Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕೋವಿಡ್ ಅಬ್ಬರ: ಸ್ಕೂಲ್‌ಗಳಿಗೆ ಹೊಸ ಗೈಡ್‌ಲೈನ್ಸ್ ಪ್ರಕಟ.. ಇವರಿಗೆಲ್ಲಾ ರಜೆ!
ರಾಜ್ಯದಲ್ಲಿ ಕೋವಿಡ್-19 (Covid-19) ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಹೊಸ ಗೈಡ್‌ಲೈನ್ಸ್ (New COVID Guidelines) ಹೊರಡಿಸಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಮತ್ತು ಇತರೆ ಲಕ್ಷಣಗಳು ಕಂಡು ಬಂದಲ್ಲಿ, ಅವರು ಶಾಲೆಗೆ ಬರಕೂಡದು. ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆದು, ಗುಣಮುಖರಾದ ಬಳಿಕವೇ ಶಾಲೆಗೆ ಬರಬೇಕು ಎಂದು ಹೇಳಿದೆ. ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಲ್ಲಿ ಈ ಲಕ್ಷಣಗಳು ಕಂಡು ಬಂದಲ್ಲಿ, ಅಗತ್ಯ ಕ್ರಮಗಳನ್ನು ಪಾಲಿಸಲು ಸೂಚಿಸಿದೆ.
ಮಳೆರಾಯನ ಆರ್ಭಟ ಮತ್ತು ಕೊರೊನಾ ಸೋಂಕಿನ ಆತಂಕದ ನಡುವೆಯೇ ರಾಜ್ಯದಲ್ಲಿ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಸಿಎಂ ಕೆಲ ಮಹತ್ವದ ನಿಯಮಗಳನ್ನು ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಆರೋಗ್ಯ ಇಲಾಖೆ ಶಾಲೆಗಳಿಗಾಗಿ ಪ್ರತ್ಯೇಕ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಶಾಲೆಗಳಿಗೆ ಪ್ರತ್ಯೇಕ ಮಾರ್ಗಸೂಚಿ
* ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತ್ಯಾದಿ ಲಕ್ಷಣಗಳು ಕಂಡು ಬಂದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವಂತಿಲ್ಲ. ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ಕ್ರಮ ತೆಗೆದುಕೊಳ್ಳಬೇಕು.
* ಮಕ್ಕಳು ಗುಣಮುಖವಾಗುವವರೆಗೆ ಶಾಲೆಗೆ ಬರುವಂತಿಲ್ಲ. ಪೋಷಕರು ಮಕ್ಕಳನ್ನು ಕಳುಹಿಸುವಂತಿಲ್ಲ.
* ಶಾಲೆಯಲ್ಲಿರುವ ವೇಳೆ ಮಕ್ಕಳಿಗೆ ಜ್ವರ, ಕೆಮ್ಮು, ನೆಗಡಿ ಮತ್ತು ಇತರೆ ಲಕ್ಷಣಗಳು ಕಾಣಿಸಿಕೊಂಡಲ್ಲಿ ಕೂಡಲೇ ಪೋಷಕರಿಗೆ ಮಾಹಿತಿ ನೀಡಿ, ಮನೆಗೆ ವಾಪಸ್ ಕಳುಹಿಸಬೇಕು.
* ಶಾಲಾ ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯಲ್ಲಿ ಸೋಂಕು ಲಕ್ಷಣಗಳು ಕಾಣಿಸಿಕೊಂಡಲ್ಲಿ ಮಾರ್ಗಸೂಚಿ ಪಾಲಿಸಬೇಕು.
* ಕೈಗಳ ಸ್ವಚ್ಛತೆ ಮತ್ತು ಕೆಮ್ಮುವಾಗ, ಸೀನುವಾಗ ಎಚ್ಚರ ವಹಿಸಬೇಕು.
* ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಗಳಿಂದ ಹೊರಡಿಸಲಾದ ಸುತ್ತೋಲೆ, ಮಾರ್ಗದರ್ಶನ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ರಾಜ್ಯದಲ್ಲಿ 253 ಕೋವಿಡ್ ಸಕ್ರಿಯ ಪ್ರಕರಣ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದ್ವಿಶತಕ ತಲುಪಿ, 300ರ ಸಮೀಪಕ್ಕೆ ಹೋಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 253 ಕೋವಿಡ್ - 19 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 3 ಮಂದಿ ಮಾತ್ರವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ 250 ಸೋಂಕಿತರು ತಮ್ಮ ಮನೆಯಲ್ಲಿಯೇ ಉಳಿದಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿಯಂತೆ, ರಾಜ್ಯದಲ್ಲಿ ಈವರೆಗೂ 4 ಮಂದಿ ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ಇಲ್ಲ
ರಾಜ್ಯದಲ್ಲಿ ದಿನೇ ದಿನೆ ಕೋವಿಡ್ - 19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೆಲವು ಸೂಚನೆ ನೀಡಿದ್ದಾರೆ. ಅದರಂತೆ, ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕೆಲಸ ನಿರ್ವಹಿಸಬೇಕಿದೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸೂಚನೆ ನೀಡಲಾಗಿದೆ. ಕೊರೊನಾ ನಿಯಂತ್ರಣ ಸಂಬಂಧ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರೋಗ ಲಕ್ಷಣವನ್ನು ನಿರ್ಲಕ್ಷ ಮಾಡಬೇಡಿ
ರಾಜ್ಯದಲ್ಲಿ ಮಳೆಯಾಗುತ್ತಿದೆ. ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಮುನ್ನೆಚ್ಚರಿಕೆ ದೃಷ್ಟಿಯಿಂದ ಎಲ್ಲರೂ ಮಾಸ್ಕ್ ಧರಿಸುವುದು ಉತ್ತಮ. ಸ್ವಲ್ಪ ನೆಗೆಡಿ, ಕೆಮ್ಮು ಬಂದರೆ ಭಯಪಡಬೇಕಿಲ್ಲ. ಆದರೆ, ರೋಗ ಲಕ್ಷಣವನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.



Click it and Unblock the Notifications