲಿ ದೊಡ್ಡ ಸುಧಾರಣೆ ಕಂಡುಬರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ
ತುಲಾ ರಾಶಿ
ಇಂದು ಯಾವುದೇ ಕೆಲಸವನ್ನು ತರಾತುರಿಯಲ್ಲಿ ಅಥವಾ ಗಾಬರಿಯಿಂದ ಮಾಡಬೇಡಿ, ಹಾಗೆ ಮಾಡಿದರೆ ನಿಮಗೆ ನಷ್ಟವಾಗುವುದು. ವೃತ್ತಿ ಜೀವನ ಉತ್ತಮವಾಗಿರುತ್ತದೆ. ನೀವು ಕಷ್ಟಪಟ್ಟು ಕೆಲಸ ಮಾಡುತ್ತಿರಿ. ಹಣಕಾಸಿನ ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಿ, ಉಳಿತಾಯದ ಕಡೆ ಹೆಚ್ಚು ಗಮನ ಹರಿಸಿದರೆ ಉತ್ತಮ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ 8:55 ರವರೆಗೆ
ವೃಶ್ಚಿಕ ರಾಶಿ
ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಿರಬಹುದು. ವೈಯಕ್ತಿಕ ಜೀವನದ ಸಮಸ್ಯೆಗಳು ನಿಮ್ಮ ಕೆಲಸದಲ್ಲಿ ಮೇಲುಗೈ ಸಾಧಿಸಲು ಬಿಡಬೇಡಿ. ಈ ಸಮಯ ಬಹಳ ಮುಖ್ಯವಾಗಿದೆ, ನೀವು ಹೆಚ್ಚು ಕಷ್ಟಪಟ್ಟು ಕೆಲಸ ಮಾಡಿದಷ್ಟು ಉತ್ತಮ ಫಲ ಪಡೆಯಬಹುದು. ಪ್ರಣಯ ಜೀವನದಲ್ಲಿ ಪರಿಸ್ಥಿತಿ ಆಹ್ಲಾದಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 4 ರವರೆಗೆ
ಧನು ರಾಶಿ
ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತದ ಸಾಧ್ಯತೆ ಇದೆ. ಖರ್ಚುಗಳು ಇದ್ದಕ್ಕಿದ್ದಂತೆ ಹೆಚ್ಚಾಗಬಹುದು. ಪ್ರಣಯ ಜೀವನದ ಬಗ್ಗೆ ಹೇಳುವುದಾದರೆ ಪಾಲುದಾರರೊಂದಿಗೆ ಪರಸ್ಪರ ಸಮನ್ವಯವು ಹದಗೆಡಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನ ನಿಮಗೆ ಒಳ್ಳೆಯದಲ್ಲ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಮಕರ ರಾಶಿ
ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರಲಿದೆ. ನಿಮ್ಮ ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಅವಕಾಶವನ್ನು ನೀವು ಪಡೆಯುತ್ತೀರಿ. ಹಣಕ್ಕೆ ಸಂಬಂಧಿಸಿದ ಚಿಂತೆ ದೂರವಾಗುತ್ತದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗುವ ಬಲವಾದ ಸಾಧ್ಯತೆಯಿದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿಮ್ಮ ಆರೋಗ್ಯದ ಬಗ್ಗೆ ನೀವು ಹೆಚ್ಚು ಜಾಗರೂಕರಾಗಿರಬೇಕು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 4:05 ರಿಂದ 8:00 ರವರೆಗೆ
ಕುಂಭ ರಾಶಿ
ಸಂಗಾತಿಯೊಂದಿಗೆ ಈ ದಿನ ಕೆಲ ಮನಸ್ತಾಪ ಉಂಟಾಗಬಹುದು. ನೀವು ನಿಮ್ಮ ವೈವಾಹಿಕ ಜೀವನದ ಬಗ್ಗೆ ಗಮನ ಹರಿಸಬೇಕು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಆರೋಗ್ಯದ ಬಗ್ಗೆ ಹೇಳುವುದಾದರೆ ನೀವು ಗಂಟಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಮಧ್ಯಾಹ್ನ 12:55 ರಿಂದ ಮಧ್ಯಾಹ್ನ 3 ರವರೆಗೆ
ಮೀನ ರಾಶಿ
ಈ ದಿನ ನೀವು ಮಾಡುವ ಪ್ರಯಾಣ ಆಯಾಸ ಹೆಚ್ಚಿಸುವುದುನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ನಿರ್ಧಾರಗಳನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಿ. ನೀವು ಈಗ ಹೊಸ ಆದಾಯದ ಮೂಲವನ್ನು ಹುಡುಕುತ್ತಿದ್ದರೆ ಈ ದಿನ ಒಳ್ಳೆಯ ಸುದ್ದಿ ಸಿಗಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8 ರವರೆಗೆ



Click it and Unblock the Notifications