Latest Updates
-
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್! -
ನವರಾತ್ರಿ ಸಂಭ್ರಮ: ಅತ್ತೆ-ಮಾವಂದಿರ ಮನೆಗೆ ಹೋಗುವಾಗ ನವದಂಪತಿಗಳು ಮರೆಯದೆ ಪಾಲಿಸಬೇಕಾದ ಶಿಷ್ಟಾಚಾರಗಳಿವು! -
ದೆಹಲಿ ಮಳೆ ಅಲರ್ಟ್: ಮನೆಯಲ್ಲಿ ನೀರು ಸೋರಿಕೆ ತಡೆಯಲು 20 ನಿಮಿಷದ ಈ ಕೆಲಸ ಮಾಡಿ! -
ಮುಂಬೈನಲ್ಲಿ ಬಿಸಿಲಿನ ಅಬ್ಬರ: ಯೆಲ್ಲೋ ಅಲರ್ಟ್ ಘೋಷಣೆ, ಆರೋಗ್ಯ ಕಾಪಾಡಿಕೊಳ್ಳಲು ಈ ಕ್ರಮಗಳನ್ನು ತಪ್ಪದೇ ಪಾಲಿಸಿ -
ವಡೋದರಾದಲ್ಲಿ ವಾಯುಪಡೆ ಮುಖ್ಯಸ್ಥರ ಗರ್ಬಾ ನೃತ್ಯ: ವೈರಲ್ ವಿಡಿಯೋದಲ್ಲಿ ಸಿಂಗ್ ಅವರ ಸರಳತೆ ನೋಡಿ! -
ಚೆನ್ನೈ ಮಳೆ ಅಲರ್ಟ್: ಹೊರಗೆ ಹೋಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ
Karnataka Weather: ರಾಜ್ಯದಲ್ಲಿ ಗಾಳಿ ಸಹಿತ ಭಾರೀ ಮಳೆಯ ಮುನ್ಸೂಚನೆ..! ಅಲರ್ಟ್ ಘೋಷಣೆ
ರಾಜ್ಯದಲ್ಲಿ ಪೂರ್ವ ಮುಂಗಾರಿನ ಅಬ್ಬರ ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿಯಲ್ಲಿ ನಿರೀಕ್ಷೆ ಮೀರಿ ಮಳೆಯಾಗುತ್ತಿದೆ. ಅದರಲ್ಲೂ ಈ ವರ್ಷ ಮುಂಗಾರು ಅವಧಿ ಮುನ್ನವೇ ಆರಂಭವಾಗುತ್ತಿದ್ದು, ಈ ಮಳೆಯಿಂದಾಗಿ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದೊಂದು ವಾರದಿಂದಲೂ ಉತ್ತಮ ಮಳೆಯಾಗುತ್ತಿದ್ದು, ಈ ಮಳೆ ಮುಂದುವರೆಯುವ ಸೂಚನೆ ಸಿಕ್ಕಿದೆ.
ಸದ್ಯ ರಾಜ್ಯದೆಲ್ಲೆಡೆ ಬಿಸಿಲ ಬೇಗೆ ಕಡಿಮೆಯಾಗಿದ್ದು, ತಾಪಮಾಣ ಇಳಿಕೆ ಕಂಡಿದೆ. ಹಾಗೆ ಜಲಾಶಯಗಳಲ್ಲೂ ನೀರಿನ ಮಟ್ಟ ಏರಿಕೆಯಾಗಿರುವುದು ರೈತರಲ್ಲೂ ಸಂತಸಕ್ಕೆ ಕಾರಣವಾಗಿದೆ. ಹಾಗೆ ಈ ಮಳೆ ಮತ್ತಷ್ಟು ದಿನ ಮುಂದುವರೆಯುವ ಸೂಚನೆ ಸಿಕ್ಕಿದೆ. ಸದ್ಯ ಮಳೆ ಮುಂದುವರೆದಿರುವುದು ಶಿವಮೊಗ್ಗ ತುಂಗಾ ಜಲಾಶಯದ ನೀರಿನ ಮಟ್ಟ ಏರಿಕೆಗೆ ಕಾರಣವಾಗಿದೆ. ಸುಮಾರು 2500 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸಾಮಾನ್ಯವಾಗಿ ಈ ಸಮಯದಲ್ಲಿ ನೀರು ಹೊರಬಿಡುವ ಪ್ರಕ್ರಿಯೆ ಇರುವುದಿಲ್ಲ. ಆದ್ರೆ ಅತ್ಯಧಿಕ ಮಳೆಯಿಂದಾಗಿ ನೀರು ಹೊರಬಿಡಲಾಗುತ್ತಿದೆ.

