Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
Karnataka Weather: ಮತ್ತೆ ಅಬ್ಬರಿಸಲಿದ್ದಾನೆ ಬಿಡುವು ನೀಡಿದ್ದ ವರುಣ-ಹಲವು ಭಾಗದಲ್ಲಿ ಅಲರ್ಟ್!
Karnataka Weather Alert: ಮಳೆಗಾಲದ ಆರಂಭದಲ್ಲೇ ವರುಣ ಅಬ್ಬರಿಸಿ ರಾಜ್ಯದ ಹಲವು ಭಾಗದಲ್ಲಿ ಮಳೆಯಾಗಿದ್ದು ನೋಡಬಹುದು. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಮಾನ್ಸೂನ್ ಆರಂಭದಲ್ಲೇ ಪ್ರವಾಹಕ್ಕೆ ಕಾರಣವಾಗಿತ್ತು. ಹಾಗೆ ರಾಜ್ಯದ ಹಲವು ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ಇನ್ನು ಕಳೆದ ಒಂದು ವಾರದಿಂದ ಮಳೆ ಕೊಂಚ ಬಿಡುವು ನೀಡಿದಂತಿತ್ತು.
ಒಂದು ವಾರದಂದ ಮಳೆ ಸ್ವಲ್ಪ ಕ್ಷಿಣವಾಗಿತ್ತು. ಆದ್ರೆ ಮಾನ್ಸೂನ್ ಮಾರುತಗಳು ಕೊಂಚ ಬಿಡುವು ನೀಡಿದ್ದರು ಈಗ ಮತ್ತೆ ಮಳೆ ಆರಂಭಗೊಳ್ಳುವ ಸೂಚನೆ ಸಿಕ್ಕಿದೆ. ಕರ್ನಾಟಕ ಸೇರಿದಂತೆ ಹಲವು ಕಡೆಗಳಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಜೂನ್ 12ರಿಂದ ಮಳೆಯಾಗುವ ಸಾಧ್ಯರೆ ಇದೆ ಎಂದು ಹೇಳಲಾಗಿದೆ. ಇದಕ್ಕೂ ಮೊದಲೇ ಕರಾವಳಿ ಕರ್ನಾಟಕದ ಅನೇಕ ಸ್ಥಳಗಳಲ್ಲಿ, ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ದಾಖಲಾಗಲಿದೆ. ಮೇ 29ರಿಂದ ಸ್ಥಗಿತಗೊಂಡಿದ್ದ ನೈರುತ್ಯ ಮುಂಗಾರು ಈ ಜೂನ್ 12 ಹಾಗೂ 18ರ ನಡುವೆ ಮತ್ತೆ ಪುನರುಜ್ಜೀವನಗೊಳ್ಳಲಿದೆ ಎಂದು ಐಎಂಡಿ ಮಾಹಿತಿ ಹಂಚಿಕೊಂಡಿದೆ.
ಬಂಗಾಳಕೊಲ್ಲಿಯಲ್ಲಿ ಜೂನ್ 12-13 ರಂದು ಒತ್ತಡ ರೂಪುಗೊಳ್ಳಬಹುದು. ಇದು ಮಳೆ ಮಾರುತಗಳು ವೇಗ ಪಡೆಯಲು ಸಹಾಯ ಮಾಡಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ದಕ್ಷಿಣ ಪರ್ಯಾಯ ದ್ವೀಪ ಮತ್ತು ಮಧ್ಯ ಭಾರತದ ಅನೇಕ ಭಾಗದಲ್ಲಿ ಮಳೆಯಾಗುವ ಸೂಚನೆ ಇದೆ.
ಇನ್ನು ಈ ಜೂನ್ 12ರಿಂದ ಕರ್ನಾಟಕದಲ್ಲೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಂದಿನಿಂದಲೇ ಹಲವು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅದರಲ್ಲೂ ಬಿರುಗಾಳಿ ಸಿಹಿತ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಹೀಗಾಗಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ಜೂನ್ 12ರಂದು ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಜೂನ್ 13ರಂದು 10 ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದ್ದು, ಮಲೆನಾಡು, ಕರಾವಳಿ ಸೇರಿ ಇತರೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಮಾಡಲಾಗಿದೆ.
ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ, ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವು ಕಡೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗುವ ಸೂಚನೆ ಇದೆ. ಹಾಗೆ ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೂನ್ 13ರಂದು ಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಉತ್ತರ ಭಾರತದಲ್ಲಿ ಹೀಟ್ ವೇವ್
ದಕ್ಷಿಣ ಭಾರತದಲ್ಲಿ ಮತ್ತೆ ಮುಂಗಾರು ಆರಂಭದ ಸೂಚನೆ ಸಿಗುತ್ತಿದೆ. ಆದ್ರೆ ಉತ್ತರ ಭಾರತದಲ್ಲಿ ಹೀಟ್ ವೇವ್ ಎಚ್ಚರಿಕೆ ನೀಡಲಾಗಿದೆ. ಜೂನ್ 10 ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಿಗದಿಗಿಂತ ಹೆಚ್ಚಿನ ತಾಪಮಾನಕ್ಕೆ ತುತ್ತಾಗಬಹುದು ಎನ್ನಲಾಗಿದೆ. ಹಾಗೆ ಎನ್‌ಸಿಆರ್ ಭಾಗದಲ್ಲೂ ಜೂನ್ 12ರ ವರೆಗೂ ಈ ಹವಾಮಾನ ಮುಂದುವರೆಯಲಿದೆ ಎಂದಿದೆ. ಈ ಸಮಯದಲ್ಲಿ ದೆಹಲಿಯ ಗರಿಷ್ಠ ತಾಪಮಾನವು 45 ಡಿಗ್ರಿ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ. ಇದು ಸಾಮಾನ್ಯಕ್ಕಿಂತ ತುಸು ಹೆಚ್ಚಾದ ತಾಪಮಾನವಾಗಿದ್ದು, ಜೂನ್ 12ರ ಬಳಿಕ ಬಿಸಿಗಾಳಿ ಹೊಡೆತ ಕಡಿಮೆಯಾಗುವ ನಿರೀಕ್ಷೆ ಇದೆ.
ಇನ್ನು ಮುಂಬೈನಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಕನಿಷ್ಠ 27ರಿಂದ 33 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.



Click it and Unblock the Notifications

