Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ 29 ದಿನ ಭವಿಷ್ಯ: ಏಕಾದಶಿಯ ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ?
ಶುಭೋದಯ... ವೈದಿಕ ಜ್ಯೋತಿಷ್ಯದ ಪ್ರಕಾರ ಪದ್ಮಿನಿ ಏಕಾದಶಿಯ ಈ ದಿನ ನಿಮ್ಮ ರಾಶಿಯ ರಾಶಿಫಲ ಹೇಗಿದೆ?
ದಿನಾಂಕ: ಜುಲೈ 29
ತಿಥಿ: ಏಕಾದಶಿ
ನಕ್ಷತ್ರ: ಜ್ಯೇಷ್ಠ
ಪಕ್ಷ: ಶುಕ್ಲಪಕ್ಷ
ರಾಹುಕಾಲ: ಬೆಳಗ್ಗೆ 09:13ರಿಂದ 10:50ರವರೆಗೆ
ಮೇಷ ರಾಶಿ
ವ್ಯಾಪಾರಸ್ಥರಿಗೆ ಈ ದಿನ ಉತ್ತಮಾಗಿದೆ. ನಿಮ್ಮ ಅಪೂರ್ಣವಾದ ಕೆಲಸ ಪೂರ್ಣವಾಗಲಿದೆ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ, ಶಾಂತಿ ಇರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ನೀಲಿ
ಅದೃಷ್ಟದಸಂಖ್ಯೆ: 12
ಅದೃಷ್ಟದ ಸಮಯ: ಬೆಳಿಗ್ಗೆ 4:15 ರಿಂದ 7:55 ರವರೆಗೆ

ವೃಷಭ ರಾಶಿ
ಕೆಲಸದ ಸ್ಥಳದಲ್ಲಿ ಈ ದಿನ ಜಾಗ್ರತೆಯಿಂದ ಇರಿ. ನಿಮ್ಮ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಬೇಡಿ, ನಿಮ್ಮ ಗಮನವನ್ನು ಕೆಲಸದ ಕಡೆ ಹರಿಸಿ, ವೈಯಕ್ತಿಕ ಬದುಕಿನ ಬಗ್ಗೆ ಹೇಳುವುದಾದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯವಿರಬಹುದು, ಸಂಗಾತಿಯ ಮನ ನೋಯಿಸುವ ಮಾತುಗಳನ್ನಾಡದಿರಿ, ಇಲ್ಲದಿದ್ದರೆ ಮನೆಯ ಶಾಂತಿಗೆ ಭಂಗ ಉಂಟಾಗಬಹುದು.
ಅದೃಷ್ಟದ ಬಣ್ಣ: ಕಿತ್ತಳೆ
ಅದೃಷ್ಟದ ಸಂಖ್ಯೆ: 4
ಅದೃಷ್ಟದ ಸಮಯ: ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ
ಮಿಥುನ ರಾಶಿ
ಸ್ವಲ್ಪ ದಿನಗಳಿಂದ ಆರೋಗ್ಯದ ಚಿಂತೆ ಕಾಡುತ್ತಿದ್ದರೆ ಈ ದಿನ ಸುಧಾರಣೆ ಕಂಡು ಬರಲಿದೆ. ಈ ದಿನ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಉತ್ತಮವಾಗಿರಲಿದೆ, ಈ ದಿನ ನಿಮ್ಮ ಖರ್ಚುಗಳ ಪಟ್ಟಿ ಹೆಚ್ಚಾಗಬಹುದು, ಪ್ರಣಯ ಜೀವನದಲ್ಲಿ ಖುಷಿ ಇರಲಿದೆ, ಈ ದಿನ ತುಂಬಾ ರೊಮ್ಯಾಂಟಿಕ್ ಆಗಿ ಕಳೆಯುವಿರಿ.
ಅದೃಷ್ಟದ ಬಣ್ಣ: ಗುಲಾಬಿ
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಸಂಜೆ 4 ರಿಂದ ಸಂಜೆ 7 ರವರೆಗೆ
ಕರ್ಕ ರಾಶಿ
ಈ ದಿನ ಕುಟುಂಬದ ಜೊತೆ ಉತ್ತಮ ಸಮಯ ಕಳೆಯಬಹುದು. ಹಣದ ವಿಷಯದಲ್ಲಿ ಈ ದಿನ ಮಿಶ್ರಫಲ. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ ಈ ದಿನ ಉತ್ತಮ ಫಲ ಪಡೆಯಬಹುದು.
