Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜುಲೈ ತಿಂಗಳ ಮಾಸಿಕ ಭವಿಷ್ಯ 2023: ಈ 3 ರಾಶಿಯವರಿಗೆ ಜುಲೈ ತಿಂಗಳು ತುಂಬಾನೇ ಅನುಕೂಲಕರವಾಗಿದೆ
ಜುಲೈ ತಿಂಗಳ ಮಾಸಿಕ ಭವಿಷ್ಯ ನೋಡುವುದಾದರೆ ಗ್ರಹಗತಿಗಳ ಸ್ಥಾನವು ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಿದ್ದು 3 ರಾಶಿಯವರಿಗೆ ಈ ತಿಂಗಳು ತುಂಬಾ ಅನುಕೂಲಕರವಾಗಿದೆ. ಈ ಮೂರು ರಾಶಿಯವರಿಗೆ ಈ ತಿಂಗಳಿನಲ್ಲಿ ಅದೃಷ್ಟದ ಬೆಂಬಲವಿರುವುದರಿಂದ ಈ ತಿಂಗಳು ವೃತ್ತಿ ಜೀವನ, ಆರ್ಥಿಕ ಜೀವನ, ಕುಟುಂಬ ಜೀವನ, ಆರೋಗ್ಯ ಜೀವನದ ದೃಷ್ಟಿಯಿಂದ ಈ ತಿಂಗಳು ತುಂಬಾನೇ ಅನುಕೂಲಕರವಾಗಿರಲಿದೆ.

ಮಿಥುನ ರಾಶಿ
ಜುಲೈ ತಿಂಗಳು ನಿಮಗೆ ತುಂಬಾ ಅನುಕೂಲಕರವಾಗಿರಲಿದೆ. ನೀವು ವ್ಯವಹಾರದಲ್ಲಿ ಲಾಭ ಗಳಿಸುತ್ತೀರಿ, ಮಿಥುನ ರಾಶಿಯವರ ಆರ್ಥಿಕ ಜೀವನ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಖುಷಿ ಇರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ. ಗ್ರಹಗತಿಗಳ ಚಲನೆಯು ನಿಮಗೆ ಅನುಕೂಲಕರವಾಗಿದೆ. ಶನಿಯು 9ನೇ ಮನೆಯಲ್ಲಿ ನಿಮ್ಮ ರಾಶಿಯಲ್ಲಿ ಹಿಮ್ಮುಖ ಚಲನೆಯಲ್ಲಿದೆ, ಆದ್ದರಿಂದ ನಿಮಗೆ ಉತ್ತಮ ಅವಕಾಶಗಳು ನೀಡಲಿದೆ. ಗುರು ಹನ್ನೊಂದನೇ ಮನೆಯಲ್ಲಿ ಇರುವುದರಿಂದ ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿರುವವರಿಗೆ ಈ ಅವಧಿ ತುಂಬಾ ಚೆನ್ನಾಗಿದೆ, ನಿರುದ್ಯೋಗಿಗಳು ಉದ್ಯೋಗ ಪಡೆಯಲಿದ್ದಾರೆ. ಉದ್ಯೋಗದಲ್ಲಿರುವವರು ಬಡ್ತಿ ಪಡೆಯುತ್ತಾರೆ. ಇನ್ನು ವಿದೇಶಕ್ಕೆ ಕೆಲಸಕ್ಕೆ ಹೋಗಲು ಬಯಸುವವರಿಗೆ ಈ ತಿಂಗಳಿನಲ್ಲಿ ಒಳ್ಳೆಯ ಅವಕಾಶಗಳು ದೊರೆಯಲಿದೆ.
ವ್ಯಾಪಾರಿಗಳು ತಮ್ಮ ವ್ಯಾಪಾರದಲ್ಲಿ ಪ್ರಗತಿಯನ್ನು ಕಾಣುತ್ತಾರೆ. ನಿಮಗೆ ನಿಮ್ಮ ಪ್ರತಿಸ್ಪರ್ಧಿಗಳನ್ನು ಗೆಲ್ಲಲು ಸಾಧ್ಯವಾಗುವುದು. ಗುರುವಿನ ಸ್ಥಾನದಿಂದಾಗಿ ಈ ಅವಧಿಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ತಿಂಗಳು ನಿಮಗೆ ತುಂಬಾ ಲಾಭದಾಯಕವಾಗಿರುವುದರಿಂದ ಉಳಿತಾಯ ಮಾಡಲು ಸಾಧ್ಯವಾಗುವುದು. ಹನ್ನೊಂದನೇ ಮನೆಯಲ್ಲಿ ರಾಹುವಿನ ಉಪಸ್ಥಿತಿಯಿಂದಾಗಿ ಅನಿರೀಕ್ಷಿತ ಹಣದ ಲಾಭ ಉಂಟಾಗಲಿದೆ. ಹನ್ನೊಂದನೇ ಮನೆಯಲ್ಲಿ ಗುರು ಮತ್ತು ರಾಹುಗಳ ಸಂಯೋಜನೆಯಿಂದಾಗಿ ವ್ಯವಹಾರದಲ್ಲಿ ಉತ್ತಮ ಲಾಭವನ್ನು ಪಡೆಯಬಹುದು.
