Latest Updates
-
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು
Karnataka Weather: ರಾಜ್ಯದಲ್ಲಿ ಮುಂದಿನ 7 ದಿನ ಮಳೆ ಅಬ್ಬರ: ರಜೆ ಘೋಷಣೆ..ಅಲರ್ಟ್!!
ಹಲವು ದಿನಗಳಿಂದ ಬಿಡುವು ನೀಡಿದ್ದ ವರುಣ ಮತ್ತೆ ಅಬ್ಬರಿಸುತ್ತಿದ್ದಾನೆ. ರಾಜ್ಯದ ಹಲವು ಭಾಗದಲ್ಲಿ ಈಗಾಗಲೇ ಭಾರೀ ಮಳೆಯ ಆಗಮನದಿಂದ ಮತ್ತೆ ಜನಜೀವನ ಅಸ್ತವ್ಯಸ್ತವಾಗಿದೆ. ಹಾಗೆ ಶಾಲಾ ಕಾಲೇಜುಗಳಿಗೆ ಹಲವು ಕಡೆ ರಜೆ ನೀಡಲಾಗಿದೆ. ರಾಜ್ಯದಲ್ಲಿ ಮತ್ತೆ ಬಿರುಸಿನ ಗಾಳಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಹಲವು ಕಡೆ ಯೆಲ್ಲೋ ಹಾಗೂ ರೆಡ್ ಅಲರ್ಡ್ ಕೂಡ ಘೋಷಣೆಯಾಗಿದೆ.
ಕರಾವಳಿ ಕರ್ನಾಟಕ ಮತ್ತು ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಸೇರಿ ಹಲವು ಕಡೆ ಮುಂದಿನ 4ರಿಂದ 5 ದಿಗಳ ಕಾಲ ಮಳೆ ಮುಮದುವರೆಯಲಿದೆ ಎಂದು ಐಎಂಡಿ ತಿಳಿಸಿದೆ. ಹಾಗೆ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೆ ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ.

ಸುಮಾರು ಎರಡು ವಾರಗಳ ಕಾಲ ಸ್ಥಗಿತಗೊಂಡಿದ್ದ ನೈಋತ್ಯ ಮಾನ್ಸೂನ್ ಇಂದಿನಿಂದ ಮತ್ತೆ ಆರಂಭವಾಗುವ ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜೂನ್ 17ರ ವರೆಗೆ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದು ಬೆಳಗ್ಗೆಯಿಂದಲೇ ಹಲವು ಕಡೆಗಳಲ್ಲಿ ಭೀಕರ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ ಸೇರಿ ಹಲವು ಭಾಗದಲ್ಲಿ ವರುಣ ಬಿರುಸು ಪಡೆದಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಇದರ ಜೊತೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆ, ಉಡುಪಿಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಇನ್ನು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಮತ್ತು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಯಲ್ಲೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದಿಷ್ಟೇ ಅಲ್ಲದೆ ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ತುಮಕೂರು, ಮೈಸೂರು, ದಾವಣಗೆರೆ, ಹಾಸನ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಧ್ಯಮ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲಿ ಗಾಳಿಗೆ ವೇಗ ಗಂಟೆಗೆ 40ರಿಂದ 50ರ ಆಸುಪಾಸಿನಲ್ಲಿ ಇರಲಿದೆ ಎಂದು ತಿಳಿಸಲಾಗಿದೆ.
ರಾಜ್ಯದ ಹಲವು ಕಡೆ ರಜೆ ಘೋಷಣೆ
ಇನ್ನು ರಾಜ್ಯದ ಹಲವು ಭಾಗದಲ್ಲಿ ನಿನ್ನೆಯಿಂದಲೇ ಮಳೆ ಆರಂಭಗೊಂಡಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅದರಲ್ಲು ಧಾರವಾಡದಲ್ಲಿ ಬಿರುಸಿನ ಮಳೆಯಾಗುತ್ತಿರು ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜೂ.12 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದರ ನಡುವೆ ಕೊಡಗು ಜಿಲ್ಲೆಯ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗುವ ಸೂಚನೆ ಇದ್ದು, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಜೂನ್ 13ರ ವರೆಗೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಹಾಗೆ ಉಡುಪಿಯಲ್ಲೂ ಭಾರೀ ಮಳೆ ಹಿನ್ನೆಲೆ ರಜೆ ಘೋಷಣೆಯಾಗಿದೆ, ಇನ್ನು ದಕ್ಷಿಣ ಕನ್ನಡ ಶಾಲೆಗಳು ಹಾಗೂ ಉತ್ತರ ಕನ್ನಡದ ಕರಾವಳಿ ತಾಲೂಕುಗಳಿಗೆ ರಜೆ ನೀಡಲಾಗಿದೆ.



Click it and Unblock the Notifications
