Latest Updates
-
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ!
Karnataka Rain: ಅ.23ರವರೆಗೆ ಭಾರೀ ಮಳೆ! 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.. ದೀಪಾವಳಿಗೂ ಮಳೆ ಕಂಟಕ
ಎಚ್ಚರ.. ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆ! 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ. ಹೌದು, ದೀಪಾವಳಿ ಸಂಭ್ರಮದ ನಡುವೆಯೂ ರಾಜ್ಯದಲ್ಲಿ ಮಳೆ ಆರ್ಭಟ (Karnataka Weather) ಮುಂದುವರಿದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 23 ರವರೆಗೆ ರಾಜ್ಯಾದ್ಯಂತ ವಾಯುಭಾರ ಕುಸಿತದಿಂದಾಗಿ ವ್ಯಾಪಕ ಮಳೆಯಾಗುವ (Karnataka Rain) ನಿರೀಕ್ಷೆ ಇದೆ. ಬೆಂಗಳೂರು ನಗರದಲ್ಲಿ ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಜನರು ತೊಂದರೆ ಅನುಭವಿಸಿದರು.
ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಭಾರತಕ್ಕೆ ವ್ಯಾಪಕ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮುಂಬರುವ ವಾರದಲ್ಲಿ ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಕೇರಳ, ಕರ್ನಾಟಕ ಮತ್ತು ತಮಿಳುನಾಡು ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಸಮುದ್ರದಲ್ಲಿ ಹೆಚ್ಚಿನ ಅಲೆಗಳು ಏಳುವ ಅಪಾಯವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಆಗಾಗ ಮಳೆಯಾಗುವ (Weather News) ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಭಾರೀ ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ ಇರಲಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಭಾನುವಾರ ಬೆಳಗ್ಗೆಯಿಂದಲೇ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ರಾಮನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಬೆಳಗ್ಗೆ 4 ಗಂಟೆಗೆ ಬಿಡುಗಡೆ ಮಾಡಿದ ಮುನ್ಸೂಚನೆಯಲ್ಲಿ ಭಾರಿ ಗುಡುಗು ಮಳೆ ನಿರೀಕ್ಷಿಸಲಾಗಿದೆ.
ಅತಿ ಹೆಚ್ಚು ಮಳೆ
ಕಳೆದ 24 ಗಂಟೆಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆಯ ಪ್ರಮಾಣ ಹೀಗಿದೆ. ಹಾಸನ ಜಿಲ್ಲೆಯ ಹೆಬ್ಬಾಲೆಯಲ್ಲಿ 142.5 ಮಿ.ಮೀ., ಅರಕಲಗೂಡು 1ರಲ್ಲಿ 120.0 ಮಿ.ಮೀ. ಮತ್ತು ಕಾರ್ಲೆಯಲ್ಲಿ 112.5 ಮಿ.ಮೀ. ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ನಾಡ್ಪಾಲುವಿನಲ್ಲಿ 109.5 ಮಿ.ಮೀ. ಮತ್ತು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ 1ರಲ್ಲಿ 108.8 ಮಿ.ಮೀ. ಮಳೆ ಬಿದ್ದಿದೆ. ಈ ವಾತಾವರಣವು ಕೇರಳ, ಕರ್ನಾಟಕ ಕರಾವಳಿ, ಆಗ್ನೇಯ ಅರೇಬಿಯನ್ ಸಮುದ್ರ ಹಾಗೂ ಲಕ್ಷದ್ವೀಪದ ಮೇಲೆ ಗುರುತಿಸಲಾದ ಕಡಿಮೆ ಒತ್ತಡದ ಪ್ರದೇಶದಿಂದ ಉಂಟಾಗಿದೆ.
ಎಲ್ಲೆಲ್ಲಿ ಭಾರೀ ಮಳೆ?
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಮಧ್ಯಮ ಮಳೆ ಸಾಧ್ಯತೆ ಇದೆ. ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಬೀಳುವ ಸಂಭವವಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ದೀಪಾವಳಿಯ ದಿನವೂ ಮಳೆ
ದೀಪಾವಳಿಯ (Diwali) ಮೊದಲ ದಿನ, ಸೋಮವಾರ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಇಳಿಯಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸೋಮವಾರವೂ ಮಳೆ ಇರಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ. ಮಂಗಳವಾರದಿಂದ ಮಳೆಯ ಪ್ರಮಾಣ ಕಡಿಮೆಯಾಗುವ ನಿರೀಕ್ಷೆಯಿದೆ.



Click it and Unblock the Notifications
