Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
Karnataka Weather: ರಾಜ್ಯದಲ್ಲಿ 5 ದಿನ ಭಾರೀ ಮಳೆ! 9 ಜಿಲ್ಲೆಗೆ ರೆಡ್ ಅಲರ್ಟ್.. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಇಂದಿನಿಂದ ರಾಜ್ಯದ ಹಲವೆಡೆ ಮುಂದಿನ ನಾಲ್ಕೈದು ದಿನಗಳವರೆಗೆ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಅಬ್ಬರಿಸುತ್ತಿದೆ. ಹುಬ್ಬಳ್ಳಿ-ಧಾರವಾಡ, ಕಾರವಾರ, ಗದಗ, ಯಾದಗಿರಿ, ಕಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮಳೆಗೆ ನಲುಗಿ ಹೋಗಿವೆ. ಕರಾವಳಿ ಜಿಲ್ಲೆಗಳಲ್ಲೂ ಕೂಡ ನಿರಂತರವಾಗಿ ಮಳೆ ಆಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಧಾರವಾಡ, ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹೌದು, ಈಗಾಗಲೇ ರಾಜ್ಯದ ಕೆಲವೆಡೆ ಮುಂಗಾರು ಅಬ್ಬರ ಶುರುವಾಗಿದೆ. ಜೂನ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಸಹ ಘೋಷಿಸಲಾಗಿದೆ. ಕೆಲ ಜಿಲ್ಲೆಗಳ ಶಾಲಾ ಕಾಲೇಜ್‌ಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಿಗೆ ಭಾರೀ (Heavy rain) ಪ್ರಮಾಣದ ಮಳೆಯ ಎಚ್ಚರಿಕೆಯನ್ನು ಇಲಾಖೆ ನೀಡಿದೆ. ಸಮುದ್ರ ಅಥವಾ ನದಿ ತೀರ ಹಾಗೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಅಧಿಕಾರಿಗಳು ಅಲರ್ಟ್ ಇರಬೇಕು
ಕರ್ನಾಟಕದ ಹಲವು ಭಾಗಗಳಲ್ಲಿ ಗುರುವಾದ ಮಧ್ಯಾಹ್ನದಿಂದ ಭಾರೀ (Karnataka rains) ಮಳೆಯಾಗುತ್ತಿದೆ. ಇದರಿಂದ ಧಾರವಾಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಸುರಕ್ಷತಾ ದೃಷ್ಟಿಯಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ (School Holiday) ಘೋಷಿಸಿವೆ. ಸ್ಥಳೀಯ ನಿವಾಸಿಗಳು ಅನಗತ್ಯ ಪ್ರಯಾಣ, ಜಲಮೂಲಗಳು, ತಗ್ಗು ಪ್ರದೇಶಗಳು ಮತ್ತು ಕರಾವಳಿ ಪ್ರದೇಶಗಳಿಗೆ ಹೋಗದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವುದರಿಂದ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಅಧಿಕಾರಿಗಳು ಅಲರ್ಟ್ ಇರಬೇಕು, ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು, ಸ್ಥಳದಲ್ಲಿ ಸಿದ್ಧರಿರಬೇಕು ಎಂದು ತಾಕೀತು ಮಾಡಿದ್ದಾರೆ.
ಅಂಗನವಾಡಿಗಳು ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ಧಾರವಾಡದಲ್ಲಿ ಎಲ್ಲಾ ಅಂಗನವಾಡಿಗಳು, ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಮತ್ತು ಪದವಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹೇಳಿದ್ದಾರೆ. ಹೆಚ್ಚಿನ ಹೊಳೆಗಳು ಮತ್ತು ಸರೋವರಗಳು ತುಂಬಿ ಹರಿಯುತ್ತಿವೆ. ಸಾರ್ವಜನಿಕರು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸಬೇಕು ಎಂದು ಅವರು ಸೂಚಿಸಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಸಂಜೆಯಿಂದ ನೀರಿನ ಮಟ್ಟ ಏರುತ್ತಿರುವುದರಿಂದ ಬೆನ್ನಿ ಹಳ್ಳ ಮತ್ತು ತುಪ್ಪರಿ ಹಳ್ಳ ಹೊಳೆಗಳ ಬಳಿಯ ಸಮುದಾಯಗಳನ್ನು ಕಟ್ಟೆಚ್ಚರದಲ್ಲಿರಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ತಂಡಗಳು ಸನ್ನದ್ಧವಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಾದ ಕಾರವಾರ, ಕುಮಟ, ಹೊನ್ನಾವರ, ಅಂಕೋಲಾ ಮತ್ತು ಭಟ್ಕಳದಲ್ಲಿ ಜೂನ್ ಆರಂಭದಿಂದಲೂ ನಿರಂತರ ಮಳೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಹೇಳಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪದವಿ ಹಂತದವರೆಗಿನ ಇಡೀ ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮಕ್ಕಳಿಗೆ ತೊಂದರೆಯಾಗದಂತೆ ಸಾಮಾನ್ಯ ರಜಾದಿನಗಳಲ್ಲಿ ತರಗತಿಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಜೂನ್ 17 ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜೂನ್ 20 ರವರೆಗೆ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯಿದೆ ಎಂದು ಐಎಂಡಿ ತಿಳಿಸಿದೆ.
ಇಂದು ಯಾವ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಎರಡು ದಿನದಿಂದ ಕರಾವಳಿ, ಮಲೆನಾಡು ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗಲಿದ್ದು, 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವರ್ಷ ಜೂನ್ ಹಾಗೂ ಸೆಪ್ಟೆಂಬರ್ ಒಳಗೆ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಮೇ ತಿಂಗಳಲ್ಲಿ ದಾಖಲೆ ಮಳೆ ಸುರಿದಿದೆ. ಜೂನ್, ಜುಲೈ, ಸೆಪ್ಟೆಂಬರ್ ತಿಂಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಸದ್ಯ ಜೂನ್ 17ರವೆರೆಗೆ ಭಾರೀ ಮಳೆಯ ಎಚ್ಚರಿಕೆಯಿದೆ.
ಇಂದು (ಜೂನ್ 13 ರಂದು) ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬಳ್ಳಾರಿ, ರಾಯಚೂರು, ಧಾರವಾಡ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದೆ.
ಜೂನ್ 14 ರಂದು ಕರಾವಳಿಯ ಜಿಲ್ಲೆಗಳಿಗೆ ರೆಡ್ ಅಲರ್ಟ್
ಕೋಲಾರ, ಚಿತ್ರದುರ್ಗ, ಯಾದಗಿರಿ, ಬೀದರ್, ಚಾಮರಾಜನಗರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ಜೂನ್ 14 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಹಾಗೂ ದಕ್ಷಿಣ ಒಳನಾಡಿನ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಹಾಗೂ ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.



Click it and Unblock the Notifications