ಅದೃಷ್ಟದ ಬಣ್ಣ: ಹಳದಿ
ಅದೃಷ್ಟದ ಸಂಖ್ಯೆ: 10
ಅದೃಷ್ಟದ ಸಮಯ: ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ
ಸಿಂಹ ರಾಶಿ
ಹೃದ್ರೋಗದ ಸಮಸ್ಯೆ ಇರುವವರು ಈ ದಿನ ಜಾಗ್ರತೆವಹಿಸಿ, ಕೋಪವನ್ನು ನಿಯಂತ್ರಿಸಿ. ಕೆಲಸದ ಸ್ಥಳದಲ್ಲಿ ನಿಮ್ಮ ಸ್ಥಾನ ಬಲವಾಗುವುದು, ಈ ದಿನ ನೀವು ಖುಷಿಯಿಂದ ಕಳೆಯುತ್ತೀರಿ.
ಅದೃಷ್ಟದ ಬಣ್ಣ: ಪೀಚ್
ಅದೃಷ್ಟದ ಸಂಖ್ಯೆ: 33
ಅದೃಷ್ಟದ ಸಮಯ: ಮಧ್ಯಾಹ್ನ 1:15 ರಿಂದ ಸಂಜೆ 5 ರವರೆಗೆ
ಕನ್ಯಾ ರಾಶಿ
ಈ ದಿನ ನಿಮ್ಮ ಪ್ರಯಾಣ ಮಾಡಲು ಉತ್ತಮವಾಗಿದೆ, . ಸಂಗಾತಿಯೊಂದಿಗಿನ ಸಂಬಂಧದಲ್ಲಿ ಉತ್ತಮ ಹೊಂದಾಣಿಕೆ ಇರುತ್ತದೆ. ಅವರೊಂದಿಗೆ ಮನಬಿಚ್ಚಿ ಮಾತನಾಡುವ ಮೂಲಕ ಮತ್ತಷ್ಟು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ, ಇಂದು ಕೆಲಸದ ಹೊರೆ ಕಡಿಮೆ ಇರಲಿದೆ.
ಅದೃಷ್ಟದ ಬಣ್ಣ: ಹಸಿರು
ಅದೃಷ್ಟದ ಸಂಖ್ಯೆ: 7
ಅದೃಷ್ಟದ ಸಮಯ: ಬೆಳಗ್ಗೆ 11:20 ರಿಂದ ಮಧ್ಯಾಹ್ನ 3:20 ರವರೆಗೆ
ತುಲಾ ರಾಶಿ
ಈ ದಿನ ನಿಮ್ಮ ಸ್ಥಗಿತಗೊಂಡಿದ್ದ ಕೆಲಸವೊಂದು ಪೂರ್ಣಗೊಳ್ಳಲಿದೆ, ಈ ದಿನ ನೀವು ದೊಡ್ಡ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ. ನಿಮ್ಮ ನಡುವೆ ಭಾವನಾತ್ಮಕ ಬಾಂಧವ್ಯ ಹೆಚ್ಚಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರುತ್ತದೆ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 15
ಅದೃಷ್ಟದ ಸಮಯ: ಸಂಜೆ 4:15 ರಿಂದ ರಾತ್ರಿ 9:05 ರವರೆಗೆ
ವೃಶ್ಚಿಕ ರಾಶಿ
ಈ ದಿನ ನಿಮಗಾಗಿ ಸಾಕಷ್ಟು ಸಮಯ ಸಿಗಲಿದೆ. ನೀವು ವಿದ್ಯಾರ್ಥಿಯಾಗಿದ್ದರೆ ನಿಮ್ಮ ಅಧ್ಯಯನದ ಮೇಲೆ ಸಂಪೂರ್ಣವಾಗಿ ಗಮನಹರಿಸಲು ಸಾಧ್ಯವಾಗುವುದು. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ಒಳ್ಳೆಯ ದಿನವಾಗಿದೆ.