ರಾಜ್ಯದ ಹಲವು ಜಿಲ್ಲೆಗೆ ರೆಡ್ ಅಲರ್ಟ್
ಕಳೆದೊಂದು ವಾರದಿಂದ ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಆದ್ರೆ ಈಗ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತವಾದರೆ ಕೇರಳ, ತಮಿಳುನಾಡು, ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಇಂದು ಶಿವಮೊಗ್ಗ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯಿಂದ ಕೂಡಿರುವ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹಾಗೆ ಧಾರವಾಡ, ಗದಗ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಗೆ ಮೇ 17 ಹಾಗೂ 28ರಂದು ದಕ್ಷಿಣ ಒಳನಾಡಿದ ಹಲವು ಭಾಗದಲ್ಲಿ ಉತ್ತಮ ಮಳೆಯಾಗಲಿದ್ದು, ಇದೇ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸದ್ಯ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಸಂತಸ ತರುವಂತಿದೆ.
ಬೆಂಗಳೂರಲ್ಲೂ ಮಳೆ
ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರಿಸುತ್ತಿದೆ, ಮೊದಲ ಮಳೆಗೆ ಬೆಂಗಳೂರು ತತ್ತರಿಸಿದೆ. ಇನ್ನು ಮುಂದಿನ 2 ದಿನಗಳ ಕಾಲ ಬೆಂಗಳೂರಿನಲ್ಲೂ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಬೆಂಗಳೂರಲ್ಲಿ ಮಳೆ ಬಿಡುವು ನೀಡಿರುವುದು ರಾಜಧಾನಿ ಮಂದಿ ನಿಟ್ಟುಸಿರು ಬಿಡುವಂತೆ ಮಾಡಿದೆ.
ಕೇರಳದಲ್ಲಿ ರೆಡ್ ಅಲರ್ಟ್
ಕೇರಳದಲ್ಲಿ ಮಳೆ ಹಾಗೂ ಗಾಳಿಯ ಅಬ್ಬರ ಮತ್ತಷ್ಟು ಜೋರಾಗಿದೆ. ಅಲ್ಲಿನ 11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆ ಶೂರ್, ಇಡುಕ್ಕಿ, ಎರ್ನಾಕುಲಂ, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗ ರಜೆ ಘೋಷಿಸಲಾಗಿದೆ.
ಇನ್ನು 26 ರಂದು ಬಿಹಾರ, ಪೂರ್ವ ಮಧ್ಯಪ್ರದೇಶ, 27 ಮತ್ತು 28 ರಂದು ಹಿಮಾಚಲ ಪ್ರದೇಶ, ಮೇ 27-29 ರಂದು ಕರಾವಳಿ ಆಂಧ್ರಪ್ರದೇಶದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಈ ಸಮಯದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 50ರಿಂದ 60 ಕಿ.ಮೀ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಮೊದಲು ಮೇ 27ರಿಂದ ಮಾನ್ಸೂನ್ ಮಳೆಯ ಸೂಚನೆ ನೀಡಲಾಗಿತ್ತು, ಅದರಂತೆ ಮಳೆ ಕೂಡ ಆರಂಭಗೊಂಡಿದೆ. ಮುಂದಿನ ಒಂದು ವಾರದೊಳಗೆ ಮುಂಗಾರು ಮಳೆ ಕಾರ್ಯವೃತ್ತವಾಗುವುದು ಖಚಿತವಾಗಿದೆ.



Click it and Unblock the Notifications

