Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ವಾಯುಭಾರ ಕುಸಿತ: ಕರ್ನಾಟಕದ ಈ ಜಿಲ್ಲೆಗಳಲ್ಲಿ 1 ವಾರ ಗುಡುಗು ಸಹಿತ ಮಳೆ! ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೊಮ್ಮೆ ಹೆಚ್ಚಾಗಿದೆ. ಮುಂಗಾರು ಕೊನೆಗೊಂಡು ಹಿಂಗಾರು ಆರಂಭವಾದರೂ, ಮಳೆರಾಯ ಬಿಡುವು ನೀಡುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಗೊಂಡಿದ್ದು, ಇದು ಕರ್ನಾಟಕದ ಮೇಲೆ ನೇರ ಪರಿಣಾಮ ಬೀರಿದೆ. ಇದರ ಪರಿಣಾಮವಾಗಿ, ಮುಂದಿನ ಒಂದು ವಾರಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ (Karnataka Rain Alert) ಸಾಧ್ಯತೆಯಿದೆ. ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಿಂಗಾರು ಪ್ರವೇಶ ಮತ್ತು ಆಗ್ನೇಯ ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ (Karnataka Weather) ಅಬ್ಬರ ಮುಂದುವರಿಯಲಿದೆ. ಯಾವ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ, ಎಲ್ಲಿ ಹೆಚ್ಚು ಮಳೆಯಾಗಿದೆ ಮತ್ತು ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಮಳೆ ಬೀಳಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಯೋಣ ಬನ್ನಿ.

ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ
ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿನ ವಾಯುಭಾರ ಕುಸಿತವು ಕಳೆದ ಆರು ಗಂಟೆಗಳಲ್ಲಿ 5 ಕಿ.ಮೀ. ವೇಗದಲ್ಲಿ ನಿಧಾನವಾಗಿ ಈಶಾನ್ಯ ದಿಕ್ಕಿಗೆ ಚಲಿಸಿದೆ. ಒಂದು ವಾರ (ಹತ್ತು ದಿನ) ರಾಜ್ಯದಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ, ಉತ್ತರ ಒಳನಾಡು ತಮಿಳುನಾಡು ಮತ್ತು ತಮಿಳುನಾಡಿಗೆ ಹೊಂದಿಕೊಂಡಿರುವ ದಕ್ಷಿಣ ಒಳನಾಡು ಕರ್ನಾಟಕದ ಮೇಲಿನ ಕಡಿಮೆ ಒತ್ತಡ ಪ್ರದೇಶವು ಪಶ್ಚಿಮ ವಾಯುವ್ಯ ದಿಕ್ಕಿಗೆ ಚಲಿಸಿ, ಕರ್ನಾಟಕ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೇಂದ್ರೀಕೃತವಾಗಿದೆ.
ಏಳು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಕಡಿಮೆ ಒತ್ತಡ ಪ್ರದೇಶ ರೂಪುಗೊಳ್ಳುವ ಸಾಧ್ಯತೆ ದಟ್ಟವಾಗಿದ್ದು, ಇದರಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ವಾಯುಭಾರ ಕುಸಿತದ ಕಾರಣದಿಂದ ಮುಂದಿನ ಹತ್ತು ದಿನಗಳವರೆಗೆ ರಾಜ್ಯದಲ್ಲಿ ಮಳೆ ಹೆಚ್ಚಾಗಲಿದ್ದು, ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ ಮತ್ತು ಬೆಂಗಳೂರು ನಗರ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ಬೀದರ್, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ವರದಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಥವಾ ಸಂಜೆ ವೇಳೆ ಭಾರಿ ಮಳೆಯ ನಿರೀಕ್ಷೆಯಿದೆ. ಕಳೆದ ಹಲವು ದಿನಗಳಿಂದ ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವಾಯುಭಾರ ಕುಸಿತದ ಕಾರಣ ಮುಂದಿನ ಕೆಲವು ದಿನಗಳವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಇಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ಅ.30 ರವರೆಗೂ ಗುಡುಗು ಸಹಿತ ಮಳೆ
ಅಕ್ಟೋಬರ್ 30ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಅಕ್ಟೋಬರ್ 30ರ ವರೆಗೆ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆಯಿದೆ.



Click it and Unblock the Notifications