ಇನ್ನು ಈ ಅವಧಿಯಲ್ಲಿ ಆರೋಗ್ಯ ಚೆನ್ನಾಗಿರಲಿದೆ. ಹನ್ನೊಂದನೇ ಮನೆಯಲ್ಲಿ ರಾಹು ಸ್ಥಾನವು ಕೂಡ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ಅವಧಿ ಅನುಕೂಲಕರವಾಗಿದೆ. ಒಟ್ಟಿನಲ್ಲಿ ಮಿಥುನ ರಾಶಿಯವರಿಗೆ ಈ ತಿಂಗಳು ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಜುಲೈ ತಿಂಗಳು ಅನುಕೂಲಕರವಾಗಿದೆ. ಗ್ರಹಗತಿಗಳು ಈ ತಿಂಗಳಿನಲ್ಲಿ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಕ್ಷೇತ್ರದಲ್ಲಿಯೂ ನೀವು ಯಶಸ್ಸನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನದಲ್ಲಿ ಸಂತೋಷ ಇರಲಿದೆ. ಆರೋಗ್ಯ ಜೀವನ ಚೆನ್ನಾಗಿರಲಿದೆ. ಶನಿಯು ನಿಮ್ಮ 7ನೇ ಮನೆಯಲ್ಲಿ ಹಿಮ್ಮುಖ ಚಲನೆಯಲ್ಲಿದೆ. ಸರಿಯಾಗಿ ಪ್ಲ್ಯಾನ್ ಮಾಡಿದರೆ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು. ವ್ಯಾಪಾರಸ್ಥರಿಗೆ ಜುಲೈ ತಿಂಗಳು ಲಾಭದಾಯಕವಾಗಿರಲಿದೆ. ವ್ಯಾಪಾರಸ್ಥರು ಈ ತಿಂಗಳಿನಲ್ಲಿ ಉತ್ತಮ ಲಾಭ ಪಡೆಯುವುರಿ.
ಗುರುವು ನಿಮ್ಮ ಒಂಬತ್ತನೇ ಮನೆಯಲ್ಲಿರುವುದರಿಂದ ಹಣಕಾಸಿನ ಸ್ಥಿತಿ ತುಂಬಾ ಚೆನ್ನಾಗಿರಲಿದೆ. 9ನೇ ಮನೆಯಲ್ಲಿ ಗುರುವಿನ ಅನುಕೂಲಕರ ಸ್ಥಾನದಿಂದಾಗಿ ಹಣಗಳಿಸಲು ಸಾಧ್ಯವಾಗುವುದು, ಆದರೆ ಮಿತಿಮೀರಿ ಖರ್ಚು ಮಾಡಲು ಹೋಗಬೇಡಿ.
ಇನ್ನು ಆರೋಗ್ಯದ ಬಗ್ಗೆ ನೋಡುವುದಾದರೆ ಈ ತಿಂಗಳು ನಿಮಗೆ ತುಂಬಾನೇ ಉತ್ತಮವಾಗಿದೆ. ಪ್ರೇಮಿಗಳಿಗೆ, ವಿವಾಹಿತರಿಗೆ ಈ ತಿಂಗಳು ರೊಮ್ಯಾಂಟಿಕ್ ಆಗಿರಲಿದೆ. ಕುಟುಂಬ ಜೀವನದಲ್ಲ ಪ್ರೀತಿ ಮತ್ತು ನೆಮ್ಮದಿ ಇರಲಿದೆ. ಮಧ್ಯದಲ್ಲಿ ಕೆಲ ಸಮಸ್ಯೆ ಇದ್ದರೆ ನಂತರ ಎಲ್ಲವೂ ಸರಿಯಾಗುವುದು.
