Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬೆಂಗಳೂರಿಗೆ ಬಿಗ್ ಅಲರ್ಟ್! ಆ.9 ರವರೆಗೂ ರಣಭೀಕರ ಮಳೆ.. ರಾಜ್ಯದ 29 ಜಿಲ್ಲೆಗಳಲ್ಲಿ ಹೈ ಅಲರ್ಟ್
ರಾಜ್ಯದಲ್ಲಿ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮುಂಗಾರು ಮತ್ತೆ ಚುರುಕುಗೊಂಡಿದೆ. ಆಗಸ್ಟ್ 9 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ (Karnataka Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ 29 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಹವಾಮಾನದಲ್ಲಿ ಗಮನಾರ್ಹ ಬದಲಾವಣೆ ಇರಲಿದೆ. ಬನ್ನಿ, ಇಂದು ಎಲ್ಲೆಲ್ಲಿ ಅಧಿಕ ಮಳೆಯಾಗಲಿದೆ (Karnataka Rain) ಎಂದು ತಿಳಿಯೋಣ.
ರಾಜಧಾನಿ ಬೆಂಗಳೂರಿಗೆ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕಳೆದ ಎರಡು ದಿನಗಳಿಂದಲೂ ಸಿಲಿಕಾನ್ ಸಿಟಿಯಲ್ಲಿ ಉತ್ತಮ ಮಳೆಯಾಗಿದ್ದು, ಇಂದೂ ಕೂಡ ವರುಣನ ಅಬ್ಬರ ಕಾಣಬಹುದು. ಸಾಮಾನ್ಯವಾಗಿ, ಬೆಳಗ್ಗೆ ಬಿಸಿಲಿದ್ದರೂ ಸಂಜೆ ವೇಳೆಗೆ ಮೋಡ ಕವಿದು ರಾತ್ರಿ ವೇಳೆ ಜೋರು ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿಯಲಿದೆ.

16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಹವಾಮಾನ ಇಲಾಖೆ ರಾಜ್ಯದ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವಿಜಯನಗರ, ಶಿವಮೊಗ್ಗ, ರಾಮನಗರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಸಂಜೆ ನಂತರ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.
10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಉಳಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಮಳೆ?
ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ರಾಯಲ್ಪಾಡು, ಆಗುಂಬೆ, ಜಿಕೆವಿಕೆ, ಕೃಷ್ಣರಾಜಪೇಟೆ, ಹೊಸಕೋಟೆ, ಗೌರಿಬಿದನೂರು, ಧರ್ಮಸ್ಥಳ, ಹೆಸರಘಟ್ಟ, ಬೆಳ್ತಂಗಡಿ, ಉಡುಪಿ, ಸುಳ್ಯ, ಪುತ್ತೂರು, ಮೂಡುಬಿದಿರೆ, ಕೋಟಾ, ಕಾರ್ಕಳ, ಬೀದರ್, ಭಾಗಮಂಡಲದಲ್ಲಿ ಈಗಾಗಲೇ ಉತ್ತಮ ಮಳೆ ಸುರಿದಿದೆ. ಬಂಟವಾಳ, ಟಿಜಿ ಹಳ್ಳಿ, ನಾಪೋಕ್ಲು, ಮಾಣಿ, ಮಾಗಡಿ, ಕುಂದಾಪುರ, ಕಿಬ್ಬನಹಳ್ಳಿ, ಕಳಸ, ಗೋಪಾಲ್‌ನಗರ, ಚನ್ನರಾಯಪಟ್ಟಣ, ಭದ್ರಾವತಿ, ಬೆಂಗಳೂರು ಎಚ್‌ಎಎಲ್, ಉಪ್ಪಿನಂಗಡಿ, ತಿಪಟೂರು, ಸಿದ್ದಾಪುರ, ಮಂಕಿ, ಪೊನ್ನಂಪೇಟೆ, ಕುಣಿಗಲ್, ಕೊಟ್ಟಿಗೆಹಾರ, ದೇವರಹಿಪ್ಪರಗಿ, ಕ್ಯಾಸಲ್ ರಾಕ್, ಬೇಳೂರು, ಆನವಟ್ಟಿ ಸೇರಿದಂತೆ ಹಲವೆಡೆ ಮಳೆಯಾಗಿರುವುದಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ಸತತ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಸೋಮವಾರ ಸಂಜೆ ಶುರುವಾದ ಮಳೆ ತಡರಾತ್ರಿಯವರೆಗೂ ಮುಂದುವರಿದಿದೆ.
ರಾಜ್ಯದಲ್ಲಿ ಹವಾಮಾನ ಹೇಗಿದೆ?
• ಬೆಂಗಳೂರಿನ ಎಚ್‌ಎಎಲ್ - ಗರಿಷ್ಠ 29.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.0 ಡಿಗ್ರಿ ಸೆಲ್ಸಿಯಸ್
• ಬೆಂಗಳೂರು ನಗರ - ಗರಿಷ್ಠ 29.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.2 ಡಿಗ್ರಿ ಸೆಲ್ಸಿಯಸ್
• ಕಾರವಾರ - ಗರಿಷ್ಠ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24.8 ಡಿಗ್ರಿ ಸೆಲ್ಸಿಯಸ್
• ಹೊನ್ನಾವರ - ಗರಿಷ್ಠ 30.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25.0 ಡಿಗ್ರಿ ಸೆಲ್ಸಿಯಸ್
• ವಿಜಯಪುರ - ಗರಿಷ್ಠ 30.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.0 ಡಿಗ್ರಿ ಸೆಲ್ಸಿಯಸ್
• ಬೀದರ್ - ಗರಿಷ್ಠ 30.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.0 ಡಿಗ್ರಿ ಸೆಲ್ಸಿಯಸ್
ಒಟ್ಟಾರೆಯಾಗಿ, ಮಳೆಗಾಲದ ಅರ್ಧಭಾಗ ಮುಗಿದು ಮಳೆ ನಿಲ್ಲಬಹುದು ಎಂದು ಜನರು ಭಾವಿಸಿದ್ದರು. ಆದರೆ, ಆಗಸ್ಟ್ 9 ರವರೆಗೂ ರಾಜ್ಯದಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ, ಎಲ್ಲ ಜಿಲ್ಲೆಗಳಲ್ಲೂ ಮಳೆ ಅಲರ್ಟ್ ಘೋಷಿಸಲಾಗಿದೆ.



Click it and Unblock the Notifications










