Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
Karnataka Rain: ಜೂ.23 ರವರೆಗೂ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.. ಮತ್ತೆ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದಾದ್ಯಂತ ಜೂನ್ 23ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಸರ್ಕ್ಯುಲೇಷನ್ ಇರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಜೂನ್ 20 ರವರೆಗೂ ಭಾರೀ ಮಳೆಯಾಗಲಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಭಾರೀ ಮಳೆಯ ಹಿನ್ನೆಲೆ ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ. ಉಡುಪಿ, ಉತ್ತರ ಕನ್ನಡದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜ್ ಶಿಕ್ಷಣ, ಐಟಿಐಗಳಿಗೆ ರಜೆ ಘೋಷಿಸಲಾಗಿದೆ. ಪದವಿ ನಂತರದ ಶಿಕ್ಷಣ ಸಂಸ್ಥೆಗಳಿಗೆ ರಜೆ ಇಲ್ಲ.
ಕರ್ನಾಟಕದಲ್ಲಿ ಮಳೆ (Karnataka Rain) ಚುರುಕುಗೊಂಡಿದೆ. ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಧಾರವಾಡ, ಹಾವೇರಿಯಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ ಸುರಿದಿದೆ. ಇಂದು ಬೆಳ್ಳಂಬೆಳಗ್ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇಂದು ಸಹ ಅತ್ಯಂತ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆ (ಜೂನ್ 18 ಬುಧವಾರ) ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಈ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಜೂನ್ 20 ರಿಂದ ಯಾವುದೇ ಜಿಲ್ಲೆಗಳಿಗೆ ಮಳೆ ಅಲರ್ಟ್ ನೀಡಿಲ್ಲ.

ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆ?
ಇಂದು (ಜೂನ್ 17) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಕೊಡಗು, ಹಾಸನ, ಬೆಳಗಾವಿ, ಮೈಸೂರು, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಗೆಯೇ ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮುಂದುವರಿದ ಮಳೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸ್ವಲ್ಪ ಮಳೆಯಾಗುತ್ತಿದೆ. ಹೆಚ್ಎಎಲ್ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರೆಡ್ ಅಲರ್ಟ್ ಜಿಲ್ಲೆಗಳು
ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗುವ ಸೂಚನೆಯಿರುವ ರೆಡ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಜಿಲ್ಲೆಗಳು
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ ಮತ್ತು ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಮಾಡಲಾಗಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು
ಈ ಮಧ್ಯೆ, ಮಂಡ್ಯ, ಕೊಪ್ಪಳ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದಲ್ಲಿ ಭಾರೀ ಮಳೆ ಅಬ್ಬರಿಸುವ ಸೂಚನೆಯಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಕೊಡಗಿನಲ್ಲೂ ಭಾರೀ ಮಳೆಗೆ ಪ್ರೌಢ ಶಾಲೆವರೆಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಶಾಲೆ, ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು ತಾಲೂಕಿನಲ್ಲಿ ವಿವಿಧೆಡೆ ಹಾನಿ
ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆ- ಬಜ್ಜೆಯಿಂದ ಅದ್ಯಪಾಡಿಗೆ ಹೋಗುವ ಬೈಲು ಬೀಡು ರಸ್ತೆಯಲ್ಲಿ ಮಳೆನೀರು ಇಂಗಿ ರಸ್ತೆಯಲ್ಲಿ ಬಿರುಕು ಮೂಡಿದೆ. ರಸ್ತೆಯಲ್ಲಿ ಉಬ್ಬು-ತಗ್ಗುಗಳಾಗಿರುವುದರಿಂದ ಇಂಜಿನಿಯರ್ ಸ್ಥಳ ಪರಿಶೀಲಿಸಿದರು. ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕೆಮ್ಮಂಜೂರು ಗ್ರಾಮದಲ್ಲಿ ಕೃತಕ ನೆರೆ ಉಂಟಾಗಿ ಹಲವಾರು ಮನೆಗಳಿಗೆ ಮಳೆನೀರು ನುಗ್ಗಿದೆ.
ನಿನ್ನೆ ಎಲ್ಲೆಲ್ಲಿ ಮಳೆಯಾಗಿದೆ?
ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ತುಮಕೂರು, ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಿದೆ.



Click it and Unblock the Notifications