ಧನು ರಾಶಿ
ಜುಲೈ ತಿಂಗಳಿನಲ್ಲಿ ಧನು ರಾಶಿಯವರಿಗೂ ಅದೃಷ್ಟದ ಬೆಂಬಲ ವಿದೆ. ಗ್ರಹಗತಿಗಳ ಅನುಕೂಲಕರ ಸ್ಥಾನದಿಂದಾಗಿ ಆರ್ಥಿಕವಾಗಿ, ಆರೋಗ್ಯದ ದೃಷ್ಟಿಯಿಂದ, ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಪ್ರೀತಿ ಮತ್ತು ವೈವಾಹಿಕ ಜೀವನದಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.
ಶನಿಯು ಮೂರನೇ ಮನೆಯಲ್ಲಿ ಕುಳಿತಿದ್ದಾನೆ. ಇದು ವೃತ್ತಿಜೀವನದ ಬೆಳವಣಿಗೆಗೆ ನಿಮಗೆ ಸಹಾಯ ಮಾಡುತ್ತದೆ. ಈ ತಿಂಗಳಿನಲ್ಲಿ ಗ್ರಹಗಳ ಅನುಕೂಲಕರ ಸ್ಥಾನವು ವಿದೇಶದಲ್ಲಿರುವವರಿಗೆ ಹೊಸ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ. ಕೇತು ಹನ್ನೊಂದನೇ ಮನೆಯಲ್ಲಿ ಇರುವುದರಿಂದ ವೃತ್ತಿ ಕ್ಷೇತ್ರದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುತ್ತೀರಿ. ಹನ್ನೊಂದನೇ ಮನೆಯಲ್ಲಿ ಕೇತು ಇರುವ ಕಾರಣ ಉದ್ಯೋಗದಲ್ಲಿ ನಿಮ್ಮ ಪ್ರತಿಭೆಯನ್ನು ಹೆಚ್ಚಿಸಲು ಧನು ರಾಶಿಯವರಿಗೆ ಅವಕಾಶ ಸಿಗಬಹುದು. ಇಷ್ಟೇ ಅಲ್ಲದೇ, ವೃತ್ತಿ ಜೀವನದಲ್ಲಿ ಬಡ್ತಿ ಮತ್ತು ಇತರ ಪ್ರಯೋಜನಗಳನ್ನು ಈ ತಿಂಗಳಿನಲ್ಲಿ ಪಡೆಯುವ ಸಾಧ್ಯತೆಯಿದೆ.
ಕೇತುವಿನ ಸ್ಥಾನದಿಂದಾಗಿವೃತ್ತಿ ಕ್ಷೇತ್ರದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಹನ್ನೊಂದನೇ ಮನೆಯಲ್ಲಿ ಕೇತು ಇರುವ ಕಾರಣ ಉದ್ಯೋಗದಲ್ಲಿ ನಿಮ್ಮ ಪ್ರತಿಭೆಯನ್ನು ಹೆಚ್ಚಿಸಲು ಧನು ರಾಶಿಯವರಿಗೆ ಅವಕಾಶ ಸಿಗಬಹುದು. ಧನು ರಾಶಿಯ ಅಧಿಪತಿಯಾದ ಗುರುವು ಐದನೇ ಮನೆಯಲ್ಲಿ ಅನುಕೂಲಕರ ಸ್ಥಾನದಲ್ಲಿದ್ದಾನೆ. ಗುರುವಿನ ಸ್ಥಾನದಿಂದಾಗಿ ಈ ತಿಂಗಳು ನಿಮಗೆ ತುಂಬಾನೇ ಅನುಕೂಲಕರವಾಗಿದೆ.
ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರಿಗೆ ಈ ತಿಂಗಳು ತುಂಬಾ ಉತ್ತಮವಾಗಿದೆ. ವ್ಯವಹಾರದಲ್ಲಿ ಹೊಸ ಅವಕಾಶಗಳನ್ನು ಪಡೆಯಬಹುದು. ಹಾಗೂ ಇದು ನಿಮಗೆ ಲಾಭದಾಯಕವಾಗಿರುತ್ತದೆ.
ಆರೋಗ್ಯ ದೃಷ್ಟಿಯಿಂದ ಕೂಡ ಈ ತಿಂಗಳು ಉತ್ತಮವಾಗಿರುತ್ತದೆ. ಕುಟುಂಬ ಜೀವನದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ.



Click it and Unblock the Notifications