ಅದೃಷ್ಟದ ಬಣ್ಣ: ನೇರಳೆ
ಅದೃಷ್ಟದ ಸಂಖ್ಯೆ: 11
ಅದೃಷ್ಟದ ಸಮಯ: ಸಂಜೆ 6 ರಿಂದ ರಾತ್ರಿ 9 ರವರೆಗೆ
ಧನು ರಾಶಿ
ಈ ದಿನ ಕೆಲಸದ ಮೇಲೆ ಸಂಪೂರ್ಣ ಗಮನಹರಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಪ್ರಯತ್ನಿಸಿ ಇಲ್ಲದಿದ್ದರೆ ನಿಮ್ಮಿಬ್ಬರ ನಡುವೆ ತಪ್ಪು ಕಲ್ಪನೆ ಹೆಚ್ಚಾಗಬಹುದು.
ಅದೃಷ್ಟದ ಬಣ್ಣ: ಗಾಢ ಹಸಿರು
ಅದೃಷ್ಟದ ಸಂಖ್ಯೆ: 20
ಅದೃಷ್ಟದ ಸಮಯ: ಮಧ್ಯಾಹ್ನ 2:15 ರಿಂದ 5:15 ರವರೆಗೆ
ಮಕರ ರಾಶಿ
ಮಕ್ಕಳ ಮೊಂಡುತನದ ಸ್ವಭಾವವು ಇಂದು ನಿಮಗೆ ತೊಂದರೆಗೆ ಕಾರಣವಾಗಬಹುದು. ಅವರ ಜೊತೆ ಕೋಪಗೊಳ್ಳದೆ ಬಹಳ ಬುದ್ಧಿವಂತಿಕೆಯಿಂದ ವರ್ತಿಸಲು ಸಲಹೆ ನೀಡಲಾಗಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನಿಮ್ಮ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ. ಕಚೇರಿಯಲ್ಲಿ ಅತಿಯಾದ ಆತ್ಮವಿಶ್ವಾಸವನ್ನು ಪ್ರದರ್ಶನ ಮಾಡಲು ಹೋಗದಿರಿ.
ಅದೃಷ್ಟದ ಬಣ್ಣ: ಬಿಳಿ
ಅದೃಷ್ಟದ ಸಂಖ್ಯೆ: 8
ಅದೃಷ್ಟದ ಸಮಯ: ಸಂಜೆ 5:30 ರಿಂದ ರಾತ್ರಿ 8:30 ರವರೆಗೆ
ಕುಂಭ ರಾಶಿ
ನಿಮ್ಮ ಮನೆಯ ಸದಸ್ಯರ ಆರೋಗ್ಯದಲ್ಲಿ ಹಠಾತ್ ಕ್ಷೀಣತೆಯಿಂದಾಗಿ ಇಂದು ನೀವು ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ದಿನನಿತ್ಯದ ಖರ್ಚುಗಳನ್ನು ಸುಲಭವಾಗಿ ಪೂರೈಸಲಾಗುವುದು. ಉದ್ಯೋಗಿಗಳಿಗೆ, ವ್ಯವಹಾರಸ್ಥರಿಗೆ ಈ ದಿನ ಉತ್ತಮವಾಗಿದೆ.
ಅದೃಷ್ಟದ ಬಣ್ಣ: ಕೆಂಪು
ಅದೃಷ್ಟದ ಸಂಖ್ಯೆ: 16
ಅದೃಷ್ಟದ ಸಮಯ: ಬೆಳಗ್ಗೆ 4 ರಿಂದ 8:55 ರವರೆಗೆ
ಮೀನ ರಾಶಿ
ಕೆಲಸದಲ್ಲಿ ಕಠಿಣ ಪರಿಶ್ರಮದ ಹೊರತಾಗಿಯೂ ನಿಮಗೆ ಯಶಸ್ಸು ಸಿಗುವುದಿಲ್ಲ, ನೀವು ತಾಳ್ಮೆಯಿಂದ ಕಾಯಬೇಕಾಗುದೆ. ಹಣದ ವಿಷಯದಲ್ಲಿ, ದಿನವು ಏರಿಳಿತಗಳಿಂದ ತುಂಬಿರುತ್ತದೆ. ಇಂದು ಖರ್ಚು ಹೆಚ್ಚಾಗಬಹುದು. ಜೀವನ ಸಂಗಾತಿಯ ಪ್ರೀತಿ ಮತ್ತು ಬೆಂಬಲ ಸಿಗಲಿದೆ.
ಅದೃಷ್ಟದ ಬಣ್ಣ: ಆಕಾಶ ನೀಲಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ಸಮಯ: ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ



Click it and Unblock the Notifications