Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Kannada Rajyotsava: ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಲು ಇಲ್ಲಿವೆ ಶುಭಾಶಯಗಳು, ಸಂದೇಶಗಳು!
Happy Kannada Rajyotsava 2025: ಎಲ್ಲ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! ಕರುನಾಡಿನ ಸಮಸ್ತ ಕನ್ನಡಿಗರು ಹೆಮ್ಮೆಯಿಂದ ಕನ್ನಡ ಹಬ್ಬದಲ್ಲಿ ಸಂಭ್ರಮಿಸುವ ದಿನವಿದು. ಕರ್ನಾಟಕ ರಾಜ್ಯ ರಚನೆಯ ಹಿಂದೆ ಲಕ್ಷಾಂತರ ಜನರ ಹೋರಾಟ ಮತ್ತು ತ್ಯಾಗವಿದೆ. ಇಲ್ಲಿ 'ನೀರು ಕೇಳಿದರೆ ಪಾನಕ ನೀಡುವಂತೆ' ಕರುನಾಡು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದೆ. ಈ ಲೇಖನದಲ್ಲಿ ಕನ್ನಡ ರಾಜ್ಯೋತ್ಸವದಂದು ವಾಟ್ಸಾಪ್, ಫೇಸ್‌ಬುಕ್, ಇನ್ಸ್ಟಾಗ್ರಾಂನಲ್ಲಿ ಸಂದೇಶ ಹಾಗೂ ಸ್ಟೇಟಸ್‌ಗಳಲ್ಲಿ ಹಂಚಿಕೊಳ್ಳಲು ಕೆಲವು ವಿಶೇಷ ಶುಭಾಶಯಗಳ ಸಾಲುಗಳನ್ನು ತಿಳಿಸಲಾಗಿದೆ.
ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ಪ್ರತಿಯೊಬ್ಬ ಕನ್ನಡಿಗನೂ ಕನ್ನಡದ ಹಿರಿಮೆಯನ್ನು ಸಾರುವ ದಿನ. 'ಕಲಿಯೋಕೆ ಕೋಟಿ ಭಾಷೆ ಆಡೋಕೆ ಒಂದೇ ಭಾಷೆ ಕನ್ನಡ... ಕನ್ನಡ... ಕಸ್ತೂರಿ ಕನ್ನಡ..!' 'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು' ಎಂಬ ರೋಮಾಂಚನಕಾರಿ ನುಡಿಗಳೊಂದಿಗೆ ಬೆಳೆದ ನಾವು ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ.

- ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
- ನಮ್ಮ ಕನ್ನಡ, ನಮ್ಮೆಲ್ಲರ ಹೆಮ್ಮೆ. ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
- ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
- ಕರುನಾಡ ತಾಯಿ ಸದಾ ಚಿನ್ಮಯಿ! ಎಲ್ಲಾ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
- ಅನ್ನ ಕೋಡೋ ನಮ್ಮ ನಾಡು-ನುಡಿಯ ಕಂಪು ಎಲ್ಲೆಡೆಗೆ ಪಸರಿಸಲಿ.
- ಹೇ ಕನ್ನಡದ ಕಂದ, ನಿನಗಿದೋ ಕನ್ನಡ ರಾಜ್ಯೋತ್ಸವದ ಶುಭಾಶಯ.
- ಕನ್ನಡವೇ ಕನ್ನಡಿಗರ ಅಸ್ಮಿತೆ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಸುಲಿದ ಬಾಳೆಹಣ್ಣಿನಂತೆ, ಸಿಪ್ಪೆ ತೆಗೆದ ಕಬ್ಬಿನಂತೆ, ಉಷ್ಣ ಅಳಿದ ಹಾಲಿನಂತೆ ನಮ್ಮ ಕನ್ನಡ.
- ಎಲ್ಲಾ ಕನ್ನಡಿಗರಿಗೂ ವರ್ಷವಿಡೀ 'ಕನ್ನಡ ರಾಜ್ಯೋತ್ಸವ'. ನವೆಂಬರ್ 1 ಅದರ ಮೂರ್ತರೂಪ. ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ನವೆಂಬರ್ ಮಾತ್ರವಲ್ಲ, ವರ್ಷಪೂರ್ತಿ ಕನ್ನಡಿಗರಿಗೆ ಕನ್ನಡ ಹಬ್ಬವೇ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಯಾರಪ್ಪಂದ್ ಏನೈತಿ, ಬೆಳಗಾವಿ ನಮ್ದೈತಿ.
- ದೋಸ್ತಾ.. ಕರ್ನಾಟಕದಲ್ಲಿ ಕನ್ನಡಿಗನಾಗಿರು. ನಿನಗಿದೋ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಕನ್ನಡ ಮಾತನಾಡಿ, ಕನ್ನಡ ಬಾರದವರಿಗೆ ಕನ್ನಡ ಕಲಿಸಿ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಕನ್ನಡ ಕಾರುಣ್ಯದ ಭಾಷೆ. ಕನ್ನಡ ಗೊತ್ತಿಲ್ಲ ಎನ್ನುವವರಿಗೆ ಪ್ರೀತಿಯಿಂದಲೇ ಕಿವಿ ಹಿಂಡಿ ಕನ್ನಡ ಕಲಿಸೋಣ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಗಗನ ಗಾಳಿಯಲಿ ಜಿಗಿದು ಜೀವಿಸಲಿ ಚೆಲುವ ಕನ್ನಡದ ಬಾವುಟ! ನಿಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯ.
- ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಮೆಟ್ಟಿದರೆ ಕನ್ನಡ ಮಣ್ಣನ್ನು ಮೆಟ್ಟಬೇಕು, ಬದುಕಿದು ಜಟಕ ಬಂಡಿ, ಇದು ವಿಧಿ ಓಡಿಸುವ ಬಂಡಿ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
- ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ, ಬಾರಿಸು ಕನ್ನಡ ಡಿಂಡಿಮವ. ನಿಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
- ಭವ್ಯ ಇತಿಹಾಸ, ಪರಂಪರೆ ನಮ್ಮದು. ವಿಶ್ವ ಲಿಪಿಗಳ ರಾಣಿ ಕನ್ನಡ ಎನ್ನುವ ಹಿರಿಮೆ ಕನ್ನಡಕ್ಕಿದೆ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
-ಸರ್ವಧರ್ಮೀಯರು ಕಟ್ಟಿದ ಕನ್ನಡವಿದು. ಈ ಪರಂಪರೆ ಮುಂದುವರಿಯಲಿ. ಎಲ್ಲರಿಗೂ ಕನ್ನಡ ರಾಜ್ಯೋತ್ಸವ ಶುಭಾಶಯಗಳು.
- ಕನ್ನಡ ಬರೀ ಭಾಷೆಯಲ್ಲ, ಅದು ನಮ್ಮ ಉಸಿರು, ನಮ್ಮ ಬದುಕು ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.



Click it and Unblock the Notifications