Latest Updates
-
ಗ್ಯಾಸ್ ಹೆಚ್ಚು ದಿನ ಬಾಳಿಕೆ ಬರಬೇಕಾ? ಈ ಟಿಪ್ಸ್ ಫಾಲೋ ಮಾಡಿ, ಗ್ಯಾಸ್ ಲೀಕ್ ಪತ್ತೆ ಮಾಡೋದು ಸಹ ಸುಲಭ! -
ಎರಡು ಹೊತ್ತು ಸವಿಯಬಹುದಾದ ಕಾಬೂಲ್ ಕಡ್ಲೆ ಕುಷ್ಕ! ಥಟ್ ಅಂತ ರೆಡಿ ಮಾಡಬಹುದು -
ಮಂಗಳ-ಗುರು ಸಂಯೋಗದಿಂದ ಕಾದಿಗೆ ಅಪರೂಪದ ಯೋಗ: ಈ ಮೂರು ರಾಶಿಯವರ ಜೀವನದಲ್ಲಿ ಶುಭಯೋಗ! -
March 15 Horoscope: ಹಣಕಾಸು ಕುರಿತಾದ ವಿಚಾರವಾಗಿ ನಿಮ್ಮಲ್ಲಿ ಚಿಂತೆ ಇದೆ -
ಲವ್ನಲ್ಲಿ ಇರುವವರಿಗೆ ಶುಭ ಸುದ್ದಿ ಸಿಗುತ್ತೆ! ದೀರ್ಘಕಾಲದ ಸಮಸ್ಯೆ ಬಗೆಹರಿಯುತ್ತೆ -
ಸಖತ್ ರುಚಿ ನೀಡುವ ಸುಲಭದ ಧನಿಯಾ ರಸಂ: ಸೂಪ್ನಂತೆ ಕುಡಿಯಬಹುದು! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 15 ರಿಂದ ಮಾರ್ಚ್ 22ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಗ್ಯಾಸ್ ಹಚ್ಚೋದೆ ಬೇಡ; ಸುಲಭವಾಗಿ ಮಾಡಿ ಈ ಅದ್ಭುತ ರುಚಿಯ ಸ್ವೀಟ್! -
ಕೆಲಸ ಮಾಡಲು ದೇಹಕ್ಕೆ ಬಲಬೇಕಾದರೆ ಈ ಹೆಸರುಕಾಳಿನ ಸೂಪರ್ಫುಡ್ ತಿನ್ನಿ! ವಾರಕ್ಕೊಂದು ಉಂಡೆ ಸಾಕು!
ಜುಲೈ 20ರ ದಿನ ಭವಿಷ್ಯ: 12 ರಾಶಿಗಳಿಗೆ ಈ ದಿನ ರಾಶಿಫಲ ಹೇಗಿದೆ?
ಶುಭೋದಯ..... ವೈದಿಕ ಶಾಸ್ತ್ರದ ಪ್ರಕಾರ ಜುಲೈ 20 ಯಾವ ರಾಶಿಯವರಿಗೆ ಶುಭವಾಗಿದೆ, ಯಾರಿ ಈ ದಿನ ಸ್ವಲ್ಪ ಜಾಗ್ರತೆವಹಿಸಬೇಕು ಎಂದು ನೋಡೋಣ:
ದಿನಾಂಕ: ಜುಲೈ 20
ನಕ್ಷತ್ರ: ಬೆಳಗ್ಗೆ 10:55ರವರೆಗೆ ಅಶ್ಲೇಷ ನಂತ ಮಘಾ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ: ಮಧ್ಯಾಹ್ನ 02:05ರಿಂದ 03:44ರವರೆಗೆ
ಮೇಷ ರಾಶಿ
ಮೇಷ ರಾಶಿಯವರಿಗೆ ಕೆಲಸದ ವಿಷಯದಲ್ಲಿ ಈ ದಿನ ಶುಭವಾಗಿದೆ, ಶೀಘ್ರದಲ್ಲೇ ನೀವು ಮಾಡುವ ಶ್ರಮಕ್ಕೆ ಸರಿಯಾದ ಫಲಿತಾಂಶ ಪಡೆಯುತ್ತೀರಿ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ, ಹಾಗಂತ ಅತಿಯಾಗಿ ಖರ್ಚು ಮಾಡಲು ಹೋಗಬೇಡಿ. ಪ್ರಣಯ ಜೀವನದಲ್ಲಿ ಏರಿತಗಳಿರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7 ರವರೆಗೆ

ವೃಷಭ ರಾಶಿ
ಆರ್ಥಿಕ ಪರಿಸ್ಥಿತಿಯಲ್ಲಿ ಕ್ಷೀಣಿಸುವ ಬಲವಾದ ಸಾಧ್ಯತೆಯಿದೆ. ನಿಮ್ಮ ತಪ್ಪು ನಿರ್ಧಾರಗಳ ಪರಿಣಾಮಗಳನ್ನು ನೀವು ಅನುಭವಿಸಬೇಕಾಗಬಹುದು. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸುಧಾರಣೆ ಕಂಡುಬರಲಿದೆ. ಕೆಲಸದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 12:50 ರವರೆಗೆ
ಮಿಥುನ ರಾಶಿ
