Latest Updates
-
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ! -
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು!
ಜುಲೈ 22ರ ದಿನ ಭವಿಷ್ಯ: ಶನಿವಾರ ನಿಮ್ಮ ರಾಶಿಫಲ ಹೇಗಿರಲಿದೆ?
ವೈದಿಕ ಶಾಸ್ತ್ರದ ಪ್ರಕಾರ ಜುಲೈ 22ರ ಭವಿಷ್ಯ ನೀಡಲಾಗಿದ್ದು ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಜುಲೈ 22
ತಿಥಿ: ಬೆಳಗ್ಗೆ 09:26ರವರೆಗೆ ಚತುರ್ಥಿ ನಂತರ ಪಂಚಮಿ
ನಕ್ಷತ್ರ: ಪೂರ್ವ ಫಲ್ಗುಣಿ
ರಾಹುಕಾಲ: ಬೆಳಗ್ಗೆ 09:12ರಿಂದ 10:50ರವರೆಗೆ
ಮೇಷ ರಾಶಿ
ಈ ದಿನ ಮೇಷ ರಾಶಿಯವರಿಗೆ ಉತ್ತಮವಾಗಿದೆ. ಈ ದಿನ ನೀವು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಬಹುದು. ಕೆಲವು ನಿರ್ಗತಿಕರಿಗೆ ಸಹಾಯ ಮಾಡುವ ಅವಕಾಶ ಸಿಕ್ಕರೆ ನಿಮ್ಮಿಂದಾಗುವ ಸಹಾಯ ಮಾಡಿ. ಹಣದ ಬಗ್ಗೆ ಹೇಳುವುದಾದರೆ ಈ ದಿನ ಉತ್ತಮವಾಗಿದೆ. ಸಂಗಾತಿಯೊಂದಿಗೆ ಮಾಧುರ್ಯ ಹೆಚ್ಚಲಿದೆ, ನಿಮ್ಮ ಆರೋಗ್ಯ ಕೂಡ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 12 ರಿಂದ 3 ರವರೆಗೆ

ವೃಷಭ ರಾಶಿ
ಈ ದಿನ ಸ್ವಲ್ಪ ಒತ್ತಡದಿಂದ ಕೂಡಿರಲಿದೆ, ವೈಯಕ್ತಿಕ ಜೀವನದಲ್ಲಿ ಹಾಗೂ ವೃತ್ತಿಪರ ಜೀವನದಲ್ಲಿ ಒತ್ತಡ ಇರಲಿದೆ. ಇದರಿಂದಾಗಿ ತುಂಬಾ ಆಯಾಸ ಅನಿಸಬಹುದು. ಈ ದಿನ ಖರ್ಚು ಮಿತಿಯಲ್ಲಿ ಮಾಡಿದರೆ ಒಳ್ಳೆಯದು. ಅನಗತ್ಯ ವೆಚ್ಚಗಳು ನಿಮ್ಮ ಬಜೆಟ್ ಅನ್ನು ಹಾಳುಮಾಡಬಹುದು. ರೊಮ್ಯಾಂಟಿಕ್ ಜೀವನ ಉತ್ತಮವಾಗಿರುತ್ತದೆ. ಸಂಗಾತಿಯೊಂದಿಗಿನ ಸಂಬಂಧ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ
ಮಿಥುನ ರಾಶಿ
ಮಿಥುನ ರಾಶಿಯವೇ ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ, ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಈ ದಿನ ಅತಿಯಾಗಿ ಕೆಲಸದ ಒತ್ತಡ ತೆಗೆದುಕೊಳ್ಕಬೇಡಿ. ಕಠಿಣ ಪರಿಶ್ರಮದ ಹೊರತಾಗಿಯೂ ನೀವು ನಿರೀಕ್ಷಿತ ಫಲಿತಾಂಶವನ್ನು ಪಡೆಯದಿದ್ದರೆ ನಿರಾಸೆ ಮಾಡಬೇಡಿ, ಧನಾತ್ಮಕವಾಗಿರಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಈ ದಿನ ಮಿಶ್ರಫಲ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಹಣದ ವಿಷಯದಲ್ಲಿ ಇಂದು ಶುಭಫಲ. ಆಸ್ತಿಗೆ ಸಂಬಂಧಿಸಿದಂತೆ ವ್ಯವಹಾರ ಮಾಡಿದರೆ ಲಾಭ ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನವು ಬಲವಾಗಿರುತ್ತದೆ. ಈ ದಿನ ಆತ್ಮವಿಶ್ವಾಸ ಚೆನ್ನಾಗಿರಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ಇರಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಬೆಳಿಗ್ಗೆ 5:05 ರಿಂದ 8:55 ರವರೆಗೆ
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿದೆ, ನೀವು ಇತ್ತೀಚೆಗೆ ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಈ ದಿನ ಉತ್ತಮ ಲಾಭ ಗಳಿಸಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಪ್ರೀತಿಪಾತ್ರರ ಸಹಾಯದಿಂದ ದೊಡ್ಡ ಸಮಸ್ಯೆಯನ್ನು ಪರಿಹರಿಸಬಹುದು. ಆರ್ಥಿಕ ಪರಿಸ್ಥಿತಿ ಮತ್ತಷ್ಟು ಬೆಳೆಯುವ ಲಕ್ಷಣಗಳಿವೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 21
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ
ಕನ್ಯಾ ರಾಶಿ
ಕನ್ಯಾ ರಾಶಿಯವರೇ ಆರೋಗ್ಯದ ಬಗ್ಗೆ ಜಾಗ್ರತೆ, ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು. ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ. ಈ ದಿನ ನೀವು ಕೋಪವನ್ನು ನಿಯಂತ್ರಿಸಿ. ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ
ತುಲಾ ರಾಶಿ
ಈ ದಿನ ನೀವು ಉಲ್ಲಾಸದಿಂದ ಇರುತ್ತೀರಿ, ನಿಮ್ಮ ಎನರ್ಜಿಯನ್ನು ಸರಿಯಾದ ಕೆಲಸಗಳಿಗಾಗಿ ಬಳಸಿದರೆ, ನೀವು ಖಂಡಿತವಾಗಿಯೂ ಅದರಿಂದ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ದಿನದ ಎರಡನೇ ಭಾಗದಲ್ಲಿ, ನಿಮ್ಮ ನೆಚ್ಚಿನ ಸ್ಥಳಕ್ಕೆ ಹೋಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:15 ರಿಂದ 9:05 ರವರೆಗೆ
ವೃಶ್ಚಿಕ ರಾಶಿ
ಕೆಲಸದ ಹೊರೆ ಕಡಿಮೆಯಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ಇಂದು ನೀವು ನಿಮ್ಮ ಕುಟುಂಬಕ್ಕೆ ಸಾಕಷ್ಟು ಸಮಯವನ್ನು ನೀಡಲು ಸಾಧ್ಯವಾಗುತ್ತದೆ. ನೀವು ಅವರಿಗೆ ಉಡುಗೊರೆಗಳು ಇತ್ಯಾದಿಗಳನ್ನು ಖರೀದಿಸಬಹುದು. ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಏರಿಳಿತಗಳು ತುಂಬಿರುತ್ತವೆ. ನಿಮ್ಮ ಶಿಕ್ಷಣದಲ್ಲಿ ಅಡಚಣೆ ಉಂಟಾಗಬಹುದು. ಹಣದ ವಿಷಯದಲ್ಲಿ, ದಿನವು ಮಿಶ್ರವಾಗಿರುತ್ತದೆ. ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ಅದೃಷ್ಟ ಬಣ್ಣ: ಹಳದಿ
ಅದೃಷ್ಟ ಸಂಖ್ಯೆ: 34
ಅದೃಷ್ಟ ಸಮಯ: ಬೆಳಗ್ಗೆ 4:20 ರಿಂದ 8:50 ರವರೆಗೆ
ಧನು ರಾಶಿ
ಪ್ರೇಮಿಗಳಿಗೆ ಈ ದಿನ ಅನುಕೂಲಕರವಲ್ಲ, ನಿಮ್ಮಿಬ್ಬರ ನಡುವೆ ನಂಬಿಕೆಯ ಕೊರತೆ ಇರುತ್ತದೆ. ಹಣದ ಸ್ಥಿತಿಯಲ್ಲಿ ಕುಸಿತ ಉಂಟಾಗಬಹುದು. ಅನಗತ್ಯ ವೆಚ್ಚಗಳು ನಿಮ್ಮ ಬಜೆಟ್ ಅನ್ನು ಅಸಮತೋಲನಗೊಳಿಸಬಹುದು. ಇಂದು ಕೆಲಸದ ಒತ್ತಡ ಅಧಿಕವಿರಲಿದೆ. ನೀವು ಕೆಲಸದ ನಿಮಿತ್ತ ಪ್ರಯಾಣಿಸಬೇಕಾಗಬಹುದು.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 4 ರವರೆಗೆ
ಮಕರ ರಾಶಿ
ನೀವು ವ್ಯಾಪಾರಸ್ಥರಾಗಿದ್ದು ನಿರ್ಧಾರ ತೆಗೆದುಕೊಳ್ಳುವ ವಿಷಯದಲ್ಲಿ ಆತುರ ಬೇಡ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ, ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸರಿಯಾಗಿ ಬಳಸಲು ಸಲಹೆ ನೀಡಲಾಗುವುದು, ಕುಟುಂಬ ಜೀವನದಲ್ಲಿ ನೆಮ್ಮದಿ ಇರಲಿದೆ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:15 ರವರೆಗೆ
ಕುಂಭ ರಾಶಿ
ದಾಂಪತ್ಯ ಜೀವನದಲ್ಲಿ ಮಾಧುರ್ಯದಿಂದ ಕೂಡಿರಲಿದೆ. ಆರ್ಥಿಕ ಸ್ಥಿತಿಯಲ್ಲಿ ಏರಳಿತ ಉಂಟಾಗಬಹುದು, ಬರಬೇಕಾಗಿದ್ದ ಹಣ ಬಾರದೇ ಇರುವ ಕಾರಣದಿಂದ ಚಿಂತೆ ಹೆಚ್ಚಾಗಬಹುದು. ವ್ಯವಹಾರಸ್ಥರಿಗೆ ಈ ದಿನ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 29
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 9 ರವರೆಗೆ
ಮೀನ ರಾಶಿ
ಈ ದಿನ ನೀವು ಮಾತನಾಡುವಾಗ ನಿಮ್ಮ ಮಾತಿನ ಮೇಲೆ ಜಾಗ್ರತೆವಹಿಸಿ, ಕಚೇರಿಯಲ್ಲಿ ನಿಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿ, ಇಲ್ಲದಿದ್ದರೆ ಇಂದು ನೀವು ಬಾಸ್‌ನ ಕೋಪವನ್ನು ಎದುರಿಸಬೇಕಾಗಬಹುದು. ಹಣದ ವಿಷಯದಲ್ಲಿ, ದಿನವು ಉತ್ತಮವಾಗಿರುತ್ತದೆ. ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಬೆಳಗ್ಗೆ 6:30 ರಿಂದ 8:15 ರವರೆಗೆ



Click it and Unblock the Notifications
