ಆರು ದಿನ ಭಾರೀ ಮಳೆ! 17 ಜಿಲ್ಲೆಗಳಿಗೆ ಹೈ ಅಲರ್ಟ್.. ಬೆಂಗಳೂರಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಳ ಭಾರೀ ಮಳೆಯಾಗುವ ಸಾಧ್ಯತೆಯಿದೆ (Karnataka Weather) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಆರು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ಉಡುಪಿಯಲ್ಲಿ ಆಗಸ್ಟ್ 15 ರಿಂದ ಮತ್ತೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ 17 ಜಿಲ್ಲೆಗಳಲ್ಲಿ ಆಗಸ್ಟ್ 17 ರವರೆಗೆ ಭಾರೀ ಮಳೆಯಾಗಲಿದೆ (Karnataka Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಸೋಮವಾರ ಬೆಳಗಿನ ಜಾವದವರೆಗೆ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ತಂಪನೆಯ ವಾತಾವರಣ ನಿರ್ಮಾಣವಾಗಿದೆ. ಇದು ಸಾರ್ವಜನಿಕ ಜೀವನದ ಮೇಲೆ ಪರಿಣಾಮ ಬೀರಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

Heavy Rain

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಿಗೆ ಗುಡುಗು ಸಹಿತ ಧಾರಾಕಾರ ಮಳೆ ನಿರೀಕ್ಷಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಂಭವವಿದೆ.

ದಕ್ಷಿಣ ಒಳನಾಡಿನಲ್ಲೂ ವ್ಯಾಪಕ ಮಳೆ

ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ ತೀವ್ರ ಮಳೆಯಿಂದಾಗಿ ಜಲಾವೃತಗೊಳ್ಳುವ ಸಾಧ್ಯತೆ ಇದೆ. ಈ ಮಳೆಯು ಕೃಷಿ ಚಟುವಟಿಕೆಗಳಿಗೆ ಅನುಕೂಲಕರವಾಗಿದ್ದರೂ, ತಗ್ಗು ಪ್ರದೇಶಗಳಲ್ಲಿ ಸಂಚಾರ ವ್ಯತ್ಯಯವಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ 16 ರವರೆಗೆ ಭಾರೀ ಮಳೆ

ಬೆಂಗಳೂರಿನಲ್ಲಿ ಆಗಸ್ಟ್ 10 ರಿಂದ 16 ರವರೆಗೆ ಭಾರೀ ಮಳೆಯಾಗುವ (Bengaluru Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಮತ್ತು ಇತರೆ ಸಮಸ್ಯೆಗಳು ಉಂಟಾಗಬಹುದು. ಈಗಾಗಲೇ ನಗರದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಹೇಗಿರಲಿದೆ ಮಳೆ?

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮತ್ತು ಉಡುಪಿಯಲ್ಲಿ ಕೆಲವು ದಿನಗಳಿಂದ ಮಳೆಯ ಪ್ರಮಾಣ ಇಳಿಮುಖವಾಗಿದೆ. ಆದರೂ, ಆಗಸ್ಟ್ 15 ರಿಂದ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ನಿರೀಕ್ಷೆಯಿದೆ. ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸ್ಥಳೀಯ ಜನರು ಸುರಕ್ಷಿತವಾಗಿರುವಂತೆ ಸೂಚನೆ ನೀಡಲಾಗಿದೆ.

ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ

ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ.

• ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು
• ಅಗತ್ಯವಿದ್ದರೆ ಸ್ಥಳೀಯ ಆಡಳಿತವನ್ನು ಸಂಪರ್ಕಿಸಬೇಕು
• ಮಳೆಯ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವುದು ಸೂಕ್ತ
• ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆಯ ಬಗ್ಗೆ ನಿರಂತರವಾಗಿ ಮಾಹಿತಿ ನೀಡಲಾಗುವುದು

ರಾಜ್ಯದ ತಾಪಮಾನ ಹೀಗಿದೆ

• ಜಿಕೆವಿಕೆ - ಗರಿಷ್ಠ 29.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್
• ಕಾರವಾರ - ಗರಿಷ್ಠ 31.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25.8 ಡಿಗ್ರಿ ಸೆಲ್ಸಿಯಸ್
• ಬೀದರ್‌ - ಗರಿಷ್ಠ 29.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.0 ಡಿಗ್ರಿ ಸೆಲ್ಸಿಯಸ್
• ಕಲಬುರಗಿ - ಗರಿಷ್ಠ 30.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.2 ಡಿಗ್ರಿ ಸೆಲ್ಸಿಯಸ್

English summary

Karnataka Weather: Heavy Rain in 17 Districts Till August 17, Yellow Alert Declared By IMD

Karnataka Weather: Heavy Rain in 17 Districts Till August 17, Yellow Alert Declared By IMD
Story first published: Monday, August 11, 2025, 9:14 [IST]
X
Desktop Bottom Promotion