Latest Updates
-
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್!
Karnataka Rains: ಇನ್ನೂ 5 ದಿನ ಭಾರೀ ಮಳೆ; ಆರೆಂಜ್, ಯೆಲ್ಲೋ ಅಲರ್ಟ್.. ರಜೆ ಇದ್ಯಾ?
ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದೆ. ಜುಲೈ 14ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ (Karnataka Weather) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ (ಜುಲೈ 8 ರಿಂದ) ಜುಲೈ 12 ರವರೆಗೆ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಗಾಳಿಯ ವೇಗ ಹೆಚ್ಚಾಗುವ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಐದು ದಿನ ವ್ಯಾಪಕ ಮಳೆಯಾಗಲಿದ್ದು (Karnataka Rains), ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಹೌದು, ರಾಜ್ಯದಲ್ಲಿ ಜುಲೈ 8 ರಿಂದ 12ರವರೆಗೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ, ಬೆಳಗಾವಿ ಸೇರಿದಂತೆ ರಾಜ್ಯದ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಇನ್ನು ಮಂಗಳವಾರ ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಒಂದು ವಾರಗಳ ಕಾಲ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೀಗಾಗಿ ಜನರು ಎಚ್ಚರದಿಂದಿರುವಂತೆ ಸೂಚಿಸಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದು ವರದಿಯಾಗಿಲ್ಲ.
ಬೆಂಗಳೂರಿನಲ್ಲಿ ಮಳೆ ಇರುತ್ತಾ?
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಚ್‌ಎಎಲ್‌ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಕೆಐಎಎಲ್‌ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಈ ಜಿಲ್ಲೆಗಳಲ್ಲೂ ಉತ್ತಮ ಮಳೆ
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಲಿದೆ ಎಂದು ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಹಾಗೂ ಹಾವೇರಿ, ಗದಗ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ 12 ಸೆಂ.ಮೀ. ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ, ಕಮ್ಮರಡಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಯಲ್ಲಾಪುರದಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಶಿವಮೊಗ್ಗ ಜಿಲ್ಲೆಆಗುಂಬೆ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಲಾ 6 ಸೆಂ.ಮೀ. ಮಳೆಯಾಗಿದೆ. ಇನ್ನು ಪುತ್ತೂರು, ಬೆಳ್ತಂಗಡಿ, ಮೂಡಬಿದ್ರೆ, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.
ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 30 ರಿಂದ 40 ಕಿಲೋ ಮೀಟರ್ ಇರಲಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಒಟ್ಟಾರೆಯಾಗಿ, ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ತೀವ್ರವಾಗಿದ್ದು, ಜುಲೈ 14ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.



Click it and Unblock the Notifications

