Latest Updates
-
ಮಘಾ ನಕ್ಷತ್ರಕ್ಕೆ ಕೇತು.. ಈ ಎಲ್ಲಾ ರಾಶಿಯವರ ಜೀವನದಲ್ಲಿ ಭಾರಿ ಬದಲಾವಣೆ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? -
10 ನಿಮಿಷಗಳ ಅಪ್ಪೆ.. ಹೆಸರುಕಾಳು ಮತ್ತು ಬಟಾಣಿ ಬಳಸಿ ಮಾಡುವ ರೆಸಿಪಿ! ಮೃದುವಾಗಿ ಮಾಡೋದು ಹೇಗೆ ಗೊತ್ತಾ? -
ವಿವಾಹಿತ ದಂಪತಿಗಳಿಗೂ ಈ ದಿನ ಸಂತೋಷದಾಯಕ! ಸಂಗಾತಿ ಮೇಲೆ ಡೌಟ್ ಬೇಡ -
March 13 Horoscope: ಶುಭ ಕಾರ್ಯ ಸಂಬಂಧಿತ ಚರ್ಚೆಗಳಿವೆ -
ಬೇಸಿಗೆಯಲ್ಲಿ ಈ ಗಂಜಿ ಕುಡಿಯಿರಿ.. ಕೊಬ್ಬು ಕಡಿಮೆ, ದೇಹಕ್ಕೂ ತಂಪು! ಈ ಗಂಜಿಯ ಆರೋಗ್ಯ ರಹಸ್ಯ ಇಲ್ಲಿದೆ -
30 ವರ್ಷಗಳ ಬಳಿಕ ಸೂರ್ಯ-ಶನಿ ಸಂಯೋಗ! ಯಾರಿಗೆ ಶುಭ? ಯಾರಿಗೆ ಸಮಸ್ಯೆ? 12 ರಾಶಿಗಳ ಜಾತಕ ತಿಳಿಯಿರಿ -
ಈ 5 ವಿಷಯಗಳಲ್ಲಿ ಮಿತಿ ಮೀರಿದ್ರೆ ಜೀವನ ಸರ್ವನಾಶ! ಅಹಂಕಾರ ಬಿಡಿ.. ಇಂದೇ ಇವುಗಳಿಂದ ದೂರವಿರಿ -
ಪಕ್ಕಾ ಹೈದರಾಬಾದಿ ರುಚಿ.. ಅತಿಥಿಗಳು ಬಂದ್ರೆ ಈ ಚಿಕನ್ ಯಖನಿ ಪುಲಾವ್ ಮಾಡಿ! ಸಿಂಪಲ್ & ಸೂಪರ್ ರುಚಿ -
2026ರ ಸೂರ್ಯ ಗೋಚಾರ: ಇವರಿಗೆ ಸಿಗಲಿದೆ ಸರ್ಕಾರಿ ಉದ್ಯೋಗ! ಯಾರಿಗೆ ಮಾನಸಿಕ ಒತ್ತಡ? 12 ರಾಶಿಯವರಿಗೆ ರಾಶಿಫಲ ಇಲ್ಲಿದೆ -
ಹೋಟೆಲ್ ಶೈಲಿಯ ಆಲೂ ಮಸಾಲಾ ಪೂರಿ! ಈ ರೀತಿ ಮನೆಯಲ್ಲೇ ಮಾಡಿ, ಪರ್ಫೆಕ್ಟ್ ಆಗಿ ಉಬ್ಬಿ ಬರುತ್ತೆ
ಜುಲೈ 25ರ ದಿನ ಭವಿಷ್ಯ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ವೈದಿಕ ಶಾಸ್ತ್ರದ ಪ್ರಕಾರ ಜುಲೈ 25ರ ಭವಿಷ್ಯ ನೀಡಲಾಗಿದ್ದು ಈ ದಿನ ನಿಮ್ಮ ರಾಶಿಗೆ ಹೇಗಿರಲಿದೆ ಎಂದು ನೋಡೋಣ:
ದಿನಾಂಕ: ಜುಲೈ 25
ತಿಥಿ: ಮಧ್ಯಾಹ್ನ 03:08ರವರೆಗೆ ಸಪ್ತಮಿ ನಂತರ ಅಷ್ಟಮಿ
ನಕ್ಷತ್ರ: ಚಿತ್ರ
ಪಕ್ಷ: ಶುಕ್ಲ ಪಕ್ಷ
ರಾಹುಕಾಲ: ಮಧ್ಯಾಹ್ನ 03:43ರಿಂದ 05:21ರವರೆಗೆ
ಮೇಷ ರಾಶಿ
ಇಂದು ನಿಮ್ಮ ದೊಡ್ಡ ಚಿಂತೆ ದೂರವಾಗುತ್ತದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನಿಮ್ಮ ಆದಾಯ ಹೆಚ್ಚಾಗಬಹುದು. ಆದರೆ ಎಚ್ಚರಿಕೆಯಿಂದ ಬಳಸಿ, ನೀವು ಯಾವುದೇ ಹಣಕಾಸಿನ ನಿರ್ಧಾರವನ್ನು ಈ ದಿನ ತೆಗೆದುಕೊಳ್ಳಬೇಡಿ. ಇಂದು ನಿಮ್ಮ ಸಂಗಾತಿಯೊಂದಿಗೆ ತುಂಬಾ ರೋಮ್ಯಾಂಟಿಕ್ ದಿನವಾಗಿರಲಿದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಿಗ್ಗೆ 8 ರಿಂದ ಸಂಜೆ 7 ರವರೆಗೆ

ವೃಷಭ ರಾಶಿ
ಹಣದ ವಿಷಯದಲ್ಲಿಈ ದಿನ ಅದೃಷ್ಟದ ದಿನವಾಗಿದೆ. ಕಡಿಮೆ ಶ್ರಮದಿಂದ ಉತ್ತಮ ಹಣವನ್ನು ಪಡೆಯಬಹುದು. ಸಂಗಾತಿಯ ಮನಸ್ಥಿತಿ ಉತ್ತಮವಾಗಿರಲಿದೆ.ನಿಮ್ಮಿಬ್ಬರ ನಡುವೆ ಹೊಂದಾಣಿಕೆ ಇರಲಿದೆ, ನೀವಿಬ್ಬರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುತ್ತೀರಿ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಸಂಜೆ 6:45 ರಿಂದ ರಾತ್ರಿ 8 ರವರೆಗೆ
ಮಿಥುನ ರಾಶಿ
