Latest Updates
-
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ!
ಬೆಂಗಳೂರಿನಲ್ಲಿ 1 ವಾರ ಧಾರಾಕಾರ ಮಳೆ! 19 ಜಿಲ್ಲೆಗಳಿಗೆ ಯೆಲ್ಲೋ, ಕರವಾಳಿಗೆ ಆರೆಂಜ್ ಅಲರ್ಟ್
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು (ಆಗಸ್ಟ್ 13ರಂದು) ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ. ಇದರಿಂದ ಆಗಸ್ಟ್ 16 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳದಲ್ಲಿ ಭಾರೀ ಮಳೆಯಾಗಲಿದೆ. 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಇಂದು ಎಲ್ಲೆಲ್ಲಿ ಅಧಿಕ ಮಳೆ ಮತ್ತು ಬೆಂಗಳೂರಿನಲ್ಲಿ ಎಷ್ಟು ದಿನ ಮಳೆ (Karnataka Weather) ತಿಳಿಯೋಣ ಬನ್ನಿ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ 19ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಮತ್ತು ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 18ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಆಗಸ್ಟ್ 19ರಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ.

ಬೆಂಗಳೂರಿನಲ್ಲಿ ಒಂದು ವಾರ ಮಳೆ
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿತ್ಯವೂ (Bengaluru Rain) ಮಳೆಯಾಗುತ್ತಿದೆ. ಇಂದು ಕೂಡ ಮೋಡಕವಿದ ವಾತಾವರಣವಿದೆ. ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಮುಂದಿನ ಮೂರು ಗಂಟೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಗಾಳಿಯು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಬೆಂಗಳೂರು ನಗರ ಸೇರಿದಂತೆ ಸಾಕಷ್ಟು ಕಡೆಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಉತ್ತಮ ಮಳೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಬಹುದು. ಆಗಸ್ಟ್ 13 ರಿಂದ 18 ರವರೆಗೆ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ. ಇಂದು (ಆಗಸ್ಟ್ 13ರಂದು) ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.
ನಾಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಬೆಳಗಾವಿ, ಧಾರವಾಡ, ಗದಗ, ಮತ್ತು ಹಾವೇರಿ ಜಿಲ್ಲೆಗಳಲ್ಲಿ ಆಗಸ್ಟ್ 14 ರಿಂದ 16ರವರೆಗೆ ಭಾರೀ ಮಳೆಯಾಗಲಿದೆ. ಈ ಅವಧಿಯಲ್ಲಿ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯ ನಿರೀಕ್ಷೆಯಿದೆ.
ರಾಜ್ಯದ ತಾಪಮಾನ ಹೀಗಿದೆ
• ಜಿಕೆವಿಕೆ - ಗರಿಷ್ಠ 27.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.8 ಡಿಗ್ರಿ ಸೆಲ್ಸಿಯಸ್
• ಶಕ್ತಿನಗರ - ಗರಿಷ್ಠ 29.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.3 ಡಿಗ್ರಿ ಸೆಲ್ಸಿಯಸ್
• ಹೊನ್ನಾವರ - ಗರಿಷ್ಠ 29.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.0 ಡಿಗ್ರಿ ಸೆಲ್ಸಿಯಸ್
• ಬೀದರ್ - ಗರಿಷ್ಠ 31.0 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ
• ವಿಜಯಪುರ - ಗರಿಷ್ಠ 29.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.5 ಡಿಗ್ರಿ ಸೆಲ್ಸಿಯಸ್
• ಕೊಪ್ಪಳ - ಗರಿಷ್ಠ 30.1 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.1 ಡಿಗ್ರಿ ಸೆಲ್ಸಿಯಸ್



Click it and Unblock the Notifications
