Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಮಠ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ..! ಅವರ ಸಾವಿಗೆ ಕಾರಣ ಏನಿರಬಹುದು..?
ಕನ್ನಡ ಚಿತ್ರರಂಗದ ನಟ, ನಿರ್ದೇಶಕ ಮಠ ಎಂಬ ಸೂಪರ್ ಹಿಟ್ ಸಿನಿಮಾ ನೀಡಿದ್ದ ಗುರು ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮಾದನಾಯಕನಹಳ್ಳಿ ಬಳಿಯ ಟಾಟಾ ನ್ಯು ಹೆವೆನ್ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
1972ರ ನವೆಂಬರ್ 2ರಂದು ರಾಮನಗರ ಜಿಲ್ಲೆಯ ಕನಕಪುರದಲ್ಲಿ ಗುರು ಪ್ರಸಾದ್ ಜನಿಸಿದ್ದರು. ಅವರ ನಿರ್ದೇಶನದಲ್ಲಿ ಹಲವು ಸಿನಿಮಾಗಳು ಸೂಪರ್ ಹಿಟ್ ಆದವು. 5 ಸಿನಿಮಾ ಮಾಡಿದ್ದ ಅವರು ಮಠ, ಎದ್ದೇಳು ಮಂಜುನಾಥ್ ಸಿನಿಮಾಗಳಿಂದ ಖ್ಯಾತಿ ಗಳಿಸಿದ್ದರು. ಈಗ ಎದ್ದೇಳು ಮಂಜುನಾಥ-2 ಸಿನಿಮಾ ಮಾಡಲು ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ.

ಗುರುಪ್ರಸಾದ್ ಅವರ ಮೊದಲ ಹೆಸರು ಗುರುಪ್ರಸಾದ ರಾಮಚಂದ್ರ ಶರ್ಮಾ. ಅವರು ಕನಕಪುರದವರು. ಸದ್ಯ ಅವರಿಗೆ 52 ವರ್ಷ ವಯಸ್ಸಾಗಿತ್ತು. ನಿನ್ನೆ ಅವರು 52ನೇ ಹುಟ್ಟುಹಬ್ಬವನ್ನು ಆಚರಿಸಬೇಕಾಗಿತ್ತು. ಆದ್ರೆ ಅಪಾರ್ಟ್‌ಮೆಂಟ್‌ನಲ್ಲಿ ಅವರ ಶವ ಪತ್ತೆಯಾಗಿದೆ. ಮೂರರಿಂದ ನಾಲ್ಕು ದಿನದ ಮೊದಲು ನೇಣಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.
2006 ರಲ್ಲಿ ಬಿಡುಗಡೆ ಆದ 'ಮಠ' ಸಿನಿಮಾವನ್ನು ಗುರುಪ್ರಸಾದ್ ನಿರ್ದೇಶನ ಮಾಡಿದ್ದರು. ಹಾಗೆ ಸಿನಿಮಾದಲ್ಲಿ ಸಣ್ಣದೊಂದು ಪಾತ್ರ ಸಹ ನಿರ್ವಹಿಸಿದ್ದರು. ಇದಾದ ಬಳಿಕ ಎದ್ದೇಳು ಮಂಜುನಾಥ ಸಿನಿಮಾ ಸಹ ಮಾಡಿದ್ದರು. ಅಲ್ಲದೆ ಇತ್ತೀಚಿಗೆ ಜಗ್ಗೇಶ್ ನಟನೆಯ ರಂಗನಾಯಕ ಸಿನಿಮಾ ಸಹ ಮಾಡಿದ್ದರು, ಅಲ್ಲದೆ ನಟ ಜಗ್ಗೇಶ್ ಜೊತೆಗೆ ಇನ್ನೊಂದು ಸಿನಿಮಾ ಮಾಡುವುದಾಗಿಯೂ ಅವರು ಹೇಳಿದ್ದರು.
ವಂಚನೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನ
ಕಳೆದ ವರ್ಷ ಜನವರಿಯಲ್ಲಿ ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರು ಪ್ರಸಾದ್ ಅವರನ್ನು ಬಂಧಿಸಿದ್ದರು. ಶ್ರೀನಿವಾಸ್ ಎಂಬುವವರಿಗೆ ಗುರುಪ್ರಸಾದ್ 30 ಲಕ್ಷ ರೂಪಾಯಿ ನೀಡಬೇಕಿತ್ತಂತೆ. ಆದ್ರೆ ಗುರು ಪ್ರಸಾದ್ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ನಂತರ ಈ ಕೇಸ್ ಕೋರ್ಟ್ ಮೆಟ್ಟಿಲೇರಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಗುರುಪ್ರಸಾದ್ ವಿಚಾರಣೆಯಿಂದ ದೂರವೇ ಉಳಿದಿದ್ದರು. ಹೀಗಾಗಿ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದರು.
ಅವರ ಸಾವಿಗೆ ಕಾರಣವೇನಿರಬಹುದು?
ಮಠ ನಿರ್ದೇಶಕ 53ನೇ ವಯಸ್ಸಿನಲ್ಲಿ ಇಂತಹ ನಿರ್ಧಾರಕ್ಕೆ ಬಂದಿರುವುದು ಎಲ್ಲರಲ್ಲೂ ಆಘಾತ ಉಂಟು ಮಾಡಿದೆ, ಕೆಲವೇ ತಿಂಗಳ ಹಿಂದೆ ಅವರು ಎರಡನೇ ಮದುವೆ ಕೂಡ ಆಗಿದ್ದರು. ಈಗ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಲ್ಲೂ ಆಘಾತ ಉಂಟು ಮಾಡಿದೆ. ಅವರ ಇತ್ತೀಚಿನ ಸಿನಿಮಾ ರಂಗನಾಯಕ ಅಂದುಕೊಂಡಷ್ಟು ಯಶಸ್ಸು ಗಳಿಸದ ಕಾರಣ ಹೆಚ್ಚು ಮದ್ಯಪಾನಕ್ಕೆ ದಾಸರಾಗಿದ್ದರಂತೆ.
ಸಿನಿಮಾ ಸೋಲಿನ ನಂತರ ಬಹಳ ನೊಂದಿದ್ದರಂತೆ. ಅಲ್ಲದೆ ಹೆಚ್ಚು ಸಾಲ ಮಾಡಿಕೊಂಡಿದ್ದ ಅವರು ಸಾಲ ತೀರಿಸಲು ಪರದಾಡಿದ್ದಾರೆ. ಹಲವರ ಬಳಿ ಹಣ ಪಡೆದಿದ್ದ ಅವರು ವಾಪಾಸು ನೀಡಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಅವರು ಸಾಲಗಾರರ ಕಾಟ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ತನಿಖೆಯ ಬಳಿಕವಷ್ಟೇ ಅವರ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.
ಅವರು ತಮ್ಮ ವಿವಾದಗಳಿಂದಲೂ ಕೂಡ ಸುದ್ದಿಯಾಗುತ್ತಿದ್ದರು. ಈ ಹಿಂದೆ ನಡೆದಿದ್ದ ಮೀಟೂ ಪ್ರಕರಣ, ನಾಯಕ ನಟರ ಕುರಿತಂತೆ ಅವರ ಮಾತುಗಳು ಕೆಲವು ವಿವಾದ ಎಬ್ಬಿಸಿದ್ದರು. ಹಾಗೆ ಸಿನಿಮಾ ಟೈಟಲ್‌ಗಳಿಂದಲೂ ಕೂಡ ಅವರು ಸುದ್ದಿಯಾಗುತ್ತಿದ್ದರು.
ಆತ್ಮಹತ್ಯೆ ತಡೆ ಸಹಾಯವಾಣಿ: ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಆರಂಭಿಸಲಾಗಿದೆ. ದೂರವಾಣಿ ಸಂಖ್ಯೆ 080 - 25497777



Click it and Unblock the Notifications