School Holiday: ಶಾಲೆಗೆ ಈ ದಿನ ರಜಾ.. ಈ ಜಿಲ್ಲೆಗಳಲ್ಲಿ 1 ವಾರ ಭಾರೀ ಮಳೆ! ಎಲ್ಲೆಲ್ಲಿ ಹೈ ಅಲರ್ಟ್?

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ (ಜುಲೈ 29ರವರೆಗೂ) ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಇಂದು ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ (Karnataka Rains) ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೆಲವು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಮಳೆ (Karnataka Weather) ಮತ್ತೆ ತನ್ನ ಅಬ್ಬರವನ್ನು ಶುರು ಮಾಡಿದೆ. ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗುತ್ತಿದೆ. ಹೀಗಾಗಿ, ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ (School Holiday) ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

Heavy Rain in coastal

ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮುಂಗಾರು ತೀವ್ರಗೊಂಡಿದ್ದು, ಜುಲೈ 29 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಒಂದು ವಾರದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಇಂದು ಮಳೆ ಇರುತ್ತಾ?

ವಿಜಯನಗರ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವೆಡೆ ಮಳೆಯಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಇಂದು (ಜುಲೈ 23) ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಬೆಳ್ಳಂದೂರು ಕೆರೆ ಮತ್ತು ಇತರ ಪ್ರದೇಶಗಳಲ್ಲಿ ನೀರು ತುಂಬಿ ಜನರು ತೊಂದರೆ ಅನುಭವಿಸಿದರು. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ನಾಳೆ ಅಧಿಕ ಮಳೆಯಾಗುವ ಸಾಧ್ಯತೆ

ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 24 ರಂದು ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ, ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಸಹ ಭಾರಿ ಮಳೆಯಾಗುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಜು.25ರಂದು ಕರಾವಳಿ ಜಿಲ್ಲೆಗಳಲ್ಲಿ ರಣ ಮಳೆ

ಜುಲೈ 25 ರಂದು ಸಹ ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅಧಿಕ ಮಳೆ ಮುಂದುವರೆಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬಳ್ಳಾರಿ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಒಟ್ಟಾರೆಯಾಗಿ, ಜುಲೈ 23 ರಿಂದ ಜುಲೈ 27 ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಹವಾಮಾನ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು, ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಕೋರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲ್ಲೂಕುಗಳಲ್ಲಿನ ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಅಂಗನವಾಡಿಗಳಿಗೆ ಇಂದು ರಜೆ ಇರಲಿದೆ.

English summary

Karnataka Rains: Heavy Rain in coastal and malnad till July 29; holiday declared for Schools

Karnataka Rains: Heavy Rain in coastal and malnad till July 29; holiday declared for School & Colleges these districts
Story first published: Wednesday, July 23, 2025, 9:45 [IST]
X
Desktop Bottom Promotion