Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 21ರ ದಿನ ಭವಿಷ್ಯ: ಇಂದು ಈ 7 ರಾಶಿಯವರಿಗೆ ತುಂಬಾ ಒಳ್ಳೆಯದಿದೆ
ವೈದಿಕ ಶಾಸ್ತ್ರದ ಪ್ರಕಾರ ಜುಲೈ 21ರ ಭವಿಷ್ಯ ನೀಡಲಾಗಿದ್ದು ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಜುಲೈ 21
ತಿಥಿ: ತೃತೀಯಾ
ನಕ್ಷತ್ರ: ಮಧ್ಯಾಹ್ನ 01:58ರವರೆಗೆ ಮಾಘ ನಂತರ ಪೂರ್ವ ಫಲ್ಗುಣ
ರಾಹುಕಾಲ:ಬೆಳಗ್ಗೆ 10:50ರಿಂದ ಮಧ್ಯಾಹ್ನ 12:28ರವರೆಗೆ

ಮೇಷ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ಈ ದಿನ ನಿಮ್ಮ ಸ್ಥಗಿತಗೊಂಡ ಯಾವುದೇ ಕೆಲಸವು ಪೂರ್ಣಗೊಳ್ಳುತ್ತದೆ, ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ಸಂಬಂಧ ಚೆನ್ನಾಗಿರಲಿದೆ. ನಿಮ್ಮ ಪ್ರಮುಖ ನಿರ್ಧಾರಗಳಲ್ಲಿ ನಿಮ್ಮ ಪ್ರೀತಿಪಾತ್ರರ ಬೆಂಬಲವನ್ನು ನೀವು ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಸಂಜೆ 6 ರಿಂದ 8:45 ರವರೆಗೆ
ವೃಷಭ ರಾಶಿ
ನೀವಿಂದು ಮಾಡುವ ಪ್ರಯಾಣ ತುಂಬಾ ಖುಷಿಯನ್ನು ನೀಡಲಿದೆ. ಈ ದಿನ ನೀವು ನಿಮ್ಮ ನಿರೀಕ್ಷೆಯಂತೆ ಫಲಿತಾಂಶಗಳನ್ನುಪಡೆಯುವುದರಿಂದ ತುಂಬಾನೇ ಖುಷಿಯಾಗಿ ಇರುತ್ತೀರಿ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರಲಿದೆ. ಮನೆಯ ಸದಸ್ಯರಿಂದ ನೀವು ಬಯಸಿದ ಉಡುಗೊರೆಯನ್ನು ಪಡೆಯಬಹುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಬೆಳಗ್ಗೆ 6 ರಿಂದ 9:20 ರವರೆಗೆ
ಮಿಥುನ ರಾಶಿ
ಪ್ರಣಯ ಜೀವನ ಚೆನ್ನಾಗಿರಲಿದೆ. ನಿಮ್ಮಿಬ್ಬರ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ನಿಮ್ಮ ಹಣಕಾಸಿನ ಪ್ರಯತ್ನಗಳು ಯಶಸ್ವಿಯಾಗಬಹುದು, ಇಂದು ಆರೋಗ್ಯದ ವಿಷಯದಲ್ಲಿ ಮಿಶ್ರಫಲ, ಕೆಲಸ ಅಂತ ತುಂಬಾ ತಲೆಕೆಡಿಸಿಕೊಳ್ಳದೆ ಆರೋಗ್ಯದ ಕಡೆಯೂ ಗಮನಹರಿಸಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 6 ರವರೆಗೆ
ಕರ್ಕ ರಾಶಿ
ಸಂಗಾತಿಯೊಂದಿಗೆ ಈ ದಿನ ಮನಸ್ತಾಪ ಉಂಟಾಗಬಹುದು, ನೀವು ನಿಮ್ಮ ಕೋಪ ನಿಯಂತ್ರಿಸದಿದ್ದರೆ ನಿಮ್ಮ ಸಂಸಾರದಲ್ಲಿ ಸಮಸ್ಯೆ ಮತ್ತಷ್ಟು ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಮನೆಯಲ್ಲಿ ಖರ್ಚು ಹೆಚ್ಚಬಹುದು. ಇದರಿಂದ ಸಾಲವನ್ನು ತೆಗೆದುಕೊಳ್ಳಬೇಕಾಗಬಹುದು. ಆರೋಗ್ಯ ಹದಗೆಡುವ ಲಕ್ಷಣಗಳಿವೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ಸಿಂಹ ರಾಶಿ
ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಮಾತನ್ನು ನಿರ್ಲಕ್ಷಿಸುವ ತಪ್ಪು ಮಾಡಬೇಡಿ. ನಿಮ್ಮ ಕೆಲಸದ ಮೇಲೆ ಸಂಪೂರ್ಣವಾಗಿ ಗಮನಹರಿಸಲು ಪ್ರಯತ್ನಿಸಿ. ವ್ಯಾಪಾರಸ್ಥರು ಹಣದ ವಿಚಾರದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಮಾಡಬಾರದು. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತದೆ. ಆರೋಗ್ಯದಲ್ಲಿ ಇಂದು ನಿಮಗೆ ಮುಖ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 5:10 ರಿಂದ 8:25 ರವರೆಗೆ
ಕನ್ಯಾ ರಾಶಿ
ಕೆಲಸದ ವಿಷಯದಲ್ಲಿ ಈ ದಿನ ಮುಖ್ಯವಾಗಿರಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ನೀವು ಆರಾಮದಾಯಕವಾದ ಯಾವುದೇ ಬೆಲೆಬಾಳುವ ವಸ್ತುವನ್ನು ಸಹ ಖರೀದಿಸಬಹುದು. ಸಂಗಾತಿಯೊಂದಿಗಿನ ಸಂಬಂಧವು ತೀವ್ರವಾಗಿರುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ
ತುಲಾ ರಾಶಿ
ಈ ದಿನ ತುಂಬಾ ಕಾರ್ಯನಿರತವಾಗಿರುತ್ತದೆ. ಇದು ನಿಮ್ಮ ವ್ಯಕ್ತಿತ್ವವನ್ನು ಹೆಚ್ಚಿಸುತ್ತದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಇಂದು ಸಂಗಾತಿಯೊಂದಿಗೆ ಖುಷಿಯಾಗಿ ಇರುತ್ತೀರಿ, ಏನಾದರೂ ಆರೋಗ್ಯ ಸಂಬಂಧಿ ಸಮಸ್ಯೆ ಇದ್ದರೆ ಸಂಬಂಧ ಸುಧಾರಿಸಬಹುದು.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 8:35 ರಿಂದ 10 ರವರೆಗೆ
ವೃಶ್ಚಿಕ ರಾಶಿ
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಅತ್ಯಂತ ಮಹತ್ವದ ದಿನವಾಗಲಿದೆ. ನಿಮ್ಮ ವಿದ್ಯಾಭ್ಯಾಸದಲ್ಲಿ ಇದ್ದ ಅಡೆತಡೆ ನಿವಾರಣೆಯಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಖುಷಿಗಾಗಿ ಹಣವನ್ನು ಖರ್ಚು ಮಾಡುತ್ತೀರಿ. ಉದ್ಯೋಗಸ್ಥರಿಗೆ ಈ ದಿನ ಉತ್ತಮವಾಗಿದೆ. ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 3:30 ರಿಂದ ಸಂಜೆ 7:30 ರವರೆಗೆ
ಧನು ರಾಶಿ
ಪ್ರಣಯ ಜೀವನದಲ್ಲಿ ಸ್ಥಿರತೆ ಇರಲಿದೆ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು, ನಿಮ್ಮ ನಿರ್ಧಾರಗಳನ್ನು ನೀವು ಬಹಳ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಇತರರ ಮಾತು ಕೇಳಿ ನಿರ್ಧಾರ ತೆಗೆದುಕೊಳ್ಳಬೇಡಿ.
ಅದೃಷ್ಟದ ಬಣ್ಣ: ಗಾಢ ನೀಲಿ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಬೆಳಗ್ಗೆ 4:15 ರಿಂದ 8:50 ರವರೆಗೆ
ಮಕರ ರಾಶಿ
ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಕೆಲಸಕ್ಕೆ ಸಂಗಾತಿಯ ಬೆಂಬಲ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ದಿನನಿತ್ಯದ ಖರ್ಚುಗಳನ್ನು ಸುಲಭವಾಗಿ ಪೂರೈಸಲಾಗುವುದು. ಕೆಲಸದ ವಿಷಯದಲ್ಲಿ ಇಂದು ನಿಮಗೆ ಮಿಶ್ರಫಲ. ಆರೋಗ್ಯವಾಗಿರಲು, ಅನಗತ್ಯ ಚಿಂತೆಗಳಿಂದ ದೂರವಿರಿ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಸಂಜೆ 4:20 ರಿಂದ ರಾತ್ರಿ 8:15 ರವರೆಗೆ
ಕುಂಭ ರಾಶಿ
ಇಂದು ನೀವು ಕುಟುಂಬದ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಬಹುದು. ಹಣಕಾಸಿನ ತೊಂದರೆಗಳಿಂದ ಮುಕ್ತಿ ದೊರೆಯಲಿದೆ. ಹಣದ ಸ್ಥಿತಿ ಚೆನ್ನಾಗಿರಲಿದೆ. ಉದ್ಯೋಗಸ್ಥರ ಕಠಿಣ ಪರಿಶ್ರಮ ಯಶಸ್ವಿಯಾಗಲಿದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಇಂದು ಧನಾತ್ಮಕವಾಗಿರುತ್ತೀರಿ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಮೀನ ರಾಶಿ
ವೈವಾಹಿಕ ಜೀವನದಲ್ಲಿ ಸ್ವಲ್ಪ ಏರಳಿತಗಳಿರಲಿದೆ. ಕೆಲಸದ ಒತ್ತಡದಿಂದ ಕುಟುಂಬಕ್ಕೆ ಸಮಯ ಕೊಡಲು ಸಾಧ್ಯವಾಗುವುದಿಲ್ಲ, ಅದು ಕೂಡ ಸಮಸ್ಯೆಗೆ ಕಾರಣವಾಗುವುದು. ಹಣದ ವಿಷಯದಲ್ಲಿ ದಿನವು ಸಾಮಾನ್ಯವಾಗಿರುತ್ತದೆ. ನೀವು ಇಂದು ದೊಡ್ಡದನ್ನು ಖರ್ಚು ಮಾಡಲು ಹೋದರೆ, ಅದನ್ನು ಬುದ್ಧಿವಂತಿಕೆಯಿಂದ ಖರ್ಚು ಮಾಡಲು ಸಲಹೆ ನೀಡಲಾಗಿದೆ. ಕಚೇರಿಯಲ್ಲಿ ನಿಮ್ಮ ಅಪೂರ್ಣ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ. ಆರೋಗ್ಯದ ಬಗ್ಗೆ ಗಮನ ಕೊಡಿ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 12:50 ರಿಂದ ಮಧ್ಯಾಹ್ನ 3 ರವರೆಗೆ



Click it and Unblock the Notifications