Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕರ್ನಾಟಕ ಬಜೆಟ್ 2026: ಆರೋಗ್ಯ ವಲಯಕ್ಕೆ ಬಂಪರ್, ಹೊಸ ಯೋಜನೆಗಳೇನು ನೋಡಿ!
ರಾಜ್ಯ ಸರ್ಕಾರದ 2026-27ನೇ ಸಾಲಿನ ಬಹುನಿರೀಕ್ಷಿತ ಬಜೆಟ್ ಮಂಡನೆಯಾಗಿದ್ದು, ಹಲವು ಕ್ಷೇತ್ರಗಳಿಗೆ ಬರಪೂರ ಕೊಡುಗೆ ನೀಡಲಾಗಿದೆ. ಬರೋಬ್ಬರಿ 4,48,004 ಕೋಟಿ ರೂಪಾಯಿ ಗಾತ್ರದ ದಾಖಲೆಯ ಬಜೆಟ್ ಇದಾಗಿದೆ. 2025-26ನೇ ಸಾಲಿನ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಈ ಬಾರಿ ತುಸು ಏರಕೆಯಾಗಿದೆ. ಈ ಬಾರಿ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತೀ ಹೆಚ್ಚು ಹಂಚಿಕೆಯಾಗಿದೆ. ಹಾಗೆ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೂ ಸಹ ದೊಡ್ಡ ಮೊತ್ತದ ಹಂಚಿಕೆ ನೋಡಬಹುದು.
ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸುಮಾರು 17,817 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಇದು ಒಟ್ಟು ಬಜೆಟ್ ಗಾತ್ರದ ಶೇ.4 ರಷ್ಟಾಗಿದೆ. ಹಾಗೆ ಈ ಬಜೆಟ್‌ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಬರೋಬ್ಬರಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.

ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಪ್ರಸ್ತುತ ಸೇವೆ ಸಲ್ಲಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತಲಾ ಒಂದು ಜೊತೆ ಹೆಚ್ಚುವರಿ ಸಮವಸ್ತ್ರ ವಿತರಿಸಲು ಸರ್ಕಾರ ನಿರ್ಧರಿಸಿದೆ.
ಆರೋಗ್ಯ ವಲಯಕ್ಕೆ ಈ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ವಲಯಕ್ಕೂ ಬರಪೂರ ಕೊಡುಗೆ ನೀಡಲಾಗಿದೆ. ಅದ್ರಲ್ಲೂ ಹೊಸ ಆಸ್ಪತ್ರೆ, ಹಳೆಯ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರವನ್ನು ಸ್ಥಾಪಿಸುವುದಾಗಿ ಘೋಷಿಸಲಾಗಿದೆ.
ಹಾಗೆ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೋಲಾರದಲ್ಲಿ ESI ಆಸ್ಪತ್ರೆಗಳನ್ನು ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹಾಗೆ ವಿಜಯಪುರದಲ್ಲಿ 12 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲ ಗೃಹ ನಿರ್ಮಾಣಕ್ಕೂ ಈ ಬಜೆಟ್‌ನಲ್ಲಿ ಯೋಜನೆ ರೂಪಿಸಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ
ಸಂಪುಟ ಸಭೆ ಹಾಗೆ ಅಧಿವೇಶನದಲ್ಲಿ ಚರ್ಚೆಯಾಗಿದ್ದ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸಂಬಂಧಿಸಿದಂತೆ ಬಜೆಟ್‌ನಲ್ಲಿಯೂ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ಆಸ್ಟ್ರೇಲಿಯಾದಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಅದೇ ರೀತಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶ ಇದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಎಕ್ಸ್‌ನಂತಹ ವೇದಿಕೆಗಳಿಗೆ ಲಾಗ್-ಇನ್ ಆಗುವಾಗ ಆಧಾರ್ ಅಥವಾ ಇತರ ಗುರುತಿನ ಚೀಟಿ ಮೂಲಕ ವಯಸ್ಸನ್ನು ಕಡ್ಡಾಯವಾಗಿ ದೃಢೀಕರಿಸಬೇಕಾಗಬಹುದು. 16 ವರ್ಷದೊಳಗಿನ ಮಕ್ಕಳಿಗೆ ಖಾತೆ ತೆರೆಯಲು ಅವಕಾಶ ನೀಡುವ ಸಂಸ್ಥೆಗಳ ಮೇಲೆ ಭಾರಿ ದಂಡ ವಿಧಿಸುವ ಅವಕಾಶ ಈ ಕಾನೂನಿನಲ್ಲಿರಲಿದೆ.



Click it and Unblock the Notifications