ಸಂಗಾತಿಯ ಕೋಪದ ಸ್ವಭಾವವು ಮನೆ ನೆಮ್ಮದಿ ಹಾಳು ಮಾಡಬಹುದು, ಆದ್ದರಿಂದ ನೀವು ಜಗಳ ಬೆಳೆಯದಂತೆ ತಾಳ್ಮೆಯಿಂದ ವರ್ತಿಸುವುದು ಒಳ್ಳೆಯದು. ಕೆಲಸದ ವಿಷಯದಲ್ಲಿ ಇಂದು ತುಂಬಾ ಚೆನ್ನಾಗಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆ. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 19
ಅದೃಷ್ಟದ ಸಮಯ: ಸಂಜೆ 4:55 ರಿಂದ 7:20 ರವರೆಗೆ
ಕರ್ಕ ರಾಶಿ
ಪ್ರೇಮಿಗಳಿಗೆ ಈ ದಿನ ಅದೃಷ್ಟದ ದಿನ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಪ್ರಯತ್ನಿಸುತ್ತಿದ್ದರೆ, ಈ ದಿನ ಶುಭ ಸುದ್ದಿ ದೊರೆಯಲಿದೆ. ಸರ್ಕಾರಿ ಕೆಲಸ ಮಾಡುವವರು ತಮ್ಮ ಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯಬಹುದು. ಖಾಸಗಿ ಉದ್ಯೋಗಿಗಳಿಗೂ ಈ ದಿನ ಶುಭವಾಗಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 8:15 ರಿಂದ 11 ರವರೆಗೆ
ಸಿಂಹ ರಾಶಿ
ಏನಾದರೂ ಆರೋಗ್ಯ ಸಮಸ್ಯೆ ಇದ್ದರೆ ಈ ದಿನ ಸುಧಾರಣೆಯಾಗಲಿದೆ. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ. ಈ ದಿನದ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಪ್ರೀತಿಪಾತ್ರರರು ನಿಮಗೆ ಸಹಾಯ ಮಾಡುತ್ತಾರೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಕೆಲಸಕ್ಕಾಗಿ ಪ್ರಯಾಣಿಸಬೇಕಾಗಬಹುದು.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 6 ರಿಂದ 9:55 ರವರೆಗೆ
ಕನ್ಯಾ ರಾಶಿ
ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಬಲವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ದಿನ ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಮಾಡುವಾಗ ಆತುರಪಡಬೇಡಿ. ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು. ಆರೋಗ್ಯದ ಕಡೆ ಗಮನಹರಿಸಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಮಧ್ಯಾಹ್ನ 3:20 ರಿಂದ ಸಂಜೆ 6 ರವರೆಗೆ
ತುಲಾ ರಾಶಿ
ಕುಟುಂಬದ ಸದಸ್ಯರ ಅನುಚಿತ ವರ್ತನೆಯು ನಿಮ್ಮ ಮನಸ್ಸಿಗೆ ನೋವುಂಟು ಮಾಡಬಹುದು. ಕಚೇರಿಯಲ್ಲಿ ನಿಮ್ಮ ಕೆಲಸವನ್ನು ಅತ್ಯಂತ ಬೇಗ ಪೂರ್ಣಗೊಳಿಸಲು ಪ್ರಯತ್ನಿಸಿ, ಇಲ್ಲದಿದ್ದರೆ ನಿಮ್ಮ ಕೆಲವು ಕೆಲಸಗಳು ಇಂದು ಅಪೂರ್ಣವಾಗಿ ಉಳಿಯುತ್ತವೆ. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 8 ರವರೆಗೆ
ವೃಶ್ಚಿಕ ರಾಶಿ
ಇಂದು ನೀವು ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣವನ್ನು ಮಾಡಬೇಕಾಗಬಹುದು. ನಿಮ್ಮ ಈ ಪ್ರಯಾಣವು ತುಂಬಾ ಆಹ್ಲಾದಕರವಾಗಿರುತ್ತದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ನೀವು ಬಯಸಿದ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಸಂಬಂಧದಲ್ಲಿ ಪ್ರೀತಿ ಮತ್ತು ವಿಶ್ವಾಸ ಹೆಚ್ಚಾಗುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ರಾತ್ರಿ 9:15 ರವರೆಗೆ
ಧನು ರಾಶಿ
ಆರೋಗ್ಯದ ಬಗ್ಗೆ ಹೇಳುವುದಾದರೆ ಇಂದು ನಿಮಗೆ ಏರಿಳಿತಗಳು ತುಂಬಿರುತ್ತವೆ. ಹಳೆಯ ರೋಗ ಮತ್ತೆ ಕಾಣಿಸಿಕೊಳ್ಳಬಹುದು. ನಿಮ್ಮ ಸಂಗಾತಿಯ ಕಹಿ ಮಾತುಗಳು ಇಂದು ನಿಮ್ಮ ಹೃದಯವನ್ನು ನೋಯಿಸಬಹುದು. ಮನಸ್ಸಿನಲ್ಲಿ ಅನೇಕ ರೀತಿಯ ನಕಾರಾತ್ಮಕ ಆಲೋಚನೆಗಳು ಬರುತ್ತವೆ. ತಾಳ್ಮೆಯಿಂದಿರಲು ಸಲಹೆ ನೀಡಲಾಗಿದೆ. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಿಗ್ಗೆ 7:35 ರಿಂದ 11:35 ರವರೆಗೆ
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಕಾನೂನು ವಿಷಯಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಬೇಡಿ, ಇಲ್ಲದಿದ್ದರೆ ನಿಮ್ಮ ಕಷ್ಟಗಳು ಹೆಚ್ಚಾಗಬಹುದು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 25
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ
ಕುಂಭ ರಾಶಿ
ಮನೆಯ ವಾತಾವರಣ ಖುಷಿಯಿಂದ ಕೂಡಿರಲಿದೆ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಜೊತೆಗೆ ಸಹೋದ್ಯೋಗಿಗಳ ಬೆಂಬಲವೂ ದೊರೆಯಲಿದೆ. ಇಂದು ನಿಮ್ಮ ಎಲ್ಲಾ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ನೀವು ಅವಿವಾಹಿತರಾಗಿದ್ದರೆ ಈ ದಿನ ನಿಮಗೆ ವಿಶೇಷವಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಸಂಜೆ 4:15 ರಿಂದ ಸಂಜೆ 7 ರವರೆಗೆ
ಮೀನ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಶುಭ ದಿನವಾಗಲಿದೆ. ನೀವು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗಲು ಬಯಸಿದರೆ ಮತ್ತು ನಿಮ್ಮ ದಾರಿಯಲ್ಲಿ ಯಾವುದೇ ಅಡಚಣೆಯಿದ್ದರೆ, ಇಂದು ನಿಮ್ಮ ಸಮಸ್ಯೆಯನ್ನು ಪರಿಹರಿಸಬಹುದು. ಹಣಕ್ಕೆ ಸಂಬಂಧಿಸಿದ ಚಿಂತೆಯಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ನಿಮಗೆ ಹಣ ಬರುವ ಸಾಧ್ಯತೆ ಇದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 5:05 ರಿಂದ 8:50 ರವರೆಗೆ



Click it and Unblock the Notifications












