Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Karnataka Rains: ಬಿರುಗಾಳಿ ಸಹಿತ ಭಾರೀ ಮಳೆ: ಈ ಜಿಲ್ಲೆಗಳಿಗೆ ಹೈ ಅಲರ್ಟ್.. ಇಂದು ಸಹ ಶಾಲೆಗಳಿಗೆ ರಜೆ
ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್! ಎರಡು ದಿನ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ (Karnataka Rains) ಸಾಧ್ಯತೆ. ಕೆಲ ಜಿಲ್ಲೆಗಳಲ್ಲಿ ವರುಣ ಅಬ್ಬರ ಜೋರು. ಹೌದು, ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ವರುಣಾರ್ಭಟ ಜೋರಾಗುತ್ತಿದ್ದಂತೆ ಹವಾಮಾನ ಇಲಾಖೆ ಹೈ ಅಲರ್ಟ್ ನೀಡಿದೆ. ಶಿಕ್ಷಣ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮ ಕೈಗೊಳ್ಳುತ್ತಿದೆ. ಕೆಲ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು (ಜುಲೈ 5 ರಂದು) ರಾಜ್ಯದಲ್ಲಿ ಹಲವು ಕಡೆ ಭಾರೀ ಮಳೆಯಾಗಲಿದ್ದು, ಕೆಲ ಜಿಲ್ಲೆಗಳ ಶಾಲಾ ಕಾಲೇಜು ಮತ್ತು ಅಂಗನವಾಡಿಗಳಿಗೆ ರಜೆ ಘೋಷಣೆ (School Holidays) ಮಾಡಲಾಗಿದೆ.
ಭಾರೀ ಮಳೆಯಾಗುತ್ತಿರುವ (Karnataka Weather) ಹಿನ್ನೆಲೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ನದಿಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಗಾಳಿ ಮಳೆಯಾಗುತ್ತಿದ್ದು, ಭದ್ರಾ, ತುಂಗಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಲಿಂಗನಮಕ್ಕಿ ಮತ್ತು ಭದ್ರಾ ಜಲಾಶಯಗಳಿಗೆ ತಲಾ ಒಂದೂವರೆ ಅಡಿ ನೀರು ಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು (ಜುಲೈ 5) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲವೆಡೆ ನೀರು ನಿಂತಿದೆ, ರಸ್ತೆಗಳು ಜಲಾವೃತವಾಗಿವೆ. ಹಲವೆಡೆ ಭೂಕುಸಿತದ ಆತಂಕವಿದೆ. ಆಯಾ ಜಿಲ್ಲಾಡಳಿತಗಳು ನದಿ ತೀರದ ಜನರಿಗೆ ಎಚ್ಚರಿಕೆ ನೀಡಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ. ಕರಾವಳಿ ಪ್ರದೇಶದಲ್ಲಿ ಸಾಧಾರಣ ಗಾಳಿಯೊಂದಿಗೆ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಹೈ ಅಲರ್ಟ್
ಇಂದು (ಜುಲೈ 5) ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 6 ಮತ್ತು 7 ರಂದು ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಜುಲೈ 11 ರವರೆಗೆ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೋಮವಾರವೂ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು ನಗರದಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇಂದು ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಜೋಯಿಡಾ, ಸಿದ್ದಾಪುರ ತಾಲೂಕಿನಲ್ಲಿ ಶಾಲೆಗಳಿಗೆ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ, ಇಂದು ಶಾಲೆಗಳಿಗೆ ರಜೆ ಇರಲಿದೆ.
ಕರಾವಳಿಯಲ್ಲಿ ಮುಂದುವರಿದ ಮಳೆ
ಕರಾವಳಿ ಜಿಲ್ಲೆಯಲ್ಲಿ ದಿನವಿಡೀ ಮಳೆ ಮುಂದುವರಿದಿದೆ. ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಹಾಗೂ ಪುತ್ತೂರುಗಳಲ್ಲಿ ಇಡೀ ದಿನ ಮಳೆ ಸುರಿದಿದೆ. ಕರಾವಳಿಯ ತಗ್ಗು ಪ್ರದೇಶದಲ್ಲಿ ಮಳೆ ಇಳಿಕೆಯಾದರೂ ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 56 ಮಿ.ಮೀ ಮಳೆ ದಾಖಲಾಗಿದೆ. ಬಂಟ್ವಾಳದಲ್ಲಿ ಅತೀ ಹೆಚ್ಚು 68.2 ಮಿ.ಮೀ ಮಳೆಯಾಗಿದೆ. ಬೆಳ್ತಂಗಡಿ 62.6 ಮಿ.ಮೀ, ಮಂಗಳೂರು 49 ಮಿ.ಮೀ, ಪುತ್ತೂರು 49 ಮಿ.ಮೀ, ಸುಳ್ಯ 61 ಮಿ.ಮೀ, ಮೂಡುಬಿದಿರೆ 36 ಮಿ.ಮೀ, ಕಡಬ 64.4 ಮಿ.ಮೀ, ಮೂಲ್ಕಿ 26.6 ಮಿ.ಮೀ, ಉಳ್ಳಾಲ 53.7 ಮಿ.ಮೀ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 12.2 ಮತ್ತು ಶೃಂಗೇರಿ 61.7 ಮಿ.ಮೀ ಮಳೆಯಾಗಿದೆ.



Click it and Unblock the Notifications
