Latest Updates
-
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ
ಜುಲೈ 24ರ ದಿನ ಭವಿಷ್ಯ: ಸೋಮವಾರ ಮೇಷ ರಾಶಿಯವರಿಗೆ ಶುಭ, ಉಳಿದ ರಾಶಿಗಳ ರಾಶಿಫಲ ಹೇಗಿದೆ?
ವೈದಿಕಶಾಸ್ತ್ರದ ಪ್ರಕಾರ ಜುಲೈ 24ರ ಭವಿಷ್ಯ ನೀಡಲಾಗಿದ್ದು, ಈ ದಿನ 12 ರಾಶಿಗಳ ರಾಶಿಫಲ ನೀಡಲಾಗಿದೆ:
ದಿನಾಂಕ: ಜುಲೈ 24
ತಿಥಿ: ಷಷ್ಠಿ, ಮಧ್ಯಾಹ್ನ 1:42ರ ನಂತರ ಸಪ್ತಮಿ
ನಕ್ಷತ್ರ ಹಸ್ತ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ: ಬೆಳಗ್ಗೆ 07:34ರಿಂದ 09:12ರವರೆಗೆ
ಮೇಷ ರಾಶಿ
ಈ ದಿನ ಹೊಸ ಕೆಲಸ ಆರಂಭಿಸುತ್ತಿದ್ದರೆ ಶುಭವಾಗಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ನಿಮ್ಮ ಸರಿಯಾದ ನಿರ್ಧಾರಗಳಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು. ಚಿಕ್ಕ ವಿಷಯ ದೊಡ್ಡದು ಮಾಡಲು ಹೋಗಬೇಡಿ.
ಅದೃಷ್ಟದ ಬಣ್ಣ: ಮರೂನ್
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8 ರವರೆಗೆ

ವೃಷಭ ರಾಶಿ
ಇಂದು ನಿಮಗೆ ತುಂಬಾ ವಿಶೇಷವಾಗಿರಲಿದೆ, ಈ ದಿನ ನೀವು ಬಯಸಿದ ಫಲಿತಾಂಶವನ್ನು ಪಡೆಯುತ್ತೀರಿ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಖುಷಿಯಿಂದ ಸಮಯ ಕಳೆಯುತ್ತೀರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 22
ಅದೃಷ್ಟದ ಸಮಯ: ಮಧ್ಯಾಹ್ನ 12:55 ರಿಂದ ಮಧ್ಯಾಹ್ನ 3 ರವರೆಗೆ
ಮಿಥುನ ರಾಶಿ
ಈ ದಿನ ತುಂಬಾ ಉಲ್ಲಾಸದಿಂದ ಇರುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಕಡೆ ಹೆಚ್ಚು ಗಮನ ಹರಿಸಬೇಕು. ಶೀಘ್ರದಲ್ಲೇ ಸಾಲವನ್ನು ತೊಡೆದುಹಾಕಲು,ನಿಮ್ಮ ಖರ್ಚುಗಳಿಗೆ ಕಡಿವಾಣ ಹಾಕಬೇಕು. ಕಚೇರಿಯಲ್ಲಿನ ಉನ್ನತ ಅಧಿಕಾರಿಗಳ ಸಹಾಯದಿಂದ ನಿಮ್ಮ ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುತ್ತವೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಬೆಳಗ್ಗೆ 4:05 ರಿಂದ 8:00 ರವರೆಗೆ
ಕರ್ಕ ರಾಶಿ
ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಬರಬೇಕಾಗಿರುವ ಹಣ ನಿಮ್ಮ ಕೈ ಸೇರಲಿದೆ. ಈ ದಿನ ನೀವು ಯಾವುದೇ ಹಣಕಾಸಿನ ನಿರ್ಧಾರವನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಸಿಂಹ ರಾಶಿ
ಈ ದಿನ ಆರೋಗ್ಯ ಸಂಬಂಧಿ ಸಮಸ್ಯೆ ಎದುರಾಗಬಹುದು. ಕೆಟ್ಟ ಆರೋಗ್ಯವು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರಬಹುದು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಮನೆಯ ಹಿರಿಯರೊಂದಿಗೆ ಸಂವಾದ ಮಾಡುವಾಗ ನಿಮ್ಮ ಮಾತುಗಳನ್ನು ಎಚ್ಚರಿಕೆಯಿಂದ ಬಳಸಿ. ಇಲ್ಲದಿದ್ದರೆ ನಿಮ್ಮಿಂದ ನಿಮ್ಮ ಆಪ್ತರಿಗೆ ನೋವು ಉಂಟಾಗಬಹುದು.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 12:30 ರಿಂದ ಸಂಜೆ 4 ರವರೆಗೆ
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಮಿಶ್ರಫಲ. ಈ ದಿನ ನಿಮ್ಮ ಕೆಲಸದಲ್ಲಿ ಅಡೆತಡೆ ಉಂಟಾಗಬಹುದು, ಆದರೆ ನಿಮ್ಮ ಈ ಸಮಸ್ಯೆ ತಾತ್ಕಾಲಿಕ. ಹಣದ ಪರಿಸ್ಥಿತಿ ಉತ್ತಮವಾಗಿರುತ್ತದೆ. ಸಂಗಾತಿಯ ನಡವಳಿಕೆ ನಿಮ್ಮ ಮನಸ್ಸಿಗೆ ಖುಷಿ ನೀಡಲಿದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಅದೃಷ್ಟದ ಬಣ್ಣ: ಬೂದು
