Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ರಾಜ್ಯ ಬಜೆಟ್: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಮಹಿಳೆಯರಿಗೆ ಸಿಕ್ಕಿರುವ ಕೊಡುಗೆಗಳೇನು?
2024ರ ರಾಜ್ಯ ಕರ್ನಾಟಕ ಬಜೆಟ್‌ನಲ್ಲಿ ಮಹಿಳೆಯರಿಗೆ ಯಾವೆಲ್ಲಾ ಕೊಡುಗೆಗಳಿವೆ ಎಂಬ ಕುತೂಹಲ ರಾಜ್ಯದ ಮಹಿಳೆಯರಲ್ಲಿತ್ತು, ಈ ಸಾಲಿನಲ್ಲಿ ಮುಖ್ಯಮಂತ್ರ ಸಿದ್ಧರಾಮಯ್ಯ ಮಂಡಿಸಿರುವ ಸುದೀರ್ ಬಜೆಟ್‌ನಲ್ಲಿ (3 ಗಂಟೆ 16 ನಿಮಿಷ) ಬಜೆಟ್‌ನಲ್ಲಿ ಮಹಿಳೆಯರಿಗೆ ಏನೆಲ್ಲಾ ಕೊಡುಗೆಗಳನ್ನು ನೀಡಿದೆ ಎಂದು ನೋಡೋಣ ಬನ್ನಿ:

ಗೃಹ ಲಕ್ಷ್ಮಿ ಯೋಜನೆ
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ.
ಕುಟುಂಬ ದತ್ತಾಂಶದನ್ವಯ 1.33 APL, BPL. AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ.
ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ. ಕುಟುಂಬ ದತ್ತಾಂಶದನ್ವಯ 1.33 APL, BPL. AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ.
ಅಂಗನವಾಡಿ ಕಾರ್ಯಕರ್ತರಿಗೆ
ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.
ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
Cerebral Palsy, Muscular Dystrophy, Parkinsons # Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ 1,000 ರೂ ಪ್ರೋತ್ಸಾಹಧನವನ್ನು ನೀಡಲಾಗುವುದು.
ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.
ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು...
ಲಿಂಗತ್ವ ಅಲ್ಪಸಂಖ್ಯಾತರ ಬದುಕು ಸುಧಾರಣೆಗೆ
ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 11200 ರೂ.ಗಳಿಗೆ ಹೆಚ್ಚಿಸಲಾಗುವುದು.
ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವು
ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು;
• ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.
• ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.
• ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.
ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ನಡೆಸಲಾಗುವುದು. ಕಲ್ಪಿಸಲು ಮರುಸಮೀಕ್ಷೆ
2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ನಿವೇಶನ ಹೊಂದಿರದ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.
2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು.



Click it and Unblock the Notifications