ಪ್ರೇಮಿಗಳಿಗೆ ಈ ದಿನವು ತುಂಬಾ ವಿಶೇಷವಾಗಿರುತ್ತದೆ. ನಿಮ್ಮ ನಡುವೆ ಪ್ರೀತಿ ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ಇತರರ ಮಾತು ಕೇಳಿ ಆರ್ಥಿಕ ನಿರ್ಧಾರ ಮಾಡಿದರೆ ನೀವು ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು, ಜಾಗ್ರತೆ.
ಅದೃಷ್ಟದ ಬಣ್ಣ: ಕೆನೆ
ಅದೃಷ್ಟದ ಸಂಖ್ಯೆ: 35
ಅದೃಷ್ಟದ ಸಮಯ: ಬೆಳಿಗ್ಗೆ 7:15 ರಿಂದ ಮಧ್ಯಾಹ್ನ 2 ರವರೆಗೆ
ಕರ್ಕ ರಾಶಿ
ನಿಮ್ಮ ಕೆಲಸದ ಕಡೆ ಸ್ವಲ್ಪ ಎಚ್ಚರವಹಿಸಿ, ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು. ಕೌಟುಂಬಿಕ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ. ಮನೆಯಲ್ಲಿ ಹಣದ ಬಗ್ಗೆ ಚರ್ಚೆಯಾಗಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಹಳೆಯ ಕಾಯಿಲೆ ಮರುಕಳಿಸಬಹುದು.
ಅದೃಷ್ಟದ ಬಣ್ಣ: ಕಂದು
ಅದೃಷ್ಟದ ಸಂಖ್ಯೆ: 30
ಅದೃಷ್ಟದ ಸಮಯ: ಮಧ್ಯಾಹ್ನ 1 ರಿಂದ ಸಂಜೆ 7 ರವರೆಗೆ
ಸಿಂಹ ರಾಶಿ
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಅವರ ಸಹಾಯದಿಂದ ಮನೆಯಲ್ಲಿನ ಪ್ರಮುಖ ಸಮಸ್ಯೆ ನಿವಾರಿಸುತ್ತೀರಿ. ನೀವು ಕಚೇರಿಯಲ್ಲಿ ನಿಮ್ಮ ಶಕ್ತಿಯನ್ನು ಚೆನ್ನಾಗಿ ಬಳಸಿಕೊಳ್ಳುತ್ತೀರಿ. ಪ್ರಮುಖ ಕಾರ್ಯವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 24
ಅದೃಷ್ಟದ ಸಮಯ: ಬೆಳಿಗ್ಗೆ 4:20 ರಿಂದ ಮಧ್ಯಾಹ್ನ 3 ರವರೆಗೆ
ಕನ್ಯಾ ರಾಶಿ
ಇಂದು ನೀವು ಹಣದ ವಿಷಯದಲ್ಲಿ ಬಹಳ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ. ಅದರಲ್ಲೂ ಹೂಡಿಕೆ ವಿಚಾರದಲ್ಲಿ ಯಾವುದೇ ಆತುರ ಬೇಡ. ವ್ಯಾಪಾರಸ್ಥರು ಹೊಸ ಕೆಲಸವನ್ನು ಪ್ರಾರಂಭಿಸುವ ಮೊದಲು ಎಚ್ಚರಿಕೆಯಿಂದ ಯೋಚಿಸಬೇಕು. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು, ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ರಾತ್ರಿ 8 ರವರೆಗೆ
ತುಲಾ ರಾಶಿ
ನೀವು ಮನೆಯ ಸದಸ್ಯರೊಂದಿಗೆ ವೈಮನಸ್ಸನ್ನು ಹೊಂದಿರಬಹುದು. ಚಿಕ್ಕ ವಿಷಯ ದೊಡ್ಡದು ಮಾಡಲು ಹೋಗಬೇಡಿ. ಕಚೇರಿಯಲ್ಲಿ ಯಾವುದೇ ಪ್ರಮುಖ ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಆದರೆ, ಉನ್ನತ ಅಧಿಕಾರಿಗಳ ಸಹಾಯದಿಂದ, ನಿಮ್ಮ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಬೆಳಿಗ್ಗೆ 10:50 ರಿಂದ ಸಂಜೆ 4:20 ರವರೆಗೆ
ವೃಶ್ಚಿಕ ರಾಶಿ
ಈ ದಿನ ನೀವು ಕೆಲಸದಲ್ಲಿ ತುಂಬಾ ಕಾರ್ಯನಿರತರಾಗಿರುತ್ತೀರಿ. ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು. ಇಂದು ನೀವು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ತುಂಬಾ ಚಿಂತೆ ಮಾಡುತ್ತೀರಿ, ಈ ಅವಧಿಯಲ್ಲಿ ಅವರ ಆರೈಕೆ ಕಡೆ ಹೆಚ್ಚಿನ ಗಮನಹರಿಸಬೇಕಾದ ಅಗ್ಯತವುದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆಯೂ ನೀವು ನಿಮ್ಮ ಬಗ್ಗೆ ಕಾಳಜಿ ವಹಿಸಬೇಕು.
ಅದೃಷ್ಟದ ಬಣ್ಣ: ಗಾಢ ಹಳದಿ
ಅದೃಷ್ಟದ ಸಂಖ್ಯೆ: 18
ಅದೃಷ್ಟದ ಸಮಯ: ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ
ಧನು ರಾಶಿ
ಧನು ರಾಶಿಯವರಿಗೆ ಈ ದಿನ ಉತ್ತಮವಾಗಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ಉತ್ತಮವಾಗಿದೆ. ಕಚೇರಿಯಲ್ಲಿ ಯಾವುದೇ ರೀತಿಯ ಗಾಸಿಪ್‌ಗಳಲ್ಲಿ ಭಾಗಿಯಾಗುವುದನ್ನು ತಪ್ಪಿಸಿ. ನೀವು ನಿಮ್ಮ ಕೆಲಸದ ಮೇಲೆ ಮಾತ್ರ ಗಮನಹರಿಸುವುದು ಒಳ್ಳೆಯದು.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 44
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಮಕರ ರಾಶಿ
ಮನೆಯ ವಾತಾವರಣವು ತುಂಬಾ ಚೆನ್ನಾಗಿರಲಿದೆ. ಈ ದಿನ ಮನೆಯಲ್ಲಿ ಖುಷಿ, ನೆಮ್ಮದಿ ಎಲ್ಲವೂ ಇರುತ್ತದೆ. ನೀವು ಅವಿವಾಹಿತರಾಗಿದ್ದರೆ, ಇಂದು ನಿಮ್ಮ ಮದುವೆಯ ಬಗ್ಗೆ ಮನೆಯಲ್ಲಿ ಚರ್ಚಿಸಬಹುದು. ಕೆಲಸಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿರುತ್ತದೆ.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 36
ಅದೃಷ್ಟದ ಸಮಯ: ಸಂಜೆ 4 ರಿಂದ ರಾತ್ರಿ 8 ರವರೆಗೆ
ಕುಂಭ ರಾಶಿ
ಸಂಗಾತಿಯ ನಡವಳಿಕೆಯಲ್ಲಿ ಬದಲಾವಣೆ ಕಂಡು ಬರಬಹುದುದು, ಇದರಿಂದ ನಿಮ್ಮ ಮನಸ್ಸಿಗೆ ನೋವಾಗುವುದು. . ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ದುಂದುವೆಚ್ಚವನ್ನು ತಪ್ಪಿಸಿ. ಕೆಲಸದಲ್ಲಿ ಇಂದು ನಿಮಗೆ ಬಹಳ ಮುಖ್ಯವಾಗಿರುತ್ತದೆ. ನಿಮಗೆ ಒಳ್ಳೆಯ ಅವಕಾಶ ಸಿಗಬಹುದು.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 16
ಅದೃಷ್ಟ ಸಮಯ: ಬೆಳಿಗ್ಗೆ 4:25 ರಿಂದ ಮಧ್ಯಾಹ್ನ 2 ರವರೆಗೆ
ಮೀನ ರಾಶಿ
ಮಗುವಿನ ಕಡೆಯಿಂದ ಸಂತೋಷ ಸಿಗಲಿದೆ, ಮನೆಯಲ್ಲಿ ಖುಷಿಯ ವಾತಾವರಣ ಇರಲಿದೆ. ಪ್ರೀತಿಯ ವಿಷಯದಲ್ಲಿ ಇಂದು ಮಿಶ್ರಫಲ. ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಆರೋಗ್ಯ ಕೂಡ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 14
ಅದೃಷ್ಟದ ಸಮಯ: ಸಂಜೆ 5 ರಿಂದ ರಾತ್ರಿ 9 ರವರೆಗೆ



Click it and Unblock the Notifications











