Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ರಾಜ್ಯದಲ್ಲಿ 3 ದಿನ ಭಾರೀ ಮಳೆ: ಮಂಗಳೂರಲ್ಲಿ ಭಯಂಕರ ಮಳೆ.. ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಸೈಕ್ಲೋನ್ ಎಫೆಕ್ಟ್, ಇಂದಿನಿಂದ ಮೂರು ದಿನ ಭಾರೀ ಮಳೆ. ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ. ಹೌದು, ರಾಜ್ಯದಲ್ಲಿ ಕೆಲ ವಾರಗಳಿಂದ ವರುಣಾರ್ಭಟ ಜೋರಾಗಿಯೇ ಇದೆ. ಮುಂಗಾರು ಪೂರ್ವ ಮಳೆಯಿಂದಾಗಿ ಹಲವು ಜಿಲ್ಲೆಗಳು ತತ್ತರಿಸಿ ಹೋಗಿದ್ದು, ಭಾರೀ ಹಾನಿ ಸಂಭವಿಸಿದೆ. ಇಂದು ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನೈಋುತ್ಯ ಮುಂಗಾರು ತೀವ್ರವಾಗಿದೆ. ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ಕರಾವಳಿಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಕುಮಟಾದಲ್ಲಿ ಗರಿಷ್ಠ ಮಳೆ ದಾಖಲಾಗಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನೈಋುತ್ಯ ಮುಂಗಾರು ಚುರುಕಾಗಿದ್ದು, ಎರಡು ದಿನ ಭಾರೀ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಭರ್ಜರಿ ಮಳೆಯಾಗಿದ್ದು, ಮಂಗಳೂರು ನಗರ ಪ್ರದೇಶದಲ್ಲಿ ವಿಶೇಷವಾಗಿ ಮಳೆ ಅವಾಂತರ ಸೃಷ್ಟಿಯಾಗಿದೆ. ಇಂದು (ಭಾನುವಾರ) ಬೆಳಗ್ಗೆಯೂ ನಿರಂತರವಾಗಿ ಮಳೆಯಾಗುತ್ತಿದೆ. ಮಂಗಳೂರು ನಗರದ ಪಂಪ್‌ವೆಲ್ ಸರ್ಕಲ್ ಮುಳುಗಡೆಯಾಗಿದೆ. ಭಾರೀ ಪ್ರಮಾಣದ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಸಂಪೂರ್ಣ ರಸ್ತೆ ಸಂಚಾರ ಬಂದ್ ಆಗಿದೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಸೃಷ್ಠಿಸಿದೆ. ಮಳೆ ನೀರಿನಲ್ಲೇ ಸಂಚರಿಸಲು ಯತ್ನಿಸಿ, ನಡುರಸ್ತೆಯಲ್ಲೇ ಕೆಟ್ಟು ನಿಂತಿದ್ದ ಖಾಸಗಿ ಬಸ್‌ವೊಂದನ್ನು ಸ್ಥಳೀಯರು ತಳ್ಳಿ ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ.

ಸೈಕ್ಲೋನ್ ಎಫೆಕ್ಟ್, ಈ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಸೈಕ್ಲೋನ್ ಎಫೆಕ್ಟ್‌ನಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ ಕರಾವಳಿ, ಕೊಡಗು, ಚಿಕ್ಕಮಗಳೂರು ಸೇರಿದಂತೆ 6 ಜಿಲ್ಲೆಗಳಿಗೆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು (ಭಾನುವಾರ) ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
48 ಗಂಟೆಗಳಲ್ಲಿ ಮಳೆ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕದ ಭಾಗದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದೆ. ಇಂದಿನಿಂದ ಮೂರು ದಿನಗಳ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಾಗೃತವಾಗಿರುವಂತೆ ಎಚ್ಚರಿಕೆಯನ್ನು ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಬೀದರ್, ಬೆಂಗಳೂರು, ಮೈಸೂರು ಸೇರಿದಂತೆ ಹಲವು ಭಾಗಗಳಿಗೂ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉಳಿದೆಡೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ನಾಳೆ ಕರಾವಳಿ ಜಿಲ್ಲೆಗಳಿಗೆ ಮಾತ್ರ ರೆಡ್ ಅಲರ್ಟ್
ನಾಳೆ (ಜೂನ್ 16) ಕರಾವಳಿ ಜಿಲ್ಲೆಗಳಿಗೆ ಮಾತ್ರ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಚಂಡಮಾರುತ, ವಾಯುಭಾರ ಕುಸಿತದ ಪ್ರಭಾವಗಳಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ನಾನಾ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ.
ಜೂ.17 ರಂದು 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಇನ್ನು ಜೂನ್ 17 ರಂದು ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಹಾಸನ, ಚಾಮರಾಜನಗರ, ಧಾರವಾಡ, ಬೆಳಗಾವಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ, ಉಳಿದೆಡೆ ಮಳೆ ಆಗುವ ಸಾಧ್ಯತೆ ಕಡಿಮೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 18 ರಿಂದ ಮಳೆ ಪ್ರಮಾಣದಲ್ಲಿ ಕಡಿಮೆಯಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



Click it and Unblock the Notifications

