Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
Karnataka Rain: ಈ ಜಿಲ್ಲೆಗಳಲ್ಲಿ ಜು.3ರವರೆಗೆ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ.. ಶಾಲೆಗಳಿಗೆ ರಜೆ ರಜೆ ರಜೆ!
ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಆಯಾ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಹೌದು, ದೇಶಾದ್ಯಂತ ಮುಂಗಾರು ಮಳೆಯ ಆರ್ಭಟ (Monsoon Rain) ಜೋರಾಗಿದ್ದು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಈ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರೀ ಮಳೆ ಇರಲಿದೆ. ಇದರ ಪರಿಣಾಮವಾಗಿ, ಇಂದು (ಜೂನ್ 27 ರಂದು) ಕೆಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲವು ವಾರಗಳಿಂದ ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ. ಕೆಲವು ಜಿಲ್ಲೆಗಳು ಮಳೆಯಿಂದ ತತ್ತರಿಸಿವೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಇಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಹೈ ಅಲರ್ಟ್
ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಆಯಾ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಜಿಲ್ಲೆಯಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತದ ಆತಂಕ ಎದುರಾಗಿದ್ದು, ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗದಲ್ಲಿ ಜೂನ್ 27 ರಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ
ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳಿಗೆ ರಜೆ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆ ಆರ್ಭಟ ಮುಂದುವರಿದಿದೆ. ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ವ್ಯಾಪಕ ಮಳೆ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಸಹ ಆರೆಂಜ್ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ (ಜೂನ್ 28 ರಂದು) ಸಹ ಆರೆಂಜ್ ಅಲರ್ಟ್ ನೀಡಲಾಗಿದೆ. ಜೂನ್ 29 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 30 ರಿಂದ ಮಳೆ ಪ್ರಮಾಣ ಕಡಿಮೆಯಾಗಲಿದೆ. ನಾಳೆ ಶಿವಮೊಗ್ಗ, ಕೊಡಗು, ಹಾಸನ , ಚಿಕ್ಕಮಗಳೂರು, ಬೆಳಗಾವಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಭಾಗದಲ್ಲಿ ನಿನ್ನೆ ನಿರಂತರ ಮಳೆಯಾಗಿದೆ. ಇಂದೂ ಸಹ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೂಡಿಗೆರೆ, ಶೃಂಗೇರಿ, ಕೊಟ್ಟಿಗೆಹಾರ, ಕೊಪ್ಪ, ನರಸಿಂಹರಾಜಪುರ, ಕಳಸ ಭಾಗದಲ್ಲಿ ದಿನವಿಡೀ ಧಾರಕಾರ ಮಳೆ ಸುರಿದಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ.
ಎಲ್ಲೆಲ್ಲಿ ಭಾರೀ ಮಳೆ?
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 32.3 ಮಿ. ಮೀ. ಮಳೆ ಬಿದ್ದಿದೆ. ವಿರಾಜಪೇಟೆ, ಕೊಟ್ಟಿಗೆಹಾರ, ಶೃಂಗೇರಿ, ಹುಂಚದಕಟ್ಟೆ, ಬೆಳ್ತಂಗಡಿ, ಯಲ್ಲಾಪುರ, ಕ್ಯಾಸಲ್ರಾಕ್, ಖಾನಾಪುರ, ಕೊಪ್ಪ, ಸೋಮವಾರಪೇಟೆ, ಪೊನ್ನಂಪೇಟೆ, ಸಿದ್ದಾಫುರ, ಕದ್ರಾ, ಬನವಾಸಿಯಲ್ಲಿ ಭಾರೀ ಮಳೆಯಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಉತ್ತಮ ಮಳೆಯಾಗಲಿದೆ.
ಒಟ್ಟಾರೆಯಾಗಿ, ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರವು ಜನರಿಗೆ ಸೂಚನೆ ನೀಡಿದೆ.



Click it and Unblock the Notifications