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಬೆಳಿಗ್ಗೆ 7:20 ರಿಂದ 8:55 ರವರೆಗೆ
ತುಲಾ ರಾಶಿ
ವಿದ್ಯಾರ್ಥಿಗಳು ಶಿಕ್ಷಣಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಈ ದಿನ ನಿಮ್ಮ ಶಿಕ್ಷಕರ ಜೊತೆ ಮಾತನಾಡಿ ಅವರ ಮಾರ್ಗದರ್ಶನ ಪಡೆಯಿರಿ. ಶೀಘ್ರದಲ್ಲೇ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿದೆ. ನಿಮ್ಮ ಯಾವುದೇ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ
ವೃಶ್ಚಿಕ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ದಿನ ಅನುಕೂಲಕರವಾಗಿದೆ. ಭವಿಷ್ಯದಲ್ಲಿ ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಲು, ನೀವು ಇಂದು ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆಸ್ತಿ ವ್ಯವಹಾರ ಮಾಡುವವರು ಉತ್ತಮ ಲಾಭವನ್ನು ಪಡೆಯಬಹುದು.ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದ ಸಂಖ್ಯೆ: 17
ಅದೃಷ್ಟದ ಸಮಯ: ಮಧ್ಯಾಹ್ನ 3:15 ರಿಂದ ಸಂಜೆ 7 ರವರೆಗೆ
ಧನು ರಾಶಿ
ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯೊಂದನ್ನುಕಾಣಬಹುದು. ನೀವು ಮಾಡಿರುವ ಹಳೆಯ ಸಾಲವನ್ನು ಮರುಪಾವತಿಸಲು ಸಾಧ್ಯವಾಗುವುದು, ದಿನಚರಿಯಲ್ಲಿ ನೀವು ಇತ್ತೀಚೆಗೆ ಕೆಲವು ಬದಲಾವಣೆಗಳನ್ನು ಮಾಡಿದ್ದರೆ, ಇಂದು ನೀವು ಅದರ ಸಕಾರಾತ್ಮಕ ಪರಿಣಾಮವನ್ನುಕಾಣಬಹುದು.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಬೆಳಿಗ್ಗೆ 6:45 ರಿಂದ 8:45 ರವರೆಗೆ
ಮಕರ ರಾಶಿ
ನೀವು ಇಂದು ದೀರ್ಘ ಪ್ರಯಾಣವನ್ನು ಮಾಡುತ್ತಿದ್ದರೆ, ನೀವು ಜಾಗರೂಕರಾಗಿರಲು ಸಲಹೆ ನೀಡಲಾಗುತ್ತದೆ. ಇದಲ್ಲದೆ ಇಂದು ನೀವು ವಾಹನವನ್ನು ಬುದ್ಧಿವಂತಿಕೆಯಿಂದ ಬಳಸಬೇಕು. ಹಣದ ವಿಷಯದಲ್ಲಿ, ದಿನವು ಮಿಶ್ರವಾಗಿರುತ್ತದೆ. ನಿಮ್ಮ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಸಂಗಾತಿಯ ನಡವಳಿಕೆಯಲ್ಲಿ ಸ್ವಲ್ಪ ಬದಲಾವಣೆ ಕಂಡುಬರುವುದು. ನಿಮ್ಮ ನಡುವಿನ ಅಂತರ ಹೆಚ್ಚಾಗಬಹುದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:35 ರಿಂದ ರಾತ್ರಿ 8:35 ರವರೆಗೆ
ಕುಂಭ ರಾಶಿ
ಕೆಲಸದ ದೃಷ್ಟಿಯಿಂದಈ ದಿನ ಶುಭವಾಗಿದೆ, ಉದ್ಯೋಗವಿರಲಿ, ವ್ಯವಹಾರವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ, ಇಂದು ಯೋಚಿಸದೆ ಯಾವುದೇ ದೊಡ್ಡ ಖರ್ಚು ಮಾಡಬೇಡಿ. ಆರೋಗ್ಯ ಸಂಬಂಧಿತ ಸಮಸ್ಯೆಗಳು ದೂರವಾಗಬಹುದು.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 26
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 5 ರವರೆಗೆ
ಮೀನ ರಾಶಿ
ಮಕ್ಕಳ ಕಡೆಯಿಂದ ಮಗುವಿನ ಕಡೆಯಿಂದ ಸಂತೋಷ ಇರುತ್ತದೆ. ಅವರು ಶಿಕ್ಷಣ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ಮಾಡುತ್ತಾರೆ. ಆಲೋಚಿಸದೆ ನಿಮ್ಮ ಸಂಗಾತಿಯೊಂದಿಗೆ ಯಾವುದೇ ಭರವಸೆಯನ್ನು ನೀಡಬೇಡಿ ಇಲ್ಲದಿದ್ದರೆ ಅದು ನಿಮ್ಮ ಸಂಬಂಧದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಖರ್ಚು ಹೆಚ್ಚಾಗಬಹುದು. ಕೆಲಸದ ನಿಮಿತ್ತ ದೂರ ಪ್ರಯಾಣ ಮಾಡಬೇಕಾಗುತ್ತದೆ. ನಿಮ್ಮ ಈ ಪಯಣ ಬಹುಮುಖ್ಯವಾಗಲಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ



Click it and Unblock the Notifications